- ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಸಚಿವ ಸಂತೋಷ್ ಲಾಡ್ ಹೇಳಿಕೆ । ಸಿನಿಮಾ ಟಿಕೆಟ್ ಮೇಲೆ ಸೆಸ್‌ಗೆ ಸಿಎಂ ಜತೆ ಚರ್ಚೆ - - -
ನಗರದ ದೊಡ್ಡ ಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಶನಿವಾರ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿ.ಪಂ. ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು, ಸಂಪನ್ಮೂಲ ಕ್ರೋಡೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025 ಜಾರಿ ಮಾಡಲಾಗುವುದು ಎಂದು ಹೇಳಿದರು.ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್ ಮಾರಾಟವಾಗುತ್ತವೆ. ಟಿಕೆಟ್ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ರಚಿಸಲಾಗಿದೆ. ಮನೆಗೆಲಸದ ಕಾರ್ಮಿಕರ ಕಲ್ಯಾಣಕ್ಕೆ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲ ಅಧಿನಿಯಮಗಳ ನಿಯಾವಳಿ ರೂಪಿಸುವ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದರು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಸಚಿವ ಲಾಡ್ ತಮ್ಮ ಇಲಾಖೆ ಮುಖಾಂತರ ಅನೇಕ ಜನ ಕಲ್ಯಾಣ ಯೋಜನೆ ಜಾರಿಗೊಳಿಸುತ್ತಿದ್ದಾರೆ. ಕಾರ್ಮಿಕ ಇಲಾಖೆಗಷ್ಟೆ ಕಾರ್ಮಿಕ ದಿನಾಚರಣೆ ಲಾಡ್ ಸಚಿವರಾದ ನಂತರ ಮೇ 1ರಂದು ಎಲ್ಲ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.
ಕಾರ್ಮಿಕ ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಶಿಂದಿಹಟ್ಟಿ, ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ ಕಾರ್ಯಕ್ರಮ ನಡೆಸಿಕೊಟ್ಟರು. ಚೇತನ್ ಸಂಗಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಅಪಘಾತದಿಂದ ಮೃತಪಟ್ಟ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮಗೆ ₹5 ಲಕ್ಷ ಪರಿಹಾರಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ₹10 ಸಾವಿರ ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.- - -
- ಸಂತೋಷ ಲಾಡ್, ಕಾರ್ಮಿಕ ಸಚಿವ
- - --12ಕೆಡಿವಿಜಿ13.ಜೆಪಿಜಿ: