ಕನ್ನಡಪ್ರಭ ವಾರ್ತೆ ಬೆಂಗಳೂರು:
ಗೃಹ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರ ನಿಯೋಜನೆಯಿಂದ ಶಾಲೆಗಳಲ್ಲಿ ಸರಿಯಾಗಿ ಪಾಠ ನಡೆಯುತ್ತಿಲ್ಲ. ಎಸ್‌ಐಆರ್ ಕಾರ್ಯ ವಿಳಂಬವಾಗುತ್ತಲೇ ಇದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಮಕ್ಕಳ ಫಲಿತಾಂಶದ ಮೇಲೂ ಪರಿಣಾಮ ಬೀರುವ ಆತಂಕವಿದೆ. ಶಿಕ್ಷಕರನ್ನು ಎಸ್‌ಐಆರ್ ಪ್ರಕ್ರಿಯೆಯಿಂದ ಹೊರಗಿಡಿ ಎಂದು ಚುನಾವಣೆ ಆಯೋಗಕ್ಕೆ ಪತ್ರ ಬರೆದಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಚುನಾವಣಾ ಆಯೋಗ ಮಾನವೀಯತೆ ಇಲ್ಲದಂತೆ ವರ್ತಿಸುತ್ತಿದೆ ಎಂದು ಹೇಳಿದರು.
ಇನ್ನೂ ಮುಂದೆ ಹೀಗಾಗಬಾರದು. ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ, ಶಿಕ್ಷಕರನ್ನು ಅನ್ಯ ಕೆಲಸಗಳಿಗೆ ಬಳಸಿಕೊಳ್ಳುವುದು ನಿಲ್ಲಬೇಕು. ಇದಕ್ಕಾಗಿ ಹೊಸ ವಿಧೇಯಕ ಸಿದ್ಧಪಡಿಸುತ್ತಿದ್ದೇವೆ. ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿಧೇಯಕವನ್ನು ಹೇಗೆ ರೂಪಿಸಬೇಕು ಎಂಬುದರ ಕುರಿತು ಚರ್ಚಿಸಿದ್ದೇನೆ. ಸಚಿವ ಸಂಪುಟದ ಮುಂದೆ ತಂದು, ಮುಂದಿನ ದಿನಗಳಲ್ಲಿ ಅಧಿವೇಶನದಲ್ಲಿ ಬಿಲ್ ಜಾರಿಗೆ ತರುವ ಪ್ರಯತ್ನ ಮಾಡುತ್ತೇವೆ ಎಂದು ಎಂದರು.ಮಕ್ಕಳಿಂದ ಉತ್ತಮ ಫಲಿತಾಂಶ ಬರಲು ಶಿಕ್ಷಕರ ಪರಿಣಾಮಕಾರಿ ಬೋಧನೆಯೇ ಪ್ರಮುಖ ಕಾರಣ. ಆದರೆ, ಹಲವು ವರ್ಷಗಳಿಂದ ಜಾತಿ ಗಣತಿ, ವಿವಿಧ ಸರ್ವೇ ಸೇರಿದಂತೆ ಹಲವು ಕೆಲಸಗಳಿಗೆ ಶಿಕ್ಷಕರನ್ನೇ ಬಳಸಿಕೊಳ್ಳುವ ವ್ಯವಸ್ಥೆ ನಿರ್ಮಾಣವಾಗಿದೆ. ಇದನ್ನು ಬದಲಾಯಿಸಲೇಬೇಕಿದೆ. ಎಸ್‌ಐಆರ್ ಕರ್ತವ್ಯದಿಂದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಾಲಾ ಮಕ್ಕಳು ಮತ್ತು ಪೋಷಕರಿಂದ ದೂರುಗಳು ಬರುತ್ತಿವೆ. ಶಾಲೆಯಲ್ಲಿ ಶಿಕ್ಷಕರೇ ಇಲ್ಲ, ಮಧ್ಯಾಹ್ನದ ಊಟದ ಬಳಿಕ ಮಕ್ಕಳನ್ನು ಮನೆಗೆ ಕಳುಹಿಸಲಾಗುತ್ತಿದೆ ಎಂಬಂತಹ ದೂರುಗಳೂ ಬಂದಿವೆ. ಇಂತಹ ಪರಿಸ್ಥಿತಿ ಮುಂದುವರಿಯಬಾರದು ಎಂದು ಅವರು ಹೇಳಿದರು.‘ಶೂ-ಸಾಕ್ಸ್ ಗುಣಮಟ್ಟ ಕಳಪೆ ಆರೋಪ ಸುಳ್ಳು’:ಶಾಲಾ ಮಕ್ಕಳಿಗೆ ಈ ಬಾರಿ ಕಳಪೆ ಗುಣಮಟ್ಟದ ಶೂ, ಸಾಕ್ಸ್ ವಿತರಿಸಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾದುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶೂ-ಸಾಕ್ಸ್ ಅಳತೆಯಲ್ಲಿ ವ್ಯತ್ಯಾಸ:ಕೆಲವೆಡೆ ಮಕ್ಕಳಿಗೆ ಶೂ, ಸಾಕ್ಸ್‌ಗಳ ಅಳತೆಯಲ್ಲಿ ವ್ಯತ್ಯಾಸವಾಗಿದೆ. ಮತ್ತೆ ಶೂ, ಸಾಕ್ಸ್ ಶಾಲೆಗಳಿಗೆ ತಲುಪಿಸುವಲ್ಲೂ ವಿಳಂಬವಾಗಿರುವುದನ್ನು ಒಪ್ಪಿಕೊಳ್ಳುತ್ತೇನೆ. ಆಗ ನಾನು ಸಚಿವನಾಗಿರಲಿಲ್ಲ. ಯಾವ ಮಕ್ಕಳಿಗೆ ಸೈಜ್ ಸಮಸ್ಯೆ ಇದೆಯೋ ಅಂತಹ ಮಕ್ಕಳಿಗೆ ಬೇರೆ ಶೂ ಮತ್ತು ಸಾಕ್ಸ್ ವಿತರಿಸುವಂತೆ ಸೂಚಿಸಲಾಗಿದೆ ಎಂದರು.