ಕನ್ನಡಪ್ರಭ ವಾರ್ತೆ ಮಂಗಳೂರು
ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶನಾ ಸಭೆ ನಡೆಸಿ ಅವರು ಮಾತನಾಡಿದರು. ಸಿಆರ್‌ಝಡ್ ನಿಯಮ ಉಲ್ಲಂಘಿಸಿ ಅನೇಕ ಕಟ್ಟಡಗಳು ನಿರ್ಮಾಣವಾಗಿವೆ. ಈ ಕುರಿತು ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಮಂಗಳೂರು ವೃತ್ತದಲ್ಲಿ ಸೆಕ್ಷನ್ 4 ಆಗಿ ಸೆಕ್ಷನ್ 17 ಆಗದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಒಂದೇ ಸರ್ವೇ ನಂಬರ್‌ನಲ್ಲಿ ಸಾವಿರಾರು ಎಕರೆ ಅರಣ್ಯ ಮತ್ತು ಕಂದಾಯ ಭೂಮಿ ಇರುವ ಪ್ರದೇಶಗಳಲ್ಲಿ ತ್ವರಿತವಾಗಿ ಜಂಟಿ ಸರ್ವೇ ನಡೆಸಿ ಸಮಸ್ಯೆ ಪರಿಹರಿಸಲು ಸೂಚಿಸಿದರು.ಕಾಂಡ್ಲಾ ವನ ಬೆಳೆಸಲು ಸೂಚನೆ: ಕಡಲ ಕೊರೆತ ತಡೆಯಲು ಕಾಂಡ್ಲಾ ವನ (ಮ್ಯಾಂಗ್ರೋ)ಗಳನ್ನು ಬೆಳೆಸುವಂತೆ ಮತ್ತು ಕಡಲ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಶೇಖರಣೆ ಆಗದಂತೆ ಕ್ರಮ ವಹಿಸಲು ಸೂಚನೆ ನೀಡಿದರು. ತ್ಯಾಜ್ಯ ನೀರು ಪರಿಶೀಲನೆ: ಪರಿಸರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಬೈಕಂಪಾಡಿ ಕೈಗಾರಿಕಾ ಪ್ರದೇಶದಿಂದ ತ್ಯಾಜ್ಯ ಮತ್ತು ರಾಸಾಯನಿಕ ತ್ಯಾಜ್ಯ ಸಂಸ್ಕರಣೆ ಆಗದೆ ಫಲ್ಗುಣಿ ನದಿಯನ್ನು ಸೇರುತ್ತಿದೆ ಎಂಬ ಬಗ್ಗೆ ದೂರುಗಳಿದ್ದು, ಈ ಬಗ್ಗೆ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷಿಸಬೇಕು. ನಿಯಮ ಪಾಲಿಸದ ಕೈಗಾರಿಕಾ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.ದುರ್ನಾತ ಬರುತ್ತಿರುವ ಮತ್ಸ್ಯ ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿ, ಎಲ್ಲ ಘಟಕಗಳೂ ಪ್ರಮಾಣಿತ ಮಾನದಂಡಗಳನ್ನು ಪಾಲಿಸುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ತಿಳಿಸಿದರು.ಸ್ಯಾಟಲೈಟ್ ಪರಿಶೀಲನೆ: ಅರಣ್ಯ ಒತ್ತುವರಿ ಇತ್ತೀಚೆಗೆ ಹೆಚ್ಚಾಗುತ್ತಿದೆ. ಕೆಲವರು ಶುಂಠಿ ಬೆಳೆಯುವ ಹೆಸರಲ್ಲಿ 3 ಎಕರೆ 5 ಎಕರೆ ಭೂಮಿ ಗುತ್ತಿಗೆ ಪಡೆದು ಅಥವಾ ಖರೀದಿಸಿ ಸುತ್ತಮುತ್ತಲಿನ ಅರಣ್ಯ ನಾಶ ಮಾಡುತ್ತಿದ್ದಾರೆ ಎಂಬ ದೂರಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾಲ ಕಾಲಕ್ಕೆ ಸ್ಯಾಟಲೈಟ್ ಚಿತ್ರಗಳ ಮೂಲಕ ಪರಿಶೀಲನೆ ನಡೆಸಿ, ಅರಣ್ಯನಾಶವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸುವಂತೆ ಖಂಡ್ರೆ ಸೂಚಿಸಿದರು.