ವಿದ್ಯಾರ್ಥಿಗಳ ಶಿಸ್ತು, ಬದ್ಧತೆಯಿಂದಲೇ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ: ಡಾ.ರವೀಶ್‌ ತುಂಗಾ

KannadaprabhaNewsNetwork |  
Published : Sep 06, 2026, 03:00 AM IST
ಡಾ.ರವೀಶ್‌ ತುಂಗಾ ಅವರನ್ನು ಸನ್ಮಾನಿಸಲಾಯಿತು | Kannada Prabha

ಸಾರಾಂಶ

ಎಕ್ಸ್‌ಪರ್ಟ್‌ ಕಾಲೇಜಿನ ವಿದ್ಯಾರ್ಥಿಗಳಲ್ಲಿರುವ ಶಿಸ್ತು, ಬದ್ಧತೆಯಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮವಾದ ಸಾಧನೆಯನ್ನು ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಪರಿಶ್ರಮಪಟ್ಟರೆ ಉತ್ತಮ ಫಲಸಿಗುತ್ತದೆ. ಓದಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಪಾರವಾದ ಪ್ರಯತ್ನದಿಂದ ಗೆಲುವು ಸಾಧ್ಯ ಎಂದು ಡಾ.ತುಂಗಾಸ್ ಮನಸ್ವಿನಿ ಆಸ್ಪತ್ರೆಯ ಅಧ್ಯಕ್ಷ ಡಾ.ರವೀಶ್ ತುಂಗಾ ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಎಕ್ಸ್‌ಪರ್ಟ್‌ ಕಾಲೇಜಿನ ವಿದ್ಯಾರ್ಥಿಗಳಲ್ಲಿರುವ ಶಿಸ್ತು, ಬದ್ಧತೆಯಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮವಾದ ಸಾಧನೆಯನ್ನು ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಪರಿಶ್ರಮಪಟ್ಟರೆ ಉತ್ತಮ ಫಲಸಿಗುತ್ತದೆ. ಓದಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಪಾರವಾದ ಪ್ರಯತ್ನದಿಂದ ಗೆಲುವು ಸಾಧ್ಯ ಎಂದು ಡಾ.ತುಂಗಾಸ್ ಮನಸ್ವಿನಿ ಆಸ್ಪತ್ರೆಯ ಅಧ್ಯಕ್ಷ ಡಾ.ರವೀಶ್ ತುಂಗಾ ಹೇಳಿದರು.

ಅವರು ಮಂಗಳೂರಿನ ಎಕ್ಸ್‌ಪರ್ಟ್‌ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕೂಟಕ್ಕಳ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಾ.ರವೀಶ್ ತುಂಗಾ ಅವರನ್ನು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಜೀವಮಾನದ ಸಾಧನೆಗಾಗಿ ಕಾರ್ಯಕ್ರಮದಲ್ಲಿ ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ಇಲ್ಲಿನ ಉಪನ್ಯಾಸಕರ ಮತ್ತು ಪ್ರೊಫೆಸರ್‌ಗಳ ಪರಿಶ್ರಮ ಅಪಾರವಿದೆ. ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ೮೩೩ ಮಂದಿ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಅರ್ಹತೆಯನ್ನು ಪಡೆದಿರುವುದು ದೊಡ್ಡ ದಾಖಲೆಯಾಗಿದೆ ಎಂದರು.

ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್.ನಾಯಕ್ ಮಾತನಾಡಿ, ಶಿಕ್ಷಕರಾಗುವುದು ಸುಲಭವಾದ ಕೆಲಸವಲ್ಲ, ಒಂದೂವರೆ ತಾಸು ತರಗತಿಯನ್ನು ನಡೆಸಲು ಮೂರು ತಾಸುಗಳಷ್ಟು ಪೂರ್ವ ತಯಾರಿಯನ್ನು ನಡೆಸುತ್ತಾರೆ. ವಿದ್ಯಾರ್ಥಿಗಳು ಸೇರಿದಂತೆ ಸಮಾಜ ಶಿಕ್ಷಕರನ್ನು ಗೌರವಿಸಬೇಕು ಎಂದರು.

ಕೋಚಿಂಗ್ ಹೆಡ್ ಮತ್ತು ಕನ್ನಡ ಉಪನ್ಯಾಸಕ ಕರುಣಾಕರ ಬಳ್ಕೂರು ಅನುಭವ ಹಂಚಿಕೊಂಡರು.

ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಮಾಹಿತಿ-ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್.ನಾಯಕ್, ವಾಸ್ತುಶಿಲ್ಪ ತಜ್ಞೆ ದೀಪಿಕಾ ಎ.ನಾಯಕ್, ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್, ಶೈಕ್ಷಣಿಕ ಸಮಿತಿಯ ಸದಸ್ಯ ಮತ್ತು ಗಣಿತ ವಿಭಾಗದ ಉಪನ್ಯಾಸಕ ಪ್ರೊ.ವಿನಯ್ ಕುಮಾರ್, ಕೋಚಿಂಗ್ ಸಹಾಯಕ, ಹಿಂದಿ ವಿಭಾಗದ ಉಪನ್ಯಾಸಕ ಪ್ರಮೋದ್ ಕಿಣಿ

ಮತ್ತಿತರರು ಇದ್ದರು.ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾಯಿರಾಜ್ ಕೆ ಘೋಗರೆ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಿಯಾನ ಪಿ.ಬೇಕಲ್ ವಂದಿಸಿದರು. ವಿದ್ಯಾರ್ಥಿಗಳಾದ ಖುಷಿ ಸಿಂಗ್ ಮತ್ತು ಶ್ರೇಯಾ ಹೆಗಡೆ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತ್ತಾವರ ವಾರ್ಡ್‌ನಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ
ಹಿರಿಯರನ್ನು ಗೌರವಿಸುವುದು ಸತ್ಸಂಪ್ರದಾಯ: ಪ್ರೊ‌.ಶ್ರೀಕೃಷ್ಣ ಭಟ್