ಪಡಿತರಧಾನ್ಯ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಕ್ರಮ

KannadaprabhaNewsNetwork |  
Published : Jul 01, 2026, 03:45 AM IST
ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ಪಡಿತರಧಾನ್ಯ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಕ್ರಮ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ವಿತರಣೆಗಾಗಿ ಬಂದ ಆಹಾರಧಾನ್ಯವನ್ನು ಅನಧಿಕೃತವಾಗಿ ದಾಸ್ತಾನು ಮಾಡುವುದು, ಹೆಚ್ಚುವರಿ ದರದಲ್ಲಿ ಮಾರಾಟ ಮಾಡುವವರ ವಿರುದ್ದ ತಕ್ಷಣ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ವಿತರಣೆಗಾಗಿ ಬಂದ ಆಹಾರಧಾನ್ಯವನ್ನು ಅನಧಿಕೃತವಾಗಿ ದಾಸ್ತಾನು ಮಾಡುವುದು, ಹೆಚ್ಚುವರಿ ದರದಲ್ಲಿ ಮಾರಾಟ ಮಾಡುವವರ ವಿರುದ್ದ ತಕ್ಷಣ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾಳಸಂತೆ ಮಾರಾಟ ತಡೆಗಟ್ಟುವಲ್ಲಿ ಆಹಾರ ಇಲಾಖೆ, ಪೊಲೀಸ್ ಇಲಾಖೆ, ತೂಕ ಮತ್ತು ಅಳತೆ ಇಲಾಖೆ ಹಾಗೂ ಇತರೆ ಇಲಾಖೆಗಳ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಂಶಯಾಸ್ಪದ ಸಂಗ್ರಹಣೆ, ಅಕ್ರಮ ಸಾಗಣೆ ಮತ್ತು ನಕಲಿ ಬಿಲ್ಗಳ ಮೂಲಕ ನಡೆಯುವ ವಹಿವಾಟಿನ ಮೇಲೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಕ್ರಮ ದಾಸ್ತಾನು, ಸಾಗಾಣಿಕೆ ಕಾಳಸಂತೆಕೋರರ ವಿರುದ್ದ ಪ್ರಕರಣ ದಾಖಲಿಸಿ, ಸೂಕ್ರ ಕ್ರಮವಹಿಸಲು ತಿಳಿಸಿದರು. ಫಲಾನುಭವಿಗಳು ತಮಗೆ ಹಂಚಿಕೆಯಾದ ಉಚಿತ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟಕ ಮಾಡದಂತೆ ತಿಳುವಳಿಕೆ ನೀಡಬೇಕು. ಕಳೆದ 2025-26ನೇ ಸಾಲಿನಲ್ಲಿ 37 ಪ್ರಕರಣ ದಾಖಲಿಸಲಾಗಿದ್ದು, 64 ಜನರನ್ನು ಬಂದಿಸಲಾಗಿದೆ. 24 ವಾಹನಗಳನ್ನು ಜಪ್ತ ಸಹ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಪ್ರೀಲ್ದಿಂದ ಜೂನ್ ಮಾಹೆವರೆಗೆ 16 ಪ್ರಕರಣ ದಾಖಲಿಸಲಾಗಿದ್ದು, 20 ಜನರನ್ನು ಬಂಧಿಸಲಾಗಿದೆ. 15 ವಾಹನಗಳನ್ನು ಜಪ್ತ ಮಾಡಲಾಗಿದೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಸಭೆಗೆ ತಿಳಿಸಿದರು.

ತಾಲೂಕು ಮಟ್ಟದಲ್ಲಿ ಆಯಾ ವಿಭಾಗದ ಉಪ ವಿಭಾಗಾಧಿಕಾರಿಗಳು ತಮ್ಮ ಹಂತದಲ್ಲಿ ಸಭೆಯನ್ನು ಜರುಗಿಸಿ ಸೂಕ್ತ ಕ್ರಮವಹಿಸಲು ಜಿಲ್ಲಾಧಿಕಾರಿಗಳು ಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಸೇರಿದಂತೆ ತಾಲೂಕಾ ಮಟ್ಟದ ಆಹಾರ ನಿರೀಕ್ಷಕರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

60368 ಎಸ್‌ಐಆರ್‌ ಗಣತಿ ನಮೂನೆ ವಿತರಣೆ
ವಿದ್ಯುತ್ ಟ್ರಾನ್ಸಫಾರ್ಮರ್ ಶಾರ್ಟ್: ಇಲೇಕ್ಟ್ರಿಕ್‌ ವಸ್ತುಗಳಿಗೆ ಹಾನಿ