ಚಿಕ್ಕಮಗಳೂರು: ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ನಿಗಧಿ ಪಡಿಸಿದ, ಗುರಿಯನ್ನು ನಿಗಧಿತ ಅವಧಿ ಯಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಏರ್ಪಡಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ನಿಗಧಿಪಡಿಸಿರುವ ವಿವಿಧ ಯೋಜನೆ ಗಳನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಕಾಲದಲ್ಲಿ ಅವರಿಗೆ ಸೌಲಭ್ಯ ವಿತರಿಸುವ ಗುರಿ ಸಾಧಿಸಬೇಕು. ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪ್ರತಿ ಗ್ರಾಮ, ಪಟ್ಟಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳಬೇಕು. ಅವರಿಗೆ ಮೀಸಲಿಟ್ಟಿರುವ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರಿಗೆ ತಿಳಿಸಬೇಕು ಎಂದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಮಂಜುನಾಥ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. 31 ಕೆಸಿಕೆಎಂ 2