ಹೊಸಪೇಟೆ: ಸ್ಥಳೀಯ ಆಡಳಿತ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಸಾರ್ವಜನಿಕರಿಗೆ ಸಕಾಲದಲ್ಲಿ ಉತ್ತಮ ಸೇವೆ ನೀಡಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮುಂದಿನ ಒಂದು ತಿಂಗಳ ಅವಧಿಯೊಳಗೆ ಅಗತ್ಯವಿರುವ ಸಿಬ್ಬಂದಿ ಸೇವೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು.
ವಿಜಯನಗರ ನಗರಸಭೆಯಲ್ಲಿ ವಿವಿಧ ಹುದ್ದೆ ಮತ್ತು ಪೌರಕಾರ್ಮಿಕರು ಸೇರಿ ಒಟ್ಟು 540 ಹುದ್ದೆಗಳಿವೆ. ಈ ಪೈಕಿ 260 ಜನ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಸ್ಥಳೀಯ ಸಂಸ್ಥೆಗಳ ಮೂಲಕ ಸಾರ್ವಜನಿಕರಿಗೆ ಸಮರ್ಪಕವಾಗಿ ಯೋಜನೆಗಳು ಅನುಷ್ಠಾಗೊಳಿಸುವಲ್ಲಿ ವಿಳಂವಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯವಿರುವ ಸಹಾಯಕ ಅಭಿಯಂತರ, ಆರೋಗ್ಯ ನಿರೀಕ್ಷಕ ಸೇರಿ ಹಲವು ಖಾಲಿ ಹುದ್ದೆಗಳಿಗೆ ತಕ್ಕಂತೆ ಸಿಬ್ಬಂದಿ ನಿಯೋಜಿಸಿ ಸಿಬ್ಬಂದಿ ಕೊರತೆ ನೀಗಿಸಬೇಕು ಎಂದು ನಗರಸಭೆ ಪೌರಾಯುಕ್ತ ಶಿವಕುಮಾರ್ ಬೇಡಿಕೆ ಇಟ್ಟರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಕರಾತ್ಮಕವಾಗಿ ಸ್ಪಂದಿಸಿ, ಮುಂದಿನ ಒಂದು ತಿಂಗಳ ಒಳಗಾಗಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.15ನೇ ಹಣಕಾಸು ಆಯೋಗದಡಿ ಜಿಲ್ಲೆಯ 6 ತಾಲೂಕುಗಳ ಪಪಂ, ಪುರಸಭೆ ಮತ್ತು ನಗರಸಭೆಗಳಲ್ಲಿ 1520 ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಪೈಕಿ 1386 ಕಾಮಗಾರಿ ಪೂರ್ಣಗೊಂಡಿವೆ. 126 ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಇನ್ನುಳಿದ 8 ಟೆಂಡರ್ ಪ್ರಕ್ರಿಯೆಯಲ್ಲಿವೆ ಎಂದು ನಗರಸಭೆ ಯೋಜನಾ ನಿರ್ದೇಶಕ ಮನೋಹರ್ ಸಭೆಗೆ ಮಾಹಿತಿ ನೀಡಿದರು.
ಕುಡಿಯುವ ನೀರಿಗೆ ಸಮಸ್ಯೆಯಾಗದಿರಲಿ:
ಈ ವೇಳೆ ಶಾಸಕರಾದ ಎಚ್.ಆರ್. ಗವಿಯಪ್ಪ, ಡಾ.ಎನ್.ಟಿ. ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಂ. ಇಮಾಮ್ ನಿಯಾಜಿ ಇದ್ದರು.