ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ: ಶಾಸಕ ಗವಿಯಪ್ಪ

KannadaprabhaNewsNetwork |  
Published : Aug 11, 2024, 01:30 AM IST
ಸ | Kannada Prabha

ಸಾರಾಂಶ

ಆರ್‌ಐಡಿಎಫ್ -೨೯ರ ಯೋಜನೆಯಡಿ ₹೧.೯೧ ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಿದೆ.

ಹೊಸಪೇಟೆ: ನಗರದ ಎಪಿಎಂಸಿ ಪ್ರಾಂಗಣವನ್ನು ಹಂತ, ಹಂತವಾಗಿ ಅಭಿವೃದ್ಧಿ ಪಡಿಸುವ ಮೂಲಕ ರೈತರು ಮತ್ತು ವರ್ತಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಎಚ್.ಆರ್. ಗವಿಯಪ್ಪ ಭರವಸೆ ನೀಡಿದರು.ನಗರದ ಎಪಿಎಂಸಿಯಲ್ಲಿ ಗುರುವಾರ ಆರ್‌ಐಡಿಎಫ್ -೨೯ರ ಯೋಜನೆಯಡಿ ₹೧.೯೧ ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಿದ ಅವರು, ಕಳೆದ ಸಾಲಿನಲ್ಲಿ ಎಪಿಎಂಸಿಯ ಒಂದು ಭಾಗದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು. ಇದೀಗ ಆರ್‌ಐಡಿಎಫ್ -೨೯ರ ಯೋಜನೆಯಡಿ ₹೧.೯೧ ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಿದೆ. ಮುಂದಿನ ದಿನಗಳಲ್ಲಿ ಎಪಿಎಂಸಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಸಿಸಿ ರಸ್ತೆ ಒಳಚರಂಡಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ನಡೆಸಲು ಗುದ್ದಲಿ ಪೂಜೆ ನೆರವೇರಿಸಲಾಗಿದೆ. ರೈತರಿಗೆ ಯಾವುದೇ ರಜೆ ಇಲ್ಲ. ಹಾಗಾಗಿ ಪ್ರತಿದಿನ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯನಿರ್ವಹಿಸಬೇಕು. ಈಗಾಗಲೇ ನಿರ್ಮಿತಿ ಕೇಂದ್ರದಿಂದ ₹೨ ಕೋಟಿ ವೆಚ್ಚದ ಕಾಮಗಾರಿ ನಡೆದಿದೆ. ಈಗಾಗಲೇ ಕಾಮಗಾರಿ ನಡೆಯುತ್ತಿದೆ. ಕ್ಲೋಡ್ ಸ್ಟೋರೆಜ್ ಘಟಕ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ, ಮುಂದಿನ ವರ್ಷದೊಳಗೆ ಕ್ಲೋಡ್ ಸ್ಟೋರೆಜ್ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳುವೆ. ಎಂಪಿಎಂಸಿ ಸಗಟು ವ್ಯಾಪಾರದ ತರಕಾರಿ ಮಾರುಕಟ್ಟೆ ಆಗಿದೆ. ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡಲಾಗುತ್ತಿದೆ. ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿ ಜತೆ ಚರ್ಚಿಸಿ ಕೈಗೊಳ್ಳಲಾಗುವುದು ಎಂದರು.

ಇಲ್ಲಿ ವ್ಯಾಪಾರ ಹೆಚ್ಚಿಸಲು ಬೇಕಾದ ಸೌಕರ್ಯ ಒದಗಿಸಬೇಕಿದೆ. ಇನಷ್ಟು ಅನುದಾನಕ್ಕಾಗಿ ಮುಖ್ಯಮಂತ್ರಿ ಜತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ಮಾರುಕಟ್ಟೆ ಅಭಿವೃದ್ಧಿಗೆ ಮುಂದಾಗುತ್ತೇವೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು. ಗುಣಮಟ್ಟದಿಂದ ಕಾಮಗಾರಿ ನಡೆಸಬೇಕು ಎಂದು ತಾಕೀತು ಮಾಡಿದರು.

ಎಪಿಎಂಸಿ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ, ಎಇಇ ಸುದರ್ಶನ, ವರ್ತಕರಾದ ರಾಘವೇಂದ್ರ ಶೆಟ್ಟಿ, ಭದ್ರಿ ನಾರಾಯಾಣ, ನಾಗೇಂದ್ರ ಇದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ