ಮಕ್ಕಳಿಗೆ ತರಬೇತಿ ನೀಡಿದರೆ ಸಾಧನೆ ಸಾಧ್ಯ: ಗುರ್ಮೆ ಸುರೇಶ್ ಶೆಟ್ಟಿ

KannadaprabhaNewsNetwork |  
Published : Aug 25, 2026, 03:15 AM IST
23ಸೌರಭ | Kannada Prabha

ಸಾರಾಂಶ

ನಾವು ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಡುವಲ್ಲಿ ಸೋತಿದ್ದೇವೆ. ಪ್ರತೀ ಮಗುವಿನಲ್ಲಿಯೂ ಸುಪ್ತ ಪ್ರತಿಭೆಗಳಿರುತ್ತವೆ. ಮಕ್ಕಳೇ ನಮ್ಮ ಸಾಂಸ್ಕೃತಿಕ ಪರಂಪರೆಯ ವಾರೀಸುದಾರರು. ಅವರ ಪ್ರತಿಭೆಗೆ ತಕ್ಕಂತೆ ತರಬೇತಿ ನೀಡಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನುಡಿದರು.

ಕಾಪು: ನಾವು ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಡುವಲ್ಲಿ ಸೋತಿದ್ದೇವೆ. ಪ್ರತೀ ಮಗುವಿನಲ್ಲಿಯೂ ಸುಪ್ತ ಪ್ರತಿಭೆಗಳಿರುತ್ತವೆ. ಮಕ್ಕಳೇ ನಮ್ಮ ಸಾಂಸ್ಕೃತಿಕ ಪರಂಪರೆಯ ವಾರೀಸುದಾರರು. ಅವರ ಪ್ರತಿಭೆಗೆ ತಕ್ಕಂತೆ ತರಬೇತಿ ನೀಡಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನುಡಿದರು.

ಇಲ್ಲಿನ ಶಿರ್ವ ಹಿಂದೂ ಪ್ರೌಢ ಶಾಲಾ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2026 - 27ನೇ ಸಾಲಿನ "ಸಾಂಸ್ಕೃತಿಕ ಸೌರಭ " ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರ್ವಧಕ ಸಂಘದ ಅಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ್ ಶೆಟ್ಟಿ ವಹಿಸಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ವಸಂತಿ, ಪ. ಪೂ ಕಾಲೇಜಿನ ಪ್ರಾಂಶುಪಾಲೆ ಸುಜಾತಾ ವೇದಿಕೆಯಲ್ಲಿದ್ದರು. ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ತೇಜಸ್ ಬಂಗೇರಾ ವಂದಿಸಿದರು. ರಾಮಾಂಜಿ ಉಡುಪಿ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು.ಜಿಲ್ಲೆಯ ಆಯ್ದ 9 ಕಲಾ ತಂಡಗಳ 85 ಕಲಾವಿದರು ಈ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಟಿ ವೃಕ್ಷ ಅಭಿಯಾನದಿಂದ ಅರಣ್ಯ ಪ್ರದೇಶ ಶೇ.2.4ಕ್ಕೆ ಏರಿಕೆ: ಪ್ರಶಾಂತ.ಪಿ.ಕೆ.ಎಂ
ಸಾಧನೆಗೆ ಆತ್ಮವಿಶ್ವಾಸವೇ ಶಿಖರ: ಮಂಗಳಾನಾಥನಂದಜೀ ಮಹಾರಾಜ್