ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ: ಜಿಲ್ಲಾಧಿಕಾರಿ

KannadaprabhaNewsNetwork |  
Published : Sep 27, 2024, 01:19 AM IST
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಒಂದು ರೋಮಾಂಚಕ ನೋಟ | Kannada Prabha

ಸಾರಾಂಶ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದವರು ಬುಧವಾರ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರು ಯುವ ಕೇಂದ್ರ ಹಾಗೂ ಜಿಲ್ಲಾ ಯುವಜನ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಮಂಗಳಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿ ಪದಕಗಳನ್ನು ಗೆಲ್ಲುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅದಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ಉತ್ತಮ ಸೌಲಭ್ಯಗಳಿವೆ ಎಂದು ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿಎಲ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್ ಕೆ., ಜಿಲ್ಲಾ ಯುವಜನ ಒಕ್ಕೂಟ ಅಧ್ಯಕ್ಷ ಸುರೇಶ್ ಸೂಡಿ ಮುಳ್ಳು, ಜಿಲ್ಲಾ ಫುಟ್ಬಾಲ್ ಎಸೋಸಿಯೇಷನ್ ಅಧ್ಯಕ್ಷ ಡಿ.ಎಂ. ಅಸ್ಲಂ, ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಭರತ್ ಕುಮಾರ್ ಮತ್ತಿತರರು ಇದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಸ್ವಾಗತಿಸಿದರು. ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದವರು ಬುಧವಾರ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!