ಆಹಾರ ಕಳಪೆಯಾಗಿದ್ದರೆ ಉಪನಿರ್ದೇಶಕರ ವಿರುದ್ಧ ಕ್ರಮ: ಸಚಿವೆ ಹೆಬ್ಬಾಳಕರ

KannadaprabhaNewsNetwork |  
Published : Jun 28, 2024, 12:53 AM IST
ಯರಗಟ್ಟಿಯ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭೇಟಿ ನೀಡಿ ಪರಿಶೀಲಿಸಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ:

ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು.

ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೇ ಮಾತನಾಡಿದ ಅವರು, ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು. ಅಂಗನವಾಡಿ ಮಕ್ಕಳು ಸ್ವಂತ ಮಕ್ಕಳು ಎಂದು ತಿಳಿದು ಉತ್ತಮ ಗುಣಮಟ್ಟದ ಪೂರಕ ಆಹಾರಗಳನ್ನು ಒದಗಿಸಬೇಕು. ಕಳಪೆ ಆಹಾರ ಪೂರೈಕೆಯನ್ನು ಯಾವುದೇ ಕಾರಣದಿಂದ ಸಹಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಮಕ್ಕಳ ಹಾಗೂ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಗುಣಮಟ್ಟಕ್ಕೆ ಅತೀ ಹೆಚ್ಚು ಆದ್ಯತೆ ನೀಡಬೇಕು. ಘಟಕದ ಪ್ರತಿಯೊಂದು ಉತ್ಪನ್ನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಯಾವುದಾದರೂ ಕಳಪೆ ಎಂದು ಕಂಡು ಬಂದರೆ ಘಟಕದವರೇ ತಿರಸ್ಕರಿಸಬೇಕು. ಎಲ್ಲ ಉತ್ಪನ್ನಗಳನ್ನು ಸ್ವಚ್ಛಗೊಳಿಸಿ ಪೂರೈಸಬೇಕು. ಈ ವಿಷಯದಲ್ಲಿ ತಪ್ಪಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಅಂಗನವಾಡಿ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳನ್ನು ಸಂಪೂರ್ಣ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಎಂಎಸ್ ಪಿಸಿ ಘಟಕಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶದ ನಾಗರಾಜ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ