ಉಡುಪಿ: ಉಡುಪಿ ನಗರದ ಬಹುಮಹಡಿ ವಸತಿ ಸಮುಚ್ಚಾಲಯಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಶುದ್ಧೀಕರಿಸದೆ ಎಲ್ಲೆಂದೆರಲ್ಲಿ ನದಿ ತೋಡುಗಳಿಗೆ ಬಿಟ್ಟು ಜಲಮಾಲಿನ್ಯ ಮಾಡುವವರ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ಎಚ್ಚರಿಕೆ ನೀಡಿದ್ದಾರೆ.
ಉಡುಪಿ: ಉಡುಪಿ ನಗರದ ಬಹುಮಹಡಿ ವಸತಿ ಸಮುಚ್ಚಾಲಯಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಶುದ್ಧೀಕರಿಸದೆ ಎಲ್ಲೆಂದೆರಲ್ಲಿ ನದಿ ತೋಡುಗಳಿಗೆ ಬಿಟ್ಟು ಜಲಮಾಲಿನ್ಯ ಮಾಡುವವರ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ಎಚ್ಚರಿಕೆ ನೀಡಿದ್ದಾರೆ.
ಅವರು ಗುರುವಾರ ರಜತಾ ದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ ಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರಸ್ತುತ ನಗರಸಭೆ ವ್ಯಾಪ್ತಿಯಲ್ಲಿ 376 ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿದ್ದು, ಅವುಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಸರಿಯಾದ ರೀತಿಯಲ್ಲಿ ಸಂಸ್ಕರಣೆ ಮಾಡದೆ ರಾತ್ರಿ ಹೊತ್ತು ಮಳೆ ನೀರು ಹರಿಯುವ ತೋಡುಗಳಿಗೆ ಬಿಡುತ್ತಿರುವ ದೂರುಗಳಿವೆ, ಈ ಬಗ್ಗೆ ನಗರಸಭೆ ವತಿಯಿಂದ ನೋಟೀಸ್ ನೀಡಲಾಗಿದೆ. ಇನ್ನಾದಗರೂ ಅಪಾರ್ಟ್‌ಮೆಂಟ್ ಮಾಲೀಕರು ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು ಎಂದರು.
ನಗರಸಭಾ ವ್ಯಾಪ್ತಿಯ ಅಪಾರ್ಟ್ಮೆಂಟ್ ಗಳಲ್ಲಿ ಕೊಳಚೆ ನೀರಿನ ಸಂಸ್ಕರಣ ಘಟಕ ಗಳು ಕೆಲವು ಅಪಾರ್ಟ್ಮೆಂಟ್‌ಗಳಲ್ಲಿ ಇವೆಯಾದರೂ ಅವುಗಳ ಬಳಕೆಯಾಗುತ್ತಿಲ್ಲ. ಕೆಲವು ಅಪಾರ್ಟ್ಮೆಂಟ್‌ಗಳಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳೇ ಇಲ್ಲದಿರುವುದು ಕಂಡು ಬಂದಿದೆ. ಆದ್ದರಿಂದ ತ್ಯಾಜ್ಯ ನೀರನ್ನು ಶುದ್ಧಿಕರಿಸಿ ಅವುಗಳನ್ನು ಗಾರ್ಡನ್ ಸೇರಿದಂತೆ ಮತ್ತಿತರ ಗಳಿಗೆ ಮರುಬಳಕೆ ಮುಂದಾಗಬೇಕು ಎಂದರು.
ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಪ್ರಾದೇಶಿಕ ಪರಿಸರ ಅಧಿಕಾರಿ ಕೆ. ಕೀರ್ತಿ ಕುಮಾರ್, ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಒಳಚರಂಡಿ ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿಲ್ಲ: ಉಡುಪಿ ನಗರ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡುಗಳಲ್ಲಿ ನೈರ್ಮಲ್ಯ ಒಳಚರಂಡಿ ವ್ಯವಸ್ಥೆಗೆ ಅಂದಾಜು 400 ಕೋಟಿ ರು. ವೆಚ್ಚದ ಯೋಜನೆ ರೂಪಿಸಿ, ಸರ್ಕಾರಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ ಸರಕಾರ ಒಪ್ಪಿಗೆ ನೀಡಿಲ್ಲ.ಉಡುಪಿ ನಗರಸಭಾ ವ್ಯಾಪ್ತಿಯ ಭೂಪ್ರದೇಶ ಏರಿಳಿತದಿಂದ ಒಳಚರಂಡಿ ಯೋಜನೆಗೆ ಹೆಚ್ಚಿನ ಅನುದಾನ ಅವಶ್ಯಕತೆ ಇದೆ ಎಂದು ಜಿಲ್ಲಾದಿಕಾರಿ ಸ್ವರೂಪ ಸಭೆಯಲ್ಲಿ ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.