ದಾವಣಗೆರೆಯಲ್ಲಿ ಕಾನೂನುಬಾಹಿರ ತಂಬಾಕು ಉತ್ಪನ್ನ ಮಾರಾಟ ವಿರುದ್ಧ ಕ್ರಮ

KannadaprabhaNewsNetwork |  
Published : Jun 22, 2025, 11:47 PM IST
ಕ್ಯಾಪ್ಷನ19ಕೆಡಿವಿಜಿ43 ದಾವಣಗೆರೆ ಜಿಲ್ಲೆಯ ವಿವಿಧ ಶಾಲೆ, ಕಾಲೇಜು ಬಳಿ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಪೊಲೀಸ್ ಕಾರ್ಯಾಚರಣೆ ಮಾಡಿ  ದಂಡ ವಿಧಿಸಿದರು. | Kannada Prabha

ಸಾರಾಂಶ

ಜಿಲ್ಲಾ ಪೊಲೀಸ್‌ ಅಧೀಕ್ಷಕಿ ಉಮಾ ಪ್ರಶಾಂತ್‌ ಸೂಚನೆಯಂತೆ ಜಿಲ್ಲೆಯ ವಿವಿಧ ಶಾಲಾ ಕಾಲೇಜು ಬಳಿ ಪೊಲೀಸ್‌ ಅಧಿಕಾರಿ ಸಿಬ್ಬಂದಿ ಕಾನೂನುಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕಾರ್ಯಾಚರಣೆ ಮಾಡಿ ದಂಡ ವಿಧಿಸಿದರು.

ಪೊಲೀಸ್ ಕಾರ್‍ಯಾಚರಣೆ । 772 ಪ್ರಕರಣ, ದಂಡ

ದಾವಣಗೆರೆ: ಜಿಲ್ಲಾ ಪೊಲೀಸ್‌ ಅಧೀಕ್ಷಕಿ ಉಮಾ ಪ್ರಶಾಂತ್‌ ಸೂಚನೆಯಂತೆ ಜಿಲ್ಲೆಯ ವಿವಿಧ ಶಾಲಾ ಕಾಲೇಜು ಬಳಿ ಪೊಲೀಸ್‌ ಅಧಿಕಾರಿ ಸಿಬ್ಬಂದಿ ಕಾನೂನುಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕಾರ್ಯಾಚರಣೆ ಮಾಡಿ ದಂಡ ವಿಧಿಸಿದರು.

ಜನರು ತಂಬಾಕು ವ್ಯಸನಕ್ಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ತುತ್ತಾಗುತ್ತಿದ್ದು, ಅದರಲ್ಲೂ ಕಾಲೇಜು ವಿಧ್ಯಾರ್ಥಿಗಳು ಫ್ಯಾಷನ್ ಗೆ ಇತರ ಕಾರಣಗಳಿಗೆ ಸಿಗರೇಟ್ ಸೇದುವುದು, ಗುಟ್ಕಾ ತಂಬಾಕು ತೆಗೆದುಕೊಳ್ಳುವುದನ್ನು ಕಾಣುತ್ತಿದ್ದೇವೆ. ಸಾರ್ವಜನಿಕ ಪ್ರದೇಶಗಳಲ್ಲಿ ಬೀಡಿ ಸಿಗರೇಟ್‌ ಸೇದುವುದು ನಿಷೇಧವಾಗಿರುತ್ತದೆ. ಶಾಲೆಯಿಂದ 100 ಮೀ. ಪರಿಮಿತಿಯಲ್ಲಿ ತಂಬಾಕು ಗುಟ್ಕಾ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ತಂಬಾಕು, ಗುಟ್ಕಾ ಸೇವನೆ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ, ಯುವ ಜನತೆಗೆ ಅರಿವು ಮುಡಿಸುವುದರ ಜತೆಗೆ ಹೆಚ್ಚು ಪ್ರಕರಣಗಳನ್ನು ದಾಖಲಿಸುವಂತೆ ತಿಳಿಸಿದ್ದು, ಯುವ ಜನತೆ ತಂಬಾಕು ವಸ್ತುಗಳಿಗೆ ವ್ಯಸನಕ್ಕೆ ಬಿದ್ದು, ತಮ್ಮ ಆರೊಗ್ಯವನ್ನು ಹಾಳು ಮಾಡಿಕೊಳ್ಳುವುದರ ಜೊತೆಗೆ ಸಮಾಜದ ಸ್ವಸ್ಥ್ಯ ಹಾಳಾಗುತ್ತದೆ. ಇವುಗಳ ಎಲ್ಲಾ ಹಿನ್ನೆಲೆಯಲ್ಲಿ ಕಾನೂನುಬಾಹಿರವಾಗಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್‌ ಸೂಚಿಸಿದ್ದಾರೆ.

ಅದರಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ತಂಡಗಳಾಗಿ ವಿಶೇಷ ಕಾರ್ಯಾಚರಣೆ ನಡೆಸಿ, ಜಿಲ್ಲೆಯಾದ್ಯಾಂತ 90ಕ್ಕೂ ಹೆಚ್ಚು ಶಾಲೆ ಕಾಲೇಜುಗಳ ಬಳಿ ಬೇಟಿ ನೀಡಿ ಶಾಲೆ ಕಾಲೇಜುಗಳಿಂದ 100 ಮೀ ಪರಿಮಿತಿಯಲ್ಲಿ ಕಾನೂನುಬಾಹಿರವಾಗಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ದಾಳಿ ಮಾಡಿ 772 ಕೋಪ್ಟಾ ಪ್ರಕರಣಗಳನ್ನು ದಾಖಲಸಿದ್ದು ಸದರಿ ಪ್ರಕರಣಗಳಿಗೆ ಸಂಬಂಧಿಸಿದಂತೆ 77,200 ರು. ದಂಡವನ್ನು ಪೊಲೀಸರು ವಿಧಿಸಿದ್ದಾರೆ.

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ