ಗುಣಮಟ್ಟದಲ್ಲಿ ಲೋಪ ಕಂಡು ಬಂದರೆ ಕ್ರಮ

KannadaprabhaNewsNetwork |  
Published : Jun 22, 2025, 11:48 PM IST
ಪೋಟೋ 4 : ತ್ಯಾಮಗೊಂಡ್ಲು ಹೋಬಳಿಯ ಗುಂಡೇನಹಳ್ಳಿ ಗ್ರಾಮದಲ್ಲಿ ಸುಮಾರು 50 ಲಕ್ಷ ವೆಚ್ಚದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಎನ್.ಶ್ರೀನಿವಾಸ್ ಚಾಲನೆ ನೀಡಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು ಇನ್ನುಳಿದ ಕಾಮಗಾರಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ದಾಬಸ್‍ಪೇಟೆ: ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು ಇನ್ನುಳಿದ ಕಾಮಗಾರಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ತ್ಯಾಮಗೊಂಡ್ಲು ಹೋಬಳಿಯ ಗುಂಡೇನಹಳ್ಳಿ ಗ್ರಾಮದಲ್ಲಿ 50 ಲಕ್ಷ ವೆಚ್ಚದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳು ಪ್ರಗತಿಯಾಗುತ್ತವೆ. ಕಾಮಗಾರಿ ನಿರ್ವಹಿಸುತ್ತಿರುವ ಇಂಜಿನಿಯರ್ ಮತ್ತು ಗುತ್ತಿಗೆದಾರರು ಗುಣಮಟ್ಟ ಪಾಲನೆಗೆ ಗಮನ ನೀಡಬೇಕು. ಜನರು ಕೂಡ ಕಾಮಗಾರಿಯ ಬಗ್ಗೆ ನಿಗಾವಹಿಸಬೇಕು. ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದರು.

ದಾಬಸ್‍ಪೇಟೆ ಬಸ್ ನಿಲ್ದಾಣ ವಿಚಾರವಾಗಿ ಮಾತನಾಡಿ, ಈಗಾಗಲೇ ಸಾರಿಗೆ ಸಚಿವರ ಬಳಿ ಚರ್ಚಿಸಿದ್ದೇನೆ. ಹೆಚ್ಚು ಅನುದಾನ ನೀಡುತ್ತೇನೆಂದು ತಿಳಿಸಿದ್ದಾರೆ. ಶೀಘ್ರದಲ್ಲಿ ದಾಬಸ್‍ಪೇಟೆ ಹಾಗೂ ನೆಲಮಂಗಲ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವರನ್ನು ಕರೆತಂದು ವಾಸ್ತವವನ್ನು ತೋರಿಸಿ ಅನುದಾನ ಬಿಡುಗಡೆಗೆ ಮನವಿ ಮಾಡುತ್ತೇನೆ ಎಂದರು.

ಕಟ್ಟುನಿಟ್ಟಿನ ಸೂಚನೆ: ಕೋವಿಡ್ ವಿಚಾರವಾಗಿ ಮಾತನಾಡಿ, ನೆಲಮಂಗಲ ತಾಲೂಕಿನಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ಮುಂಜಾಗ್ರತಾ ಕ್ರಮ ವಹಿಸುವಂತೆ ಈಗಾಗಲೇ ತಾಲೂಕು ಆಡಳಿತ, ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದು, ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಆಸ್ಪತ್ರೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.

ಕಾರ್ಯಕರ್ತರಿಗೆ ಮನ್ನಣೆ:

ಕ್ಷೇತ್ರದಲ್ಲಿ ಸ್ಥಳೀಯ ಗುತ್ತಿಗೆದಾರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಕಾಮಗಾರಿಯನ್ನು ಪಟ್ಟಿ ಮಾಡಲಾಗಿದೆ. ಸ್ಥಳೀಯ ವೈಜ್ಞಾನಿಕವಾಗಿ ಸುಸಜ್ಜಿತ ಹಾಗೂ ಪಕ್ಷಕ್ಕೆ ದುಡಿದ ಗುತ್ತಿಗೆದಾರರಿಗೆ ಅವಕಾಶ ನೀಡಲಾಗುವುದು, ಈಗಾಗಲೇ ಕೆಲ ಮುಖಂಡರಿಗೆ ಕಾಮಗಾರಿ ಮಾಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಸುನಂದಮ್ಮ, ಪಿಡಿಒ ಮೋಹನ್ ಕುಮಾರ್ ಮಾಜಿ ಅಧ್ಯಕ್ಷರಾದ ಶೈಲೇಂದ್ರ, ಎಂ.ಕೆ.ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್, ಗ್ರಾಪಂ ಉಪಾಧ್ಯಕ್ಷ ವಾಸುದೇವ್, ಸದಸ್ಯರಾದ ಚಂದ್ರಶೇಖರ್, ಮಂಜುನಾಥ್, ಪುಟ್ಟಮ್ಮ, ಬಮೂಲ್ ಮಾಜಿ ನಿರ್ದೇಶಕ ಭಾಸ್ಕರ್, ವಕೀಲ ಯುವರಾಜು, ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

ಪೋಟೋ 4 :ತ್ಯಾಮಗೊಂಡ್ಲು ಹೋಬಳಿಯ ಗುಂಡೇನಹಳ್ಳಿ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಎನ್.ಶ್ರೀನಿವಾಸ್ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷೆ ಸುನಂದಮ್ಮ, ಪಿಡಿಒ ಮೋಹನ್ ಕುಮಾರ್, ಪಾಧ್ಯಕ್ಷ ವಾಸುದೇವ್, ಸದಸ್ಯರಾದ ಚಂದ್ರಶೇಖರ್, ಮಂಜುನಾಥ್, ಪುಟ್ಟಮ್ಮ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರಾಂತಿಕಾರಿ ಪುರುಷರ ಆದರ್ಶ ರೂಢಿಸಿಕೊಳ್ಳಿ: ವಿನಯಕುಮಾರ್‌
ಆದಿಚುಂಚನಗಿರಿ ಜಾತ್ರೆ ಮಹೋತ್ಸವದ ಕೊನೇ ದಿನ ಗಂಗಾಪೂಜೆ