ಛಲ, ಆತ್ಮಬಲದಿಂದ ಸಾಧನೆ ಸಾಧ್ಯ

KannadaprabhaNewsNetwork |  
Published : Jul 17, 2025, 12:30 AM IST
ಪೋಟೊ16ಕೆಎಸಟಿ2: ಕುಷ್ಟಗಿ ಪಟ್ಟಣದ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಿವಿಧ ಸಾಂಘೀಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಉತ್ತಮವಾದ ಗುರಿ ಇಟ್ಟುಕೊಂಡು ಶಿಕ್ಷಣ ಪಡೆದುಕೊಂಡಲ್ಲಿ ಸಾಧಿಸಲು ಅನೇಕ ಅವಕಾಶಗಳು ಲಭ್ಯವಿದೆ. ಸರ್ಕಾರ ನೀಡುವ ಸೌಲಭ್ಯ ಪಡೆದುಕೊಂಡು ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು.

ಕುಷ್ಟಗಿ:

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು. ಅಂದಾಗ ಮಾತ್ರ ಸಾಧನೆ ಸಾಧ್ಯವಾಗಲಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ದೊಡ್ಡಬಸವನಗೌಡ ಪಾಟೀಲ ಬಯ್ಯಾಪೂರ ಹೇಳಿದರು.

ಪಟ್ಟಣದ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ವಿವಿಧ ಸಾಂಘೀಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರಮವಹಿಸಿ ಶ್ರದ್ಧೆಯಿಂದ ಕಲಿತರೆ ಯಾವುದೇ ರೀತಿಯ ಸಾಧನೆ ಮಾಡಬಹುದು ಎಂದರು.ವಿದ್ಯಾರ್ಥಿಗಳು ಉತ್ತಮವಾದ ಗುರಿ ಇಟ್ಟುಕೊಂಡು ಶಿಕ್ಷಣ ಪಡೆದುಕೊಂಡಲ್ಲಿ ಸಾಧಿಸಲು ಅನೇಕ ಅವಕಾಶಗಳು ಲಭ್ಯವಿದೆ. ಸರ್ಕಾರ ನೀಡುವ ಸೌಲಭ್ಯ ಪಡೆದುಕೊಂಡು ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.ಸಂಸ್ಥೆಯ ಚೇರಮೇನ್ ದೇವೇಂದ್ರಪ್ಪ ಬಳೂಟಗಿ ಮಾತನಾಡಿ, ಇದು ಸ್ಪರ್ಧಾತ್ಮ ಯುಗವಾಗಿದ್ದು ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಏರ್ಪಟ್ಟಿದೆ. ಹೀಗಾಗಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕ ಓದುವ ಮೂಲಕ ಗುರಿ ಸಾಧನೆಯತ್ತ ಗಮನ ಹರಿಸಬೇಕು. ಅಂದಾಗ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬಹುದು ಎಂದರು.

ಪ್ರಾಂಶುಪಾಲ ಶ್ರೀಕಾಂತಗೌಡ ಪಾಟೀಲ ಮಾತನಾಡಿ, 2014ರಲ್ಲಿ 22 ವಿದ್ಯಾರ್ಥಿಗಳಿಂದ ಪ್ರಾರಂಭವಾಗ ಕಾಲೇಜಿನಲ್ಲಿ ಇಂದು 305 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ ಎಂದರು. ಈ ವೇಳೆ ವೈ.ಸಿ. ಪಾಟೀಲ್, ಡಿ.ಎಸ್. ಗೌಡರ, ರವೀಂದ್ರನಾಥ ದೊಡ್ಡಮೇಟಿ, ಅಂದಪ್ಪ ಬೀಳಗಿ, ವಿಶ್ವನಾಥ ಕನ್ನೂರ, ಮಹಾಂತೇಶ ಅರಳಲೆಮಠ, ಭೀಮನಗೌಡ ಜಾಲಿಹಾಳ, ಮಹಾಂತೇಶ ಅಗಸಿಮುಂದಿನ ಸೇರಿದಂತೆ ಕಾಲೇಜಿನ ಸಿಬ್ಬಂದಿ ಇದ್ದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ