ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸಾಧನೆ

KannadaprabhaNewsNetwork |  
Published : Mar 13, 2024, 02:07 AM IST
 ಫೋಟೋ:  11ಜಿಎಲ್‌ಡಿ2- ಶ್ರೀ  ಗುರುಸಿದ್ದೇಶ್ವರ  ಮಹಿಳಾ ಬಿ.ಎಡಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿತು.   | Kannada Prabha

ಸಾರಾಂಶ

ಗುಳೇದಗುಡ್ಡ: ಇಂದು ಮಹಿಳೆ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾಹಿತ್ಯ, ಸಂಗೀತ, ಕೃಷಿ ಹೀಗೆ ಪ್ರತಿ ರಂಗಗಳಲ್ಲಿ ಸಾಧನೆ ಮಾಡಿದ್ದಾಳೆ. ತಾಯಿಯಾಗಿ, ಮಗಳಾಗಿ, ಸೊಸೆಯಾಗಿ, ಹೆಂಡತಿಯಾಗಿ, ಕುಟುಂಬದ ಒಡತಿಯಾಗುವ ಮೂಲಕ ಉತ್ತಮ ಕುಟುಂಬ ಮತ್ತು ಸಮಾಜ ಕಟ್ಟುವಲ್ಲಿ ಅವಳ ಪಾತ್ರ ತುಂಬಾ ಮುಖ್ಯವಾಗಿದೆ. ಹೀಗಾಗಿ ಮಹಿಳೆ ಅಬಲೆಯಲ್ಲ ಸಬಲೆ ಎಂದು ಶ್ರೀ ಜಗದ್ಗುರು ಗುರುಸಿದ್ದೇಶ್ವರ ವಿದ್ಯಾವರ್ಧಕ ಮತ್ತು ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ರಾಜು ಜವಳಿ ಹೇಳಿದರು.

ಕನ್ನಡಪ್ರಭವಾರ್ತೆ ಗುಳೇದಗುಡ್ಡ

ಇಂದು ಮಹಿಳೆ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾಹಿತ್ಯ, ಸಂಗೀತ, ಕೃಷಿ ಹೀಗೆ ಪ್ರತಿ ರಂಗಗಳಲ್ಲಿ ಸಾಧನೆ ಮಾಡಿದ್ದಾಳೆ. ತಾಯಿಯಾಗಿ, ಮಗಳಾಗಿ, ಸೊಸೆಯಾಗಿ, ಹೆಂಡತಿಯಾಗಿ, ಕುಟುಂಬದ ಒಡತಿಯಾಗುವ ಮೂಲಕ ಉತ್ತಮ ಕುಟುಂಬ ಮತ್ತು ಸಮಾಜ ಕಟ್ಟುವಲ್ಲಿ ಅವಳ ಪಾತ್ರ ತುಂಬಾ ಮುಖ್ಯವಾಗಿದೆ. ಹೀಗಾಗಿ ಮಹಿಳೆ ಅಬಲೆಯಲ್ಲ ಸಬಲೆ ಎಂದು ಶ್ರೀ ಜಗದ್ಗುರು ಗುರುಸಿದ್ದೇಶ್ವರ ವಿದ್ಯಾವರ್ಧಕ ಮತ್ತು ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ರಾಜು ಜವಳಿ ಹೇಳಿದರು.

ಅವರು ಸೋಮವಾರ ಪಟ್ಟಣದ ಶ್ರೀ ಜಗದ್ಗುರು ಗುರುಸಿದ್ದೇಶ್ವರ ಮಹಿಳಾ ಶಿಕ್ಷಣ (ಬಿ.ಎಡ್)ಮಹಾವಿದ್ಯಾಲಯದಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನೀವು ಭಾವಿ ಶಿಕ್ಷಕರಾಗುವವರು ತಾವು ಕುಟುಂಬದ ಜೊತೆಗೆ ಶಾಲಾ ಶಿಕ್ಷಕರಾಗಿ ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲ ರಂಗದಲ್ಲಿ ನಿಮ್ಮ ಪಾತ್ರ ಬಹು ಮಹತ್ವದ್ದಾಗಿದೆ ಎಂದು ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಭುವನೇಶ್ವರಿ ಬಡಿಗೇರ ಮಹಿಳೆ ಬೆಳೆದು ಬಂದ ಬಗೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಎಸ್.ಘಂಟಿ ಮಾತನಾಡಿದರು. ಶ್ರೀ ಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠದ ಶ್ರೀಗಳಾದ ಗುರುಬಸವ ದೇವರು ಸಾನ್ನಿಧ್ಯ ವಹಿಸಿ ಮಾತನಾಡಿ, ತೊಟ್ಟಿಲ ತೂಗುವ ಕೈ ಜಗತ್ತನ್ನೆ ಆಳಬಲ್ಲದು ಹಾಗೆ ಮಹಿಳಾ ಪ್ರಶಿಕ್ಷಣಾರ್ಥಿಗಳಾದ ತಾವು ಕುಟುಂಬ, ಸಮಾಜದಲ್ಲಿ ನಿಮ್ಮ ಪಾತ್ರ ಹಿರಿದಾಗಿದೆ ಎಂದರು.

ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಉಪನ್ಯಾಸಕಿಯರಾದ ಸರಿತಾ ಚಂದನ್ನವರ, ಬಿ.ಎ.ನದಾಫ್, ಸಕ್ಕೂಭಾಯಿ ನೆಲ್ಲೂರ, ಗ್ರಂಥಪಾಲಕ ವಿ.ಕೆ.ಬದಿ. ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಇದ್ದರು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ