ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವಿದ್ಯಾರ್ಥಿಗಳಲ್ಲಿ ಶ್ರದ್ಧೆ ಮತ್ತು ಆತ್ಮವಿಶ್ವಾಸವಿದ್ದಲ್ಲಿ ಸಾಧನೆ ಸುಲಭವಾಗುತ್ತದೆ. ಮಕ್ಕಳಿಗೆ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ವಿದ್ಯಾರ್ಥಿ ವೇತನ ಸಹಕಾರಿಯಾಗಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಚಿಕ್ಕಮಗಳೂರಿನ ಬಂಟರ ಯಾನೆ ನಾಡವರ ಸಂಘ ದಂಬದಹಳ್ಳಿಯಲ್ಲಿರುವ ಬಂಟರ ಭವನದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ವಿದ್ಯಾಭ್ಯಾಸದ ನಂತರ ಉನ್ನತ ಹುದ್ದೆಗಳಿಗೆ ಹೋದ ಸಂದರ್ಭದಲ್ಲಿ ನಿಮಗೆ ವಿದ್ಯಾರ್ಥಿವೇತನ ನೀಡಿದ ಬಂಟರ ಸಂಘವನ್ನು ಮರೆಯಬಾರದು. ಆರ್ಥಿಕ ವಾಗಿ ಹಿಂದುಳಿದಿದ ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಬಂಟರ ಸಂಘ ಸುಮಾರು 5 ಲಕ್ಷ ದಷ್ಟು ವಿದ್ಯಾರ್ಥಿ ವೇತನವನ್ನು ಪ್ರತಿವರ್ಷ ನೀಡುತ್ತಿದ್ದು, ಇದನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಂಡು ಮುಂದೆ ಬರಬೇಕೆಂದು ತಿಳಿಸಿದರು.
ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಪುರಂದರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ವೇತನದ ನಿಧಿಗೆ ದೇಣಿಗೆ ನೀಡಿದವರನ್ನು ಸನ್ಮಾನಿಸಲಾಯಿತು. ರೋಟರಿ ಸಂಸ್ಥೆಯಲ್ಲಿ ಕೆಲಸ ಮಾಡಿ ಈಗ ರೋಟರಿ ಸಹಾಯಕ ಗವರ್ನರ್ ಆಗಿ ಆಗಿರುವ ವಿನೋದ್‌ಕುಮಾರ್ ಶೆಟ್ಟಿ ದಂಪತಿ ಹಾಗೂ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೀಣಾ ಆರ್.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಆನಂದ್‌ಕುಮಾರ್ ಶೆಟ್ಟಿ ಸಂಘದ ನಡೆದು ಬಂದ ದಾರಿಯನ್ನು ವಿವರಿಸಿದರು. ಮೂಡಿಗೆರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ರವಿಶಂಕರ್ ಅಡ್ಯಂತಾಯ, ಕಳಸ ಬಂಟರ ಸಂಘದ ಅಧ್ಯಕ್ಷ ಕಿರನ್‌ಶೆಟ್ಟಿ, ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಬಲ್ಲಾರಿ ವಿನಯಶೆಟ್ಟಿ, ಶೃಂಗೇರಿ ತಾಲೂಕು ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಜಿಲ್ಲಾ ಬಂಟರ ಸಂಘದ ಜಿಲ್ಲಾಧ್ಯಕ್ಷ ಪುರಂದರ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಶೆಟ್ಟಿ , ಬಂಟರ ಸಂಘದ ಮಾಜಿ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.
6 ಕೆಸಿಕೆಎಂ 2ಚಿಕ್ಕಮಗಳೂರಿನ ಬಂಟರ ಯಾನೆ ನಾಡವರ ಸಂಘ ದಂಬದಹಳ್ಳಿಯಲ್ಲಿರುವ ಬಂಟರ ಭವನದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು.