ಸಾಧನಾ ಸಮಾವೇಶದ ಯಶಸ್ಸಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಶಿವಾನಂದ ಪಾಟೀಲ

KannadaprabhaNewsNetwork |  
Published : Feb 07, 2026, 03:00 AM IST
ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಹಾವೇರಿ ನಗರದಲ್ಲಿ ಫೆ. 14ರಂದು ನಡೆಯಲಿರುವ ರಾಜ್ಯ ಮಟ್ಟದ ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣಾ ಸಮಾವೇಶದಲ್ಲಿ 1.20 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಯಾವುದೇ ವ್ಯತ್ಯಯವಾಗದಂತೆ ಅತ್ಯಂತ ವ್ಯವಸ್ಥಿತವಾಗಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚಿಸಿದರು.

ಹಾವೇರಿ: ನಗರದಲ್ಲಿ ಫೆ. 14ರಂದು ನಡೆಯಲಿರುವ ರಾಜ್ಯ ಮಟ್ಟದ ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣಾ ಸಮಾವೇಶದಲ್ಲಿ 1.20 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಯಾವುದೇ ವ್ಯತ್ಯಯವಾಗದಂತೆ ಅತ್ಯಂತ ವ್ಯವಸ್ಥಿತವಾಗಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚಿಸಿದರು.

ಸ್ಥಳೀಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಕಂದಾಯ ಇಲಾಖೆ ಲಕ್ಷ ಹಕ್ಕಪತ್ರ ವಿತರಣೆ ಸಮಾವೇಶದ ಕುರಿತು ರಚಿಸಲಾದ ಸಮಿತಿಗಳ ವಿವಿಧ ಸಮಿತಿಗಳ ಅಧ್ಯಕ್ಷರ ಹಾಗೂ ಸದಸ್ಯ ಕಾರ್ಯದರ್ಶಿಗಳ ಸಭೆ ನಡೆಸಿ, ವೇದಿಕೆ, ಹೆಲಿಪ್ಯಾಡ್ ನಿರ್ಮಾಣ ಸೇರಿದಂತೆ ವಿವಿಧ ಕೆಲಸಗಳ ಮಾಹಿತಿ ಪಡೆದ ಅವರು, ಸಮಾವೇಶಕ್ಕೆ ಬರುವ ಫಲಾನುಭವಿಗಳಿಗೆ ಊಟ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದರು.

ವಾಹನಗಳ ನಿಲುಗಡೆ, ಊಟದ ಕೌಂಟರ್, ಶೌಚಾಲಯ ಸೌಲಭ್ಯದ ಕುರಿತು ಅಲ್ಲಿಲ್ಲಿ ಸೂಚನಾ ಫಲಕಗಳನ್ನು ಅಳಡಿಸಬೇಕು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಫಲಾನುಭವಿಗಳಿಗೆ ವ್ಯವಸ್ಥಿತವಾಗಿ ಹಕ್ಕುಪತ್ರಗಳನ್ನು ವಿತರಣೆ ಮಾಡಲು ನೇಮಕ ಮಾಡಲಾದ ನೋಡಲ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕು. ಫಲಾನುಭವಿಗಳ ವಾಹನ ನಿಲುಗಡೆ, ಆಸನ ವ್ಯವಸ್ಥೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಸಮಾವೇಶದ ಕುರಿತು ಕೈಗೊಳ್ಳಲಾದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಬ್ಯಾಡಗಿ ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಶಾಸಕ ಯಾಸೀರ ಅಹ್ಮದಖಾನ ಪಠಾಣ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರ ಶ್ರೀಗಳ ಜ್ಞಾನಮಾರ್ಗ ನಮಗೆ ಆದರ್ಶ
ಮುಂದಿನ ಪೀಳಿಗೆ ಧರ್ಮವಂತರಾಗಿಸೋದೆ ಜೈನ ಧರ್ಮದ ಉದ್ದೇಶ: ಜೈನಮುನಿ ಕುಲರತ್ನಭೂಷಣ ಮಹಾರಾಜರು