ಆರ್‌ಟಿಒ ಕಚೇರೀಲಿ ಬ್ರೋಕರ್‌ ಹಾವಳಿ ತಡೆಗೆ ಕ್ರಮ : ರೆಡ್ಡಿ

KannadaprabhaNewsNetwork |  
Published : Dec 11, 2025, 02:00 AM IST
Ramalinga Reddy

ಸಾರಾಂಶ

ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು 24 ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯ, 28 ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಕಚೇರಿಗೆ ಹೋಗಿ ಸೇವೆ ಪಡೆಯುವುದು ಸೇರಿ ಹಲವು ಕ್ರಮ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಶೇ.100 ರಷ್ಟು ಮಧ್ಯವರ್ತಿಗಳ ಹಾವಳಿ ತಪ್ಪಿಸಲಾಗುವುದು 

 ವಿಧಾನ ಪರಿಷತ್‌ :  ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು 24 ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯ, 28 ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಕಚೇರಿಗೆ ಹೋಗಿ ಸೇವೆ ಪಡೆಯುವುದು ಸೇರಿ ಹಲವು ಕ್ರಮ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಶೇ.100 ರಷ್ಟು ಮಧ್ಯವರ್ತಿಗಳ ಹಾವಳಿ ತಪ್ಪಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಯಾವುದೇ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡು ಬಂದಲ್ಲಿ ಆಯಾ ಕಚೇರಿ ಅಧಿಕಾರಿಗಳನ್ನು ಹೊಣೆ

ಕಾಂಗ್ರೆಸ್‌ನ ಉಮಾಶ್ರೀ ಅವರ ಪರ ಐವನ್‌ ಡಿಸೋಜಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡು ಬಂದಲ್ಲಿ ಆಯಾ ಕಚೇರಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

24 ಸೇವೆಗಳನ್ನು ಆನ್‌ಲೈನ್‌ ಮೂಲಕವೇ ನಿಗದಿತ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ ಪಡೆಯಬಹುದಾಗಿದೆ

ಚಾಲನಾ ಅನುಜ್ಞಾ ಪತ್ರ ಮತ್ತು ನೋಂದಣಿ ಪ್ರಮಾಣ ಪತ್ರ ಸೇವೆ ಸೇರಿ 24 ಸೇವೆಗಳನ್ನು ಆನ್‌ಲೈನ್‌ ಮೂಲಕವೇ ನಿಗದಿತ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ. ಶುಲ್ಕವನ್ನೂ ಆನ್‌ಲೈನ್‌ಲ್ಲಿ ಪಾವತಿಸಿ, ತಾವಿರುವ ಸ್ಥಳಗಳಿಂದಲೇ ಸೇವೆ ಪಡೆಯಬಹುದಾಗಿದೆ. 28 ಸೇವೆಗಳನ್ನು ‘ಸಾರಥಿ’ ಮತ್ತು ‘ವಾಹನ್‌’ ತಂತ್ರಾಂಶ ಮೂಲಕ 28 ಸೇವೆಗಳನ್ನು ಅರ್ಜಿದಾರರು ಆನ್‌ಲೈನ್‌ ಮೂಲಕ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ, ಶುಲ್ಕ ಪಾವತಿಸಿದ ನಂತರ ಕಚೇರಿಗೆ ಭೇಟಿ ನೀಡಿ ಸೇವೆ ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ದಲಿತರ ಜೊತೆಗೆ ಚರ್ಚಿಸಿ ದೂರು ಪಡೆದು ಕಾನೂನು ಚೌಕಟ್ಟಿನಲ್ಲಿ ಕ್ರಮ: ಅನಿಲ್ ಕುಮಾರ್
ರೈಲುಗಳಲ್ಲಿ ಹೆಚ್ಚಾಗುತ್ತಲೇ ಇದೆ ಗಾಂಜಾ ಸಾಗಣೆ