ಪಬ್ಲಿಕ್ ಪರೀಕ್ಷೆಯಲ್ಲಿ ಸಾಧನೆ: ಪ್ರಶಸ್ತಿ ನೀಡಿ ಗೌರವ

KannadaprabhaNewsNetwork |  
Published : Sep 02, 2025, 01:01 AM IST
ಚಿತ್ರ : 31ಎಂಡಿಕೆ1 : ಎಂ.ಬಿ ಹನೀಫ್ ಫೈಝಿ ರವರಿಗೆ ಮದರಸ ಸ್ವದೇಶೀ ರೈಂಜ್ ಇಶ್ಕ್ ಮಜ್ಲಿಸ್ ಕಾರ್ಯಕ್ರಮದಲ್ಲಿ ಸ್ಮಾರಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು | Kannada Prabha

ಸಾರಾಂಶ

ಎಂ. ಬಿ. ಹನೀಫ್‌ ಫೈಝಿ ಅವರಿಗೆ ಮದರಸ ಸ್ವದೇಶೀ ರೈಂಜ್‌ ಇಶ್ಕ್‌ ಮಜ್ಲಿಸ್‌ ಕಾರ್ಯಕ್ರಮದಲ್ಲಿ ಸ್ವಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಡಿಕೇರಿ: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ 2024-25ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಮಡಿಕೇರಿ ರೇಂಜ್ ಮಟ್ಟದಲ್ಲಿ 10ನೇ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದು ಸಮಸ್ತ ಸ್ಮಾರಕ ಆವಾರ್ಡ್ ಪಡೆದ ಮಡಿಕೇರಿ ಬದ್ರಿಯಾ ಹಯಾತುಲ್ ಇಸ್ಲಾಂ ಮದರಸ ರುವೈಝ್ ಹಾಗೂ ತರಗತಿ ಅಧ್ಯಾಪಕರು, ಮದರಸ ಪ್ರಾಂಶುಪಾಲ ಎಂ.ಬಿ ಹನೀಫ್ ಫೈಝಿ ಅವರಿಗೆ ಮದರಸ ಸ್ವದೇಶೀ ರೈಂಜ್ ಇಶ್ಕ್ ಮಜ್ಲಿಸ್ ಕಾರ್ಯಕ್ರಮದಲ್ಲಿ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯರು ಹಾಗೂ ಕೊಡಗು ಜಿಲ್ಲಾ ಖಾಝಿಗಳಾದ ಶೈಖುನಾ ಎಂ ಅಬ್ದುಲ್ಲ ಫೈಝಿ ಉಸ್ತಾದರಿಂದ ಪ್ರಶಸ್ತಿ ಸ್ವೀಕರಿಸಲಾಯಿತು.

-----------------------------------------

ದಸರಾ ಉದ್ಘಾಟನೆಗೆ ಆಹ್ವಾನಿಸಿದ ಕ್ರಮ ಸರಿ: ವಿಶ್ವನಾಥ್

ಕನ್ನಡಪ್ರಭ ವಾರ್ತೆ ಮಡಿಕೇರಿಐತಿಹಾಸಿಕ ಹಿನ್ನೆಲೆಯ ಮೈಸೂರು ದಸರಾ ಉತ್ಸವದ ಉದ್ಘಾಟನೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಬೂಕರ್ ಪ್ರಶಸ್ತಿಗೆ ಭಾಜನರಾದ ಬಾನು ಮುಸ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಒಂದೇ ರೀತಿಯಲ್ಲಿ ನೋಡಬೇಕಿತ್ತು. ಆ ಮೂಲಕ ದೀಪಾ ಭಾಸ್ತಿ ಅವರನ್ನು ಕೂಡ ದಸರಾ ಉದ್ಘಾಟನೆಗೆ ಕರೆಯಬೇಕಾಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಂಸದ ಅಡಗೂರು ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರಕಾರ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರನ್ನು ಆಹ್ವಾನಿಸಿದ ಕ್ರಮ ಸರಿಯಾಗಿದೆ. ಈ ಹಂತದಲ್ಲಿ ಬೂಕ‌ರ್ ವಿಜೇತೆ ದೀಪಾ ಭಾಸ್ತಿಯವರನ್ನು ಕೂಡ ಕರೆಯಬಹುದಿತ್ತು. ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದರು.ದಸರಾ ಉತ್ಸವದಂದು ಚಾಮುಂಡಿ ಬೆಟ್ಟದಲ್ಲಿ ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ಹಾಗೂ ಅರಮನೆ ಮೈದಾನದ ಕಾರ್ಯಕ್ರಮಕ್ಕೆ ಬಾನು ಮುಸ್ತಾಕ್ ಅವರೊಂದಿಗೆ ದೀಪಾ ಭಾಸ್ತಿಯವರನ್ನು ಆಹ್ವಾನಿಸಿ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿ ಎಂದು ಸಲಹೆ ನೀಡಿದರು.

ಬಹುತ್ವದ ಭಾರತದಲ್ಲಿ ಸಂವಿಧಾನವನ್ನು ಒಪ್ಪಿ ಮುನ್ನಡೆಯುತ್ತಿದ್ದೇವೆ, ಜಾಗತಿಕ ಮಟ್ಟದಲ್ಲಿ ಕನ್ನಡಕ್ಕೆ ಗೌರವ ತಂದುಕೊಟ್ಟ ಬಾನು ಮುಸ್ತಾಕ್ ಅವರು ಕನ್ನಡದ ಮಗಳೇ ಆಗಿದ್ದಾರೆ ಎಂದು ತಿಳಿಸಿದರು.ಎಸ್‌ಐಟಿ ತನಿಖೆಯನ್ನು ಶೀಘ್ರ ಮುಗಿಸಿ ಧರ್ಮಸ್ಥಳದಲ್ಲಿ ಏನಾಗಿದೆ, ಏನಾಗುತ್ತಿದೆ ಎನ್ನುವ ವಿಚಾರವನ್ನು ಜನರಿಗೆ ಸ್ಪಷ್ಟೀಕರಣ ನೀಡಬೇಕು. ಎಸ್‌ಐಟಿ ತನಿಖೆ ಚೆನ್ನಾಗಿ ನಡೆಯುತ್ತಿದ್ದು, ಎನ್‌ಐಎ ತನಿಖೆಯ ಅಗತ್ಯವಿಲ್ಲವೆಂದರು.

PREV

Recommended Stories

ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
ಕಾಳಿ ನದಿಗೆ ತ್ಯಾಜ್ಯ-ನೀರು ಶುದ್ಧೀಕರಣ ಬದಲು ಪರ್ಯಾಯ ಮಾರ್ಗ