2025ರ ಮಿನಿ ಒಲಂಪಿಕ್ಸ್‌ನಲ್ಲಿ ಮಾಗಡಿ ಕುಸ್ತಿಪಟುಗಳ ಸಾಧನೆ

KannadaprabhaNewsNetwork |  
Published : Nov 05, 2025, 01:03 AM IST
4ಕೆಆರ್ ಎಂಎನ್ 6.ಜೆಪಿಜಿಮಿನಿ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕಿಶನ್ ಹಾಗೂ ಜೀವನ್ ಅವರಿಗೆ  ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ, ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಮಹಾ ಕಾರ್ಯದರ್ಶಿ ಅನಂತರಾಜು ಅಭಿನಂದನೆ ಸಲ್ಲಿಸಿದರು. | Kannada Prabha

ಸಾರಾಂಶ

ಮಾಗಡಿ: ಪಟ್ಟಣದ ಸರಸ್ವತಿ ವಿದ್ಯಾಮಂದಿರ ಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಸ್ತಿಪಟುಗಳಾದ ಕಿಶನ್.ವಿ.ಎನ್ ಹಾಗೂ ಜೀವನ್ ಗೌಡ 2025ರ ಮಿನಿ ಒಲಂಪಿಕ್ಸ್ ನ ಕುಸ್ತಿ ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕ ಪಡೆದಿದ್ದಾರೆ.

ಮಾಗಡಿ: ಪಟ್ಟಣದ ಸರಸ್ವತಿ ವಿದ್ಯಾಮಂದಿರ ಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಸ್ತಿಪಟುಗಳಾದ ಕಿಶನ್.ವಿ.ಎನ್ ಹಾಗೂ ಜೀವನ್ ಗೌಡ 2025ರ ಮಿನಿ ಒಲಂಪಿಕ್ಸ್ ನ ಕುಸ್ತಿ ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕ ಪಡೆದಿದ್ದಾರೆ.

ನ.2ರಿಂದ 9ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ವತಿಯಿಂದ ಕರ್ನಾಟಕ ಕುಸ್ತಿ ಸಂಘದ ಸಹಯೋಗದೊಂದಿಗೆ ಆಯೋಜಿಸಿದ್ದ 15 ವರ್ಷದೊಳಗಿನವರ 2025ರ ನಾಲ್ಕನೇ ಮಿನಿ ಒಲಂಪಿಕ್ಸ್ ಕ್ರೀಡಾಕೂಟದ ಕುಸ್ತಿ ಕ್ರೀಡೆಯಿಂದ ಗ್ರೀಕೋ ರೋಮನ್ ಶೈಲಿಯಲ್ಲಿ 85 ಕೆಜಿ ವಿಭಾಗದಿಂದ ವಿ.ಎನ್.ಕಿಶನ್ ಹಾಗೂ 57ಕೆಜಿ ವಿಭಾಗದಿಂದ ಜೀವನ್ ಗೌಡ ಕಂಚಿನ ಪದಕವನ್ನು ಗಳಿಸುವ ಮೂಲಕ ಜಿಲ್ಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ಎಸ್.ನಾಗೇಶ್ ತಿಳಿಸಿದ್ದಾರೆ.

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ, ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಮಹಾ ಕಾರ್ಯದರ್ಶಿ ಅನಂತರಾಜು ಅವರು ಮಿನಿ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕಿಶನ್ ಹಾಗೂ ಜೀವನ್ ಅವರಿಗೆ ಅಭಿನಂದನೆ ತಿಳಿಸಿದರು.

ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಎಲ್ಲಾ ಶಿಕ್ಷಕರು, ಬಮೂಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್, ಶಾಸಕ ಎಚ್‌.ಸಿ.ಬಾಲಕೃಷ್ಣ, ಸಂಸದ ಡಾ.ಮಂಜುನಾಥ್, ಮಾಜಿ ಶಾಸಕ ಎ.ಮಂಜುನಾಥ್, ಸಮಾಜ ಸೇವಕರಾದ ಡಾ.ಎಚ್.ಎಂ.ಕೃಷ್ಣಮೂರ್ತಿ, ಎ.ಎಚ್.ಬಸವರಾಜ್, ಸಾಮ್ರಾಟ್ ಗೌಡ ಸೇರಿದಂತೆ ಅನೇಕರು ಶುಭ ಕೋರಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕುಸ್ತಿ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಿವಾಸ್, ತಾಂತ್ರಿಕ ತರಬೇತಿ ಛೇರ್ಮನ್ ವಿನೋದ್, ಕಚೇರಿಯ ಸಿಇಒ ನಾಗೇಶ್ ಮತ್ತಿತರರು ಹಾಜರಿದ್ದರು.

4ಕೆಆರ್ ಎಂಎನ್ 6.ಜೆಪಿಜಿ

ಮಿನಿ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕಿಶನ್ ಹಾಗೂ ಜೀವನ್ ಅವರಿಗೆ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ, ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಮಹಾ ಕಾರ್ಯದರ್ಶಿ ಅನಂತರಾಜು ಅಭಿನಂದನೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ