ಚನ್ನಪಟ್ಟಣ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿದ್ದು ಅದರಲ್ಲೂ ಹೆಣ್ಣುಮಕ್ಕಳೆ ಹೆಚ್ಚು ಸಾಧನೆ ಮಾಡಿರುವುದು ಶ್ಲಾಘನೀಯ. ಹೆಣ್ಣು ಎಂದರೆ ಬಹಳ ಹಿಂದೆ ಕೀಳರಿಮೆಯಿಂದ ನೋಡುತ್ತಿದ್ದ ಕಾಲ ಹೋಗಿ ಇಂದು ಹೆಣ್ಣುಮಕ್ಕಳಿಗೆ ಸಮಾಜದಲ್ಲಿ ಉತ್ತಮ ಸ್ಥಾನಗಳು ಸಿಗುತ್ತಿದ್ದು, ಎಲ್ಲಾ ಕ್ಷೇತ್ರದಲ್ಲೂ ಹೆಣ್ಣುಮಕ್ಕಳು ಸಾಧನೆ ಮಾಡುತ್ತಿದ್ದಾರೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ತಿಳಿಸಿದರು.
ಗೌಡಗೆರೆ ಚಾಮುಂಡೇಶ್ವರಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಮಲ್ಲೇಶ್ ಗುರೂಜಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಬಳಿ ಉತ್ತಮ ಭವಿಷ್ಯದ ಮೊದಲ ಬಾಗಿಲು ತೆರೆದುಕೊಳ್ಳುತ್ತದೆ. ವಿದ್ಯಾರ್ಥಿಗಳಲ್ಲಿ ಅಚಲ ವಿಶ್ವಾಸವಿದ್ದಾಗ ಏನು ಬೇಕಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಡಾ. ಟಿ.ವಿ. ಶಂಕರ್ ಮಾತನಾಡಿ, ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ ಆಕಸ್ಮಿಕವಾಗಿ ಸಾವುಗಳು ಹೆಚ್ಚಾಗಿದ್ದು, ವಿದ್ಯಾರ್ಥಿ ದಿಸೆಯಲ್ಲೇ ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳು ಮತ್ತು ವ್ಯಾಯಾಮಗಳನ್ನು ಅಳವಡಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.ಡಾ. ರಾಜಶ್ರೀ ಮಾತನಾಡಿ, ಇಂದು ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯವಾಗಿದೆ. ದ್ವಿತ್ಪಿಯ ಪಿಯುಸಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಿನಗಳ ಸಾಕಷ್ಟು ಸವಾಲುಗಳನ್ನು ಒಡ್ಡುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಚಿಂತನೆ ಮಾಡಿ ಹೆಜ್ಜೆ ಇಡಬೇಕು ಎಂದರು.
ಪೊಟೋ೨೮ಸಿಪಿಟಿ೧: