ಗದಗ: ಮೇ ತಿಂಗಳಿನಲ್ಲಿ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ, ಮಲ್ಲಿಕಾರ್ಜುನಪುರ, ಗದಗ ತಾಲೂಕಿನ ಮುಳಗುಂದ ಪಟ್ಟಣ, ರೋಣ ತಾಲೂಕಿನ ನರೇಗಲ್ಲ ಪಟ್ಟಣ, ನರಗುಂದ ಹಾಗೂ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಗದಗ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳಗಳ ಮೂಲಕ ಶಾಲಾ ಕಾಲೇಜುಗಳ ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಕ್ರಮ ವಹಿಸಿ ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿದವರ ವಿರುದ್ಧ 52 ಪಕ್ರರಣ ದಾಖಲಿಸಿ ರು.9400 ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.ಎಲ್ಲಾ ತಂಬಾಕು ಮಾರಾಟಗಾರರು ಸ್ಥಳೀಯ ಸಂಸ್ಥೆಗಳಾದ ಪುರಸಭೆ, ಪಪಂ, ನಗರಸಭೆಗಳಲ್ಲಿ ಪ್ರತ್ಯೇಕ ತಂಬಾಕು ಮಾರಾಟ ಮಾಡುವ ಪರವಾನಗಿಯನ್ನು ಪಡೆದು ಮಾರಾಟ ಮಾಡಲು ಸೂಚಿಸಲಾಯಿತು. ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವದು ಅ ಸ್ಥಳದ ಮಾಲೀಕರ ಜಾವಾಬ್ದಾರಿಯಾಗಿರುತ್ತದೆ. ಚಹಾ ಅಂಗಡಿ, ಪಾನ ಶಾಪ್ ಅಂಗಡಿಗಳ ಒಳಗಡೆ ಸುಮಾರು ಅನಧಿಕೃತ ಧೂಮಪಾನ ಅಡ್ಡಾಗಳನ್ನು ಮಾಡಿಕೊಂಡು, ಧೂಮಪಾನ ಮಾಡದ ಅಮಾಯಕರ ಆರೋಗ್ಯದ ಮೇಲೆ ಪರಿಣಾಮ ಬೀರಿ ಅವರು ತಂಬಾಕಿನಿಂದ ಉಂಟಾಗುವ ಖಾಯಿಲೆಗಳಿಗೆ ಬಲಿಯಾಗುತ್ತಿರುವುದರಿಂದ ಇಂತಹ ಅಡ್ಡಾಗಳನ್ನು ಬಂದ ಮಾಡುವಂತೆ ಎಚ್ಚರಿಕೆ ನೀಡಿ ಕ್ರಮಕೈಗೊಳ್ಳಲಾಯಿತು. ತಂಬಾಕು ಮುಕ್ತ ಯುವ ಪೀಳಿಗೆ ಮಾಡುವ ನಿಟ್ಟಿನಲ್ಲಿ, ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳು ಸುಲಭವಾಗಿ ದೊರೆತು ಚಟಕ್ಕೆ ಬಲಿಯಾಗುವದನ್ನು ತಪ್ಪಿಸಲು, ಶಾಲಾ ಕಾಲೇಜು ಆವರಣದಿಂದ 100 ಗಜದ ವರೆಗೆ ತಂಬಾಕು ಮಾರಾಟ ನಿಷೇಧ ಮಾಡಲಾಗಿದೆ, ತಂಬಾಕು ಕುರಿತ ಜಾಹೀರಾತು ನಿಷೇಧಿಸುವುದು, 18 ವರ್ಷದೊಳಗಿನವರಿಗೆ ತಂಬಾಕು ನಿಷೇಧಿಸುವದು, ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ 85% ರಷ್ಟು ಅರೋಗ್ಯ ಎಚ್ಚರಿಕೆ ಚಿಹ್ನೆ ಕಡ್ಡಾಯವಾಗಿದೆ. ನಮ್ಮ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳು ಕಾನೂನು ಬದ್ಧವಾಗಿದ್ದರು ಅವುಗಳ ಮಾರಾಟ ಹಾಗೂ ಅದರ ಉಪಯೋಗ ಕೋಟ್ಪಾ ಕಾಯ್ದೆ ಅಡಿಯಲ್ಲಿ ಅವಕಾಶವಿದ್ದು ಅದನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿ ಕ್ರಮ ವಹಿಸಲಾಗುವುದು ತಿಳಿಸಲಾಯಿತು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಥೋಡ್ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ, ವಿ.ಎಸ್. ನಾಯ್ಕರ್, ಪೊಲೀಸ್ ಇಲಾಖೆಯ ಜಿ.ಎಸ್. ದೇಸಾಯಿ, ಬಿ.ಎಸ್. ಮಾಯಮ್ಮನವರ, ಎಚ್.ಬಿ. ಗುಡ್ಡಣ್ಣವರ, ಆರೋಗ್ಯ ಇಲಾಖೆಯ ಸಿ.ಎಫ್. ಕುಂಬಾರ, ಬಿ.ಸಿ. ಚಿತ್ತರಗಿ ಇದ್ದರು.