ನೀರು ಸರಬರಾಜಿನಲ್ಲಿ ವ್ಯತ್ಯಯ ಆಗದಂತೆ ಕ್ರಮ

KannadaprabhaNewsNetwork |  
Published : Jul 29, 2024, 12:45 AM IST
5:ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಪರಮನಹಳ್ಳಿ ಗ್ರಾಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಶಾಸಕ ಶರತ್ ಬಚ್ಚೇಗೌಡ, ಗಾಮ ಪಂಚಾಯತ್ ಅಧ್ಯಕ್ಷ ರಾಮಣ್ಣ ಚಾಲನೆಯನ್ನು ನೀಡಿದರು. | Kannada Prabha

ಸಾರಾಂಶ

ಹೊಸಕೋಟೆ: ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ಖಾಜಿ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಗೆ ಸೇರಿದ ಪರಮನಹಳ್ಳಿ ಗ್ರಾಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಲು ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಹೊಸಕೋಟೆ ತಾಲೂಕಿನಲ್ಲಿ ನೀರಿನ ಸಮಸ್ಯೆ ನಿವಾರಿಸುವ ದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾಗುವ ಕೊಳವೆ ಬಾವಿಗಳಲ್ಲಿ ಹೆಚ್ಚಿನ ಸಂಖ್ಯೆ ಕೊಳವೆ ಬಾವಿಗಳು ಹೊಸಕೋಟೆ ತಾಲೂಕಿಗೆ ದಕ್ಕಿವೆ. ಅಧಿಕಾರಿ ವಲಯದಲ್ಲಿ ಸಾಕಷ್ಟು ಒತ್ತಡ ಹಾಕುವುದರ ಮೂಲಕ ಹೊಸಕೋಟೆ ತಾಲೂಕಿಗೆ ಗಂಗಾ ಕಲ್ಯಾಣ ಯೋಜನೆ ಅಡಿ 11 ಕೊಳವೆ ಬಾವಿಗಳನ್ನು ಮಂಜೂರು ಮಾಡಿಸಲಾಗಿದೆ. ಈ ಪೈಕಿ ಈಗಾಗಲೇ ಏಳು ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ಎಲ್ಲಾ ಕೊಳವೆ ಬಾವಿಗಳಲ್ಲಿ ಉತ್ತಮವಾಗಿ ನೀರು ಲಭ್ಯವಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ದೂರವಾಗಿ ರೈತರಿಗೆ ಹಾಗೂ ಸಾಮಾನ್ಯ ಜನರಿಗೂ ನೀರಿನ ಸಮರ್ಪಕ ಸೌಲಭ್ಯ ದಕ್ಕಲಿದೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಪರಮನಹಳ್ಳಿ ರಾಮಣ್ಣ ಮಾತನಾಡಿ, ಶಾಸಕ ಶರತ್ ಬಚ್ಚೇಗೌಡ ಅವರಿಂದ ಪರಮನಹಳ್ಳಿ ಗ್ರಾಮದಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಎಲ್ಲಾ ಕಾಮಗಾರಿಗಳನ್ನು ಮಾಡಲಾಗಿದೆ. ಪ್ರಮುಖವಾಗಿ ಗ್ರಾಮದಲ್ಲಿ ದಶಕಗಳಿಂದ ಸಮಸ್ಯೆಯಾಗಿದ್ದ ರುದ್ರಭೂಮಿಯ ಜಾಗವನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಮಗ್ರ ಅಭಿವೃದ್ಧಿ ಮಾಡುವುದರಲ್ಲಿ ಸಂದೇಹವಿಲ್ಲ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೋಡಿಹಳ್ಳಿ ಸುರೇಶ್, ಎಸ್ ಎಫ್ ಸಿ ಎಸ್ ಅಧ್ಯಕ್ಷ ಪೂಜೆನ ಅಗ್ರಹಾರ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮನಹಳ್ಳಿ ರಾಮಣ್ಣ, ಮಾಜಿ ಅಧ್ಯಕ್ಷ ರವಿಕುಮಾರ್, ಇಒ ನಾರಾಯಣಸ್ವಾಮಿ, ಪಿಡಿಒ ಮುನಿರಾಜು ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಫೋಟೋ : 28 ಹೆಚ್‌ಎಸ್‌ಕೆ 5

ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಪರಮನಹಳ್ಳಿ ಗ್ರಾಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಶಾಸಕ ಶರತ್ ಬಚ್ಚೇಗೌಡ, ಗಾಪಂ ಅಧ್ಯಕ್ಷ ರಾಮಣ್ಣ ಚಾಲನೆ ನೀಡಿದರು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ