ನಿಷೇಧಿತ ವಸ್ತು ಮಾರಾಟ ಮಾಡಿದರೆ ಸೂಕ್ತ ಕ್ರಮ: ಎಸ್ಪಿ

KannadaprabhaNewsNetwork | Published : Dec 22, 2023 1:30 AM

ಸಾರಾಂಶ

ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್‍ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.

ಮಡಿಕೇರಿ: 2024ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ, ಹೊರಜಿಲ್ಲೆ, ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳಲ್ಲಿ ತಂಗಲು ಬರುವ ಪ್ರವಾಸಿಗರು ರೆವಾ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300, 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್‍ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.

ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳ ಮಾಲೀಕರು ಹಾಗೂ ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಮತ್ತು ಮಾಹಿತಿ ನೀಡದೇ ಮಾದಕ ವಸ್ತುಗಳನ್ನು ಮಾರಟ/ಬಳಕೆ ಮಾಡಲು ಸಹಕರಿಸಿರುವುದು ಕಂಡುಬಂದಲ್ಲಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಪರವಾನಿಗೆ ರದ್ದುಗೊಳಿಸಲಾಗುವುದು.

ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಬೇಕು. ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಕೋರಿರುವ ಎಸ್‍ಪಿ, ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದ್ದಾರೆ.

Share this article