ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಪಟ್ಟಣದ ಗಣಪತಿ ಪೆಂಡಾಲ್‌ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಚನ್ನರಾಯಪಟ್ಟಣ ಯೋಜನಾ ಕಚೇರಿ ವತಿಯಿಂದ ಆಯೋಜಿಸಲಾಗಿದ್ದ ಸುಜ್ಞಾನ ನಿಧಿ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಣೆ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಧರ್ಮಸ್ಥಳ, ಡಾ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ಹೆಸರಿಗೆ ಕಳಂಕ ತರುವ ಹಾಗೂ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವ ಕಾರ್ಯ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಕಲಾಪದ ವೇಳೆ ಧ್ವನಿಯೆತ್ತಿದ್ದು, ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಶ್ರೀ ಧರ್ಮಸ್ಥಳ ಕ್ಷೇತ್ರಕ್ಕೆ ಕೆಟ್ಟ ಹೆಸರು ತರಲು ಹಿಂದೂ ವಿರೋಧಿಗಳು ಪಿತೂರಿ ನಡೆಸುತ್ತಿವೆ.
ರಾಜ್ಯ ಸರ್ಕಾರವು ಕೂಡಲೇ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್‌ಐಟಿ ಅಧಿಕಾರಿಗಳು ಗುಂಡಿ ಅಗೆಯುವ ಕೆಲಸ ಬಿಟ್ಟು ಪಡ್ಯಂತ್ರಕ್ಕೆ ಕಾರಣರಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಈ ಮೂಲಕ ಶ್ರೀ ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆಯನ್ನು ಉಳಿಸಬೇಕು. ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಅನಾಮಿಕನ ಮಾತು ಕೇಳಿ ಕಂಡಕಂಡಲ್ಲಿ ಅಗೆದು ಶ್ರೀ ಧರ್ಮಸ್ಥಳ ಕ್ಷೇತ್ರವನ್ನು ಮಲಿನ ಮಾಡಲು ಪ್ರಯತ್ನಿಸಲಾಗುತ್ತಿದೆ. ಇದು ಸುಳ್ಳು ಎಂದು ಸಾಬೀತಾಗಿದೆ. ಹಾಗಾಗಿ ಅನಾಮಿಕ ದೂರುದಾರ ಮತ್ತು ಆತನ ಹಿಂದೆ ಇರುವವರಿಗೆ ಯಾರಿಂದ ಧನ ಸಹಾಯವಾಗುತ್ತಿದೆ ಹಾಗೂ ಸುಳ್ಳು ಆರೋಪ ಮಾಡಲು ಅವರಿಗೆ ಪ್ರಚೋದನೆ ಮಾಡುತ್ತಿರುವ ಕಿಡಿಗೇಡಿಗಳು ಹಾಗೂ ಯೂಟ್ಯೂಬರ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯಾದ್ಯಂತ ಸೇವೆ ಸಲ್ಲಿಸುತ್ತಿದೆ. ಸರ್ಕಾರ ನಿರ್ವಹಿಸಬೇಕಾದ ಕೆಲಸಕ್ಕಿಂತ ಹೆಚ್ಚಿನ ಕಾರ್ಯಕ್ರಮಗಳನ್ನು ಯೋಜನೆಯಿಂದ ಹಮ್ಮಿಕೊಳ್ಳುತ್ತಿರುವುದರಿಂದ ಸಾರ್ವಜನಿಕರು ಹೆಚ್ಚು ಸವಲತ್ತುಗಳನ್ನು ಪಡೆದು ಸಬಲರಾಗುತ್ತಿದ್ದಾರೆ. ಮಹಿಳೆಯರನ್ನು ಜಾಗೃತಿಗೊಳಿಸಿ ಆರ್ಥಿಕ ಪ್ರಜ್ಞಾವಂತಿಕೆಯನ್ನು ಬೆಳೆಸುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ, ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ.
ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಡಿವೈಎಸ್ಪಿ ಎನ್. ಕುಮಾರ್ ಮಾತನಾಡಿದರು.ಕಾರ್ಯಕ್ರಮದಲ್ಲಿ ಪ್ರಸ್ತುತ ವರ್ಷ ಸುಜ್ಞಾನ ನಿಧಿ ಮಂಜೂರಾಗಿದ್ದ ೧೧೦ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ನಿರ್ದೇಶಕ ಯೋಗೀಶ್, ಜನಜಾಗೃತಿ ಸಮಿತಿಯ ಸದಸ್ಯರಾದ ಸಿ.ಎನ್.ಅಶೋಕ್, ಮನೋಹರ್ ಉಮೇಶ್, ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಒಕ್ಕೂಟದ ಪದಾಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.