ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ: ಕರುಣಾಕರರೆಡ್ಡಿ

KannadaprabhaNewsNetwork |  
Published : Aug 24, 2025, 02:00 AM IST
ಹರಪನಹಳ್ಳಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹರಪನಹಳ್ಳಿ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಹಳೇ ಬಸ್ ನಿಲ್ದಾಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಐ.ಬಿ ವೃತ್ತದವರೆಗೂ ತೆರಳಿ ಬಹಿರಂಗ ಸಭೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಸಚಿವ ಜಿ. ಕರುಣಾಕರರೆಡ್ಡಿ ಮಾತನಾಡಿ, ನೂರಾರು ವರ್ಷಗಳ ಇತಿಹಾಸ ಹೊಂದಿರುವ, ನಾಡಿನ ಕೋಟ್ಯಂತರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಪವಿತ್ರ ಶ್ರೀಕ್ಷೇತ್ರ ಧರ್ಮಸ್ಥಳದ ಕುರಿತು ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕವಾಗಿ ನಿರಂತರ ಸುಳ್ಳು ಸುದ್ದಿ ಮತ್ತು ಕಲ್ಪಿತ ಆರೋಪ ಹರಡುತ್ತಿವೆ, ಈ ವ್ಯವಸ್ಥಿತ ಅಪಪ್ರಚಾರದಿಂದ ಪವಿತ್ರ ಸ್ಥಳಕ್ಕೆ ಧಕ್ಕೆ ಉಂಟಾಗುತ್ತಿದೆ, ಕೆಲವು ದುಷ್ಟರು ಮಾಡುವ ಕೃತ್ಯಕ್ಕೆ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವುಂಟಾಗಿದೆ ಎಂದು ಹೇಳಿದರು.

ಹಿಂದೂ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಅಪಪ್ರಚಾರ ಮಾಡುವುದು ಹೆಚ್ಚಾಗಿದೆ, ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ವಿರುದ್ಧ ಸುಳ್ಳು ಸುದ್ದಿ ಹರಿಬಿಡುತ್ತಿದ್ದಾರೆ, ಅನಾಮಿಕ ವ್ಯಕ್ತಿ ತೋರಿಸಿದ ಸ್ಥಳದಲ್ಲಿ ಯಾವುದೇ ಶವಗಳು ಪತ್ತೆಯಾಗಿಲ್ಲ, ಹಣದ ಆಸೆಗೆ ಆ ವ್ಯಕ್ತಿ ಈ ರೀತಿ ಮಾಡುತ್ತಿದ್ದಾನೆ, ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬುದನ್ನು ಸರ್ಕಾರ ಕೂಡಲೇ ಬಹಿರಂಗಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು, ಸಿಎಂ, ಡಿಸಿಎಂ, ಗೃಹಮಂತ್ರಿ ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಮಂಡಲ ಅಧ್ಯಕ್ಷ ಕೆ. ಶೇಖರಪ್ಪ ಮಾತನಾಡಿ, ಧರ್ಮಸ್ಥಳ ಪುಣ್ಯಕ್ಷೇತ್ರ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಆರ್. ಲೋಕೇಶ್, ಕಲ್ಲನಗೌಡ, ಎಂ. ಮಲ್ಲೇಶ, ಪುರಸಭೆ ಸದಸ್ಯ ಕಿರಣ್ ಶ್ಯಾನಬೋಗ, ಎಂ.ಜಾವೀದ್, ವಿನಯ್‌ಗೌಳಿ, ವಾಗೀಶ, ಬಿಜೆಪಿ ಮಂಡಲ ಉಪಾಧ್ಯಕ್ಷ ಗಂಗಾನಾಯ್ಕ್, ಬಸವನಗೌಡ, ತಿಮ್ಮಣ್ಣ, ಪ್ರಧಾನ ಕಾರ್ಯದರ್ಶಿ ಪಂಪನಾಯಕ್, ಸಿದ್ದೇಶ, ಪ್ರಸನ್ನ, ಮಹಾಂತೇಶ, ಶಿವಕುಮಾರ್, ಬಸವರಾಜ, ಕೆ.ಪ್ರಕಾಶ, ಮಾಬುಸಾಬ್, ವಿಜಯಪ್ಪ, ನಾಗರಾಜ, ಬಸವರಾಜ ನಾಯ್ಕ್, ನರೇಶ, ಹಾಲೇಶ, ಜಯಮ್ಮ, ಸುವರ್ಣಮ್ಮ, ಸಿದ್ದೇಶರೆಡ್ಡಿ ಸೇರಿದಂತೆ ಧರ್ಮಸ್ಥಳ ಸಂಘದ ಪ್ರತಿನಿಧಿಗಳು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

Recommended Stories

ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!