ಚನ್ನಪಟ್ಟಣ: ಚನ್ನಪಟ್ಟಣದ ಜನಸಂಖ್ಯೆ ಆಧಾರದ ಮೇಲೆ ನಗರದ ಸಾರ್ವಜನಿಕ ಆಸ್ಪತ್ರೆಯನ್ನು ಉನ್ನತೀಕರಣ ಮಾಡಬೇಕಿದೆ. ಹತ್ತು ಎಕರೆ ಜಾಗ ಸಿಕ್ಕರೆ ಜನರಲ್ ಮತ್ತು ತಾಯಿ-ಮಗು ಆಸ್ಪತ್ರೆ ಒಂದೇ ಕಡೆ ನಿರ್ಮಿಸಹುದಾಗಿದ್ದು, ಈ ಕುರಿತು ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಹಿಂದಿನ ಶಾಸಕರ ನಿರ್ಲಕ್ಷ್ಯ:
ಈ ಹಿಂದಿನ ಶಾಸಕರು ಕಾಲಕಾಲಕ್ಕೆ ಪರಿಶೀಲಿಸಿ ರಕ್ಷಾ ಸಮಿತಿ ರಚಿಸದ ಕಾರಣ ಸಮಸ್ಯೆಗಳಾಗಿದೆ. ಆದಷ್ಟು ಬೇಗ ಆಸ್ಪತ್ರೆ ರಕ್ಷಾ ಸಮಿತಿ ರಚನೆಗೆ ಕ್ರಮ ಕೈಗೊಳ್ಳಲಾಗುವುದು. ಹಂತಹಂತವಾಗಿ ಆಸ್ಪತ್ರೆಯಲ್ಲಿನ ಎಲ್ಲ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಾಗುವುದು ಎಂದರು.ಇದೇ ವೇಳೆ ಶಾಸಕರು, ತಾಲೂಕಿನಲ್ಲಿ ಎಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಿದೆ. ವೈದ್ಯರ ಕೊರತೆ, ಸವಲತ್ತುಗಳ ಮಾಹಿತಿ ಪಡೆದರು. ಮುದುಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಆದ್ಯತೆ ಮೇರೆಗೆ ನಿರ್ಮಾಣ ಮಾಡಿ, ಇದರಿಂದ ಬೆಂ-ಮೈ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲು ಅನುಕೂಲವಾಗುತ್ತದೆ ಎಂದು ಟಿಎಚ್‌ಒಗೆ ಸೂಚನೆ ನೀಡಿದರು.
ಬಾಕ್ಸ್..................
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಭೆ ನಡೆಸಿದ ಶಾಸಕ ಸಿ.ಪಿ.ಯೋಗೇಶ್ವರ್ ಮುಂದೆ ಸಾರ್ವಜನಿಕರು ದೂರುಗಳ ಸುರಿಮಳೆ ಸುರಿಸಿದರು. ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಮಧ್ಯಾಹ್ನದ ನಂತರ ಕೆಲ ವೈದ್ಯರು ಆಸ್ಪತ್ರೆಯಲ್ಲಿ ಸಿಗುವುದಿಲ್ಲ. ಹೊರಗಿನ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಲು ಸೂಚಿಸುತ್ತಾರೆ. ಕೆಲವು ಔಷಧಗಳನ್ನು ಸಹ ಹೊರಗಿನಿಂದ ತರಿಸುತ್ತಾರೆ ಎಂದೆಲ್ಲಾ ದೂರಿದರು. ಇದರ ಕುರಿತು ಗಮನಹರಿಸುವಂತೆ ಯೋಗೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಕುಂದುಕೊರತೆ ಸಭೆ ನಡೆಸಿದರು.
ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವಾರ್ಡ್‌ಗಳಿಗೆ ಶಾಸಕ ಯೋಗೇಶ್ವರ್ ಭೇಟಿ ನೀಡಿ ಪರಿಶೀಲಿಸಿದರು.