ಚನ್ನಪಟ್ಟಣ: ಶಿಕ್ಷಣದಲ್ಲಿ ಪ್ರಗತಿ ಸಾಧಿಸಲು ಕಠಿಣ ಪರಿಶ್ರಮ ಹಾಕುವಂತೆ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ ಹಾಕಬೇಕು. ಸೋಲುಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಎಂ.ಮರಿಸ್ವಾಮಿ ಕಿವಿಮಾತು ಹೇಳಿದರು.ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಜಗತ್ತಿನ ಕ್ರೀಡಾಕ್ಷೇತ್ರದಲ್ಲಿ ಇಂದು ಸಾಧನೆ ಮಾಡಿರುವವರ ಹಿಂದೆ ಕಠಿಣ ಪರಿಶ್ರಮ ಇದೆ. ಅವರಂತೆ ವಿದ್ಯಾಥರ್ಿಗಳು ಸಹ ಕಠಿಣ ಪರಿಶ್ರಮದಿಂದ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದರು.
ನಗರಸಭಾ ಅಧ್ಯಕ್ಷ ವಾಸಿಲ್ ಆಲಿಖಾನ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಬಾಲಕಿಯರ ಕಾಲೇಜಿನ ಪ್ರಾಂಶುಪಾಲೆ ಎಸ್.ಉಮಾ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯ ಸತೀಶ್ ಬಾಬು, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ, ಸಕರ್ಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ಸುಧೀಂದ್ರ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ರವೀಂದ್ರ, ತಾಲೂಕು ಸಂಘದ ಅಧ್ಯಕ್ಷ ಎ.ಎಂ. ಆನಂದ್, ಎಂ.ಜಿ. ನಾಗರಾಜು, ಬೇವೂರು ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷೆ ಕೆ.ಟಿ. ಲಕ್ಷ್ಮಮ್ಮ, ಕಾರ್ಯದರ್ಶಿ ಅರುಣ್ ಕುಮಾರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್ ಇತರರಿದ್ದರು.
ಪೊಟೋ2ಸಿಪಿಟಿ1: ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗಣ್ಯರು ಕ್ರೀಡಾಜ್ಯೋತಿ ಸ್ವೀಕರಿಸಿದರು.