- ತೀರ್ಥರಾಮೇಶ್ವರ ಗ್ರಾಮದಿಂದ ಪ್ರಚಾರ ಕಾರ್ಯ ಆರಂಭ ।
ಎರಡನೇ ಮಂತ್ರಾಲಯ ಎಂದು ಪ್ರಸಿದ್ಧಿ ಪಡೆದಿರುವ ಹೊನ್ನಾಳಿಯ ಪುಣ್ಯಕ್ಷೇತ್ರ ರಾಘವೇಂದ್ರ ಸ್ವಾಮಿ ಬೃಂದಾವನ ಹಾಗೂ ತೀರ್ಥರಾಮೇಶ್ವರ ಕ್ಷೇತ್ರಗಳು ಸೇರಿದಂತೆ ತಾಲೂಕಿನ ಐತಿಹಾಸಿಕ ಕ್ಷೇತ್ರಗಳನ್ನು ಪ್ರವಾಸಿ ತಾಣಗಳನ್ನಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಮಂಗಳವಾರ ಹೊನ್ನಾಳಿ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ತೀರ್ಥರಾಮೇಶ್ವರ ಗ್ರಾಮದಿಂದ ಪ್ರಚಾರ ಕಾರ್ಯ ಆರಂಭಿಸಿದ ಅವರು, ಬೆಳಗುತ್ತಿ, ಮಲ್ಲಿಗೆನಹಳ್ಳಿ, ರಾಮೇಶ್ವರ ಹರಗನಹಾಳು, ಗುಡ್ಡೇಹಳ್ಳಿ, ಜೀನಹಳ್ಳಿ, ಕತ್ತಿಗೆ, ಕೆಂಚಿಕೊಪ್ಪ, ಚಿನ್ನಿಕಟ್ಟೆ, ಸವಳಂಗ, ಸೊಗಿಲು ಚಟ್ನಹಳ್ಳಿ, ಫಲವನಹಳ್ಳಿ, ಮುಸ್ಸೇನಹಾಳು, ಕುಂಕವ, ವಡೆಯರ ಹತ್ತೂರು, ಗಂಗನಕೋಟೆ, ಬಸವನಹಳ್ಳಿ, ಹರಳಹಳ್ಳಿ, ಅರಬಗಟ್ಟೆ, ಮಾದನಬಾವಿ, ಸೊರಟೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.ಹೊನ್ನಾಳಿ ತಾಲೂಕಿನಲ್ಲಿಯೂ ಅನೇಕ ಐತಿಹಾಸಿಕ ಸ್ಥಳಗಳಿವೆ. ಇಂತಹ ಸ್ಥಳಗಳನ್ನು ಕೇಂದ್ರದಿಂದ ಹೆಚ್ಚಿನ ಅನುದಾನ ತಂದು ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು. ಕೇಂದ್ರದಿಂದ ಪ್ರತಿ ಕ್ಷೇತ್ರಕ್ಕೆ ವಸತಿಯುತ ಶಾಲೆಗಳು ಮಂಜೂರಾಗಲಿವೆ. ಅಂತಹ ವಸತಿಯುತ ಶಾಲಾ- ಕಾಲೇಜುಗಳನ್ನು ಕ್ಷೇತ್ರಕ್ಕೆ ತಂದು ಈ ಭಾಗದ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಪಂಚ ನ್ಯಾಯ ಪಚ್ಚೀಸ್ ಗ್ಯಾರಂಟಿ’ ಭರವಸೆಗಳನ್ನು ನೀಡಲಾಗಿದೆ. ಯುವ ನ್ಯಾಯದಡಿ ಯುವಕರಿಗೆ ಉದ್ಯೋಗ, ಮಹಿಳಾ ನ್ಯಾಯದಡಿ ಪ್ರತಿ ಮಹಿಳೆಗೆ ₹1 ಲಕ್ಷ, ರೈತ ನ್ಯಾಯದಡಿ ಸ್ವಾಮಿನಾಥನ್ ಆಯೋಗ ಜಾರಿಗೊಳಿಸುವುದು, ನರೇಗಾ ಕೂಲಿ ಹಣವನ್ನು ₹400ಕ್ಕೆ ಹೆಚ್ಚಳ ಸೇರಿದಂತೆ ಹಲವು ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಅದರಂತೆ ನಾವುಗಳು ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದರು.
- - - -23ಎಚ್.ಎಲ್.ಐ4ಃಃ:
ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ ಕಾಂಗ್ರೇಸ್ ಅಭ್ಯರ್ಥಿ ಡಾ.ಪ್ರಭ ಮಲ್ಲಿಕಾರ್ಜುನ್ ಚುನಾವಣಾ ಪ್ರಚಾರ ಭಾಷಣ ಮಾಡಿದರು. ಶಾಸಕ ಡಿ.ಜಿ.ಶಾಂತನಗೌಡ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷಎಚ್.ಬಿ.ಮಂಜಪ್ಪ ಇತರೆ ನಾಯಕರು ಇದ್ದರು.