ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಮಂಡ್ಯ ರಸ್ತೆಯ 15ನೇ ವಾರ್ಡ್ ಮತ್ತು ಮೈಸೂರು ರಸ್ತೆಯ 11ನೇ ವಾರ್ಡ್‌ನಲ್ಲಿ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯ ₹1 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ, ಚರಂಡಿ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ರೂಪುರೇಷೆ ಸಿದ್ಧಪಡಿಸಲಾಗಿದೆ. ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಎಲ್ಲಾ ವಾರ್ಡ್‌ಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ಮತ್ತು ಮಾಗಡಿ ಜಲಸೂರು ರಾಜ್ಯ ಹೆದ್ದಾರಿಯು ಪಟ್ಟಣದಲ್ಲಿ ಹಾಯ್ದು ಹೋಗಿರುವ ಹಿನ್ನೆಲೆ ದಿನಕಳೆದಂತೆ ಹೆದ್ದಾರಿಯ ವಾಹನಗಳ ಸಂಚಾರವೂ ಅಧಿಕವಾಗುತ್ತಿದೆ. ಬೀದಿ ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ಹಣ್ಣು, ತರಕಾರಿ ಇನ್ನಿತರೆ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿರುವುದರಿಂದ ಜನಸಾಮಾನ್ಯರೂ ಸೇರಿದಂತೆ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ಹಾಗಾಗಿ ಪ್ರತ್ಯೇಕ ಸ್ಥಳ ಗುರುತಿಸಿ ಬೀದಿ ಬದಿ ವ್ಯಾಪಾರಸ್ಥರನ್ನು ಶೀಘ್ರದಲ್ಲಿಯೇ ಸ್ಥಳಾಂತರಿಸಲಾಗುವುದು. ಇದರಿಂದ ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವ ಜೊತೆಗೆ ಪಟ್ಟಣದ ಸೌಂದರ್ಯವೂ ಹೆಚ್ಚುತ್ತದೆ ಎಂದರು.
ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಕೆಎಂಎಫ್ ನಿರ್ದೇಶಕ ಎನ್.ಅಪ್ಪಾಜಿಗೌಡ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ತಹಸೀಲ್ದಾರ್ ಜಿ.ಆದರ್ಶ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಜಿಲ್ಲಾ ಅಧಿಕಾರಿ ಮಧುಶ್ರೀ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಎಇಇ ಜಾನ್ಸಿರಾಯ್, ಪುರಸಭೆ ಮುಖ್ಯಾಧಿಕಾರಿ ವೀಣಾ, ಮುಖಂಡರಾದ ಎನ್.ಜೆ.ರಾಜೇಶ್, ತಿಬ್ಬನಹಳ್ಳಿ ರಮೇಶ್, ಸಿಬ್ಗತ್‌ಅಲಿಖಾತ್, ಸಾದಿಕ್ ಸೇರಿದಂತೆ ಹಲವರು ಇದ್ದರು.