ಪರಂಪರೆ ಶಾಶ್ವತ ರಕ್ಷಣೆಗೆ ಕ್ರಮ: ಡಿಸಿ ಶ್ರೀಧರ್

KannadaprabhaNewsNetwork |  
Published : Apr 29, 2026, 02:15 AM IST
ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾತನಾಡಿದರು.  | Kannada Prabha

ಸಾರಾಂಶ

ರಾಷ್ಟ್ರಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳ ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲಾಗುವುದು.

ಗದಗ: ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ದೇಶಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈ ಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲು ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಸೋಮವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಜರುಗಿದ ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯಯೋಜನೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಡೀ ದೇಶದಲ್ಲಿರುವ ಹಸ್ತಪ್ರತಿಗಳ ಮಾಹಿತಿಯನ್ನು ಕೇಂದ್ರ ಸರ್ಕಾರವು ಅಭಿವೃದ್ಧಿಪಡಿಸಿರುವ ಮೊಬೈಲ್ ಅಪ್ಲಿಕೇಷನ್‌ನಲ್ಲಿ ಅಪ್‌ಲೋಡ್ ಮಾಡುವ ಮೂಲಕ ಸಂಗ್ರಹಣೆಗೊಳ್ಳುವ ಹಸ್ತಪ್ರತಿಗಳ ರಾಷ್ಚ್ರೀಯ ಭಂಡಾರದ ದತ್ತಾಂಶದ ಮಾಹಿತಿಯನ್ನು ವಿಶ್ವಕ್ಕೆ ಹಂಚಿಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ರಾಷ್ಟ್ರಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳ ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲಾಗುವುದು. ಇವುಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ, ಅನುವಾದ ಮತ್ತು ಪ್ರಕಟಣೆಯನ್ನು ಮಾಡಲಾಗುವುದು. ಈ ಮೂಲಕ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ರಾಷ್ಟ್ರೀಯ ವೇದಿಕೆಯ ಮೂಲಕ ಸಾರ್ವಜನಿಕ ಪ್ರವೇಶವನ್ನು ಒದಗಿಸಿ ಭವಿಷ್ಯದ ಪೀಳಿಗೆಗೆ ಅವುಗಳ ಜ್ಞಾನ ಸಂಪತ್ತಿನ ಸಂರಕ್ಷಣೆ ಮತ್ತು ಬಳಕೆಯ ಉದ್ದೇಶ ಹೊಂದಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ ಮಾತನಾಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಆರ್‌ಡಿಪಿಆರ್ ವಿಶ್ವವಿದ್ಯಾಲಯದ ಶಶಿಭೂಷಣ, ಎಸ್.ಎಂ. ಸಿಂಪಿಗೇರ, ಜಿ.ಎಸ್. ಗಾವಕರ್, ಗುರುಸಿದ್ದಪ್ಪಯ್ಯ ಹಿರೇಮಠ, ಶ್ರೀಧರ್‌ರಾವ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ಸದೃಢ: ವಿವೇಕ ಯಾವಗಲ್‌
ವಿಮಾನ ನಿಲ್ದಾಣಗಳಿಗೆ ಸಾಧಕರ ಹೆಸರಿಡಲು ಆಗ್ರಹ