ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹರಿಸಲು ಕ್ರಮ: ರೈತರಿಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭರವಸೆ

KannadaprabhaNewsNetwork |  
Published : May 16, 2025, 02:11 AM IST
1 | Kannada Prabha

ಸಾರಾಂಶ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕಾರ್ಖಾನೆಯ ಮಾಲೀಕರ ಸಭೆ ಕರೆದು ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಹಾಗೂ ಬಣ್ಣಾರಿಯಮ್ಮ ಸಕ್ಕರೆ ಕಾರ್ಖಾನೆಯಲ್ಲಿನ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಮೈಸೂರುರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಂಡುಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ರೈತರ ಕುಂದುಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರೈತ ಮುಖಂಡರು ಪ್ರಸ್ತಾಪಿಸಿದ ಹಲವಾರು ಸಮಸ್ಯೆಗಳನ್ನು ಆಲಿಸಿ, ಸಂಬಂಧಪಟ್ಟ ಇಲಾಖೆಯವರಿಗೆ ಪರಿಹರಿಸಲು ಸೂಚಿಸಿದರು.ಪ್ರತಿ ಮನೆಗೂ ನೀರು ಎಂಬುದು ಭಾರತ ಸರ್ಕಾರದ ಜಲಶಕ್ತಿ ಸಚಿವಾಲಯವು 2019ರಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಪ್ರಾರಂಭಿಸಿದ ಯೋಜನೆಯಾಗಿದ್ದು, 2024ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೆ ಪ್ರತಿ ದಿನ ನಿಯಮಿತವಾಗಿ ಟ್ಯಾಪ್ ನೀರನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯ ಕಾಮಗಾರಿಗಳು ಸಮರ್ಪಕವಾಗಿ ರೀತಿಯಲ್ಲಿ ಆಗುತ್ತಿಲ್ಲ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಡೆಯುತ್ತಿರುವ ಬಗ್ಗೆ ಅಗತ್ಯ ಕ್ರಮ ವಹಿಸಲು ಜಿಪಂ ಅಧಿಕಾರಿಗಳಿಗೆ ಅವರು ಸೂಚಿಸಿದರು.ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು. ಕೃಷಿ ಚಟುವಟಿಕೆಗಳ ವೆಚ್ಚಕ್ಕೆ ಬ್ಯಾಂಕ್‌ ಗಳಲ್ಲಿ ಚಿನ್ನ ಅಡವಿಟ್ಟು ಸಾಲ ಪಡೆದು ಬೇಸಾಯ ಮಾಡುತ್ತಾರೆ. ಈ ಸಂಬಂಧ ಬಡ್ಡಿ ಪಾವತಿ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮಾತನಾಡಿ, ಆರ್.ಬಿ.ಐ ಮಾರ್ಗಸೂಚಿ ಪ್ರಕಾರ ಬ್ಯಾಂಕ್ ಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು, ಈ ಬಗ್ಗೆ ರೈತರಿಗೆ ಸಂಪೂರ್ಣವಾದ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಕಬ್ಬು ಬೆಳೆಗಾರರ ಸಮಸ್ಯೆಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕಾರ್ಖಾನೆಯ ಮಾಲೀಕರ ಸಭೆ ಕರೆದು ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಹಾಗೂ ಬಣ್ಣಾರಿಯಮ್ಮ ಸಕ್ಕರೆ ಕಾರ್ಖಾನೆಯಲ್ಲಿನ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಶ್ರೀರಾಮ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒಪ್ಪಂದ ಆಗಿದೆ. ಈ ವರ್ಷ ಕಾರ್ಖಾನೆ ಆರಂಭ ಆಗುತ್ತದೆ. ಬಣ್ಣಾರಿಯಮ್ಮ ಸಕ್ಕರೆ ಕಾರ್ಖಾನೆ ನಡೆಯುತ್ತಿದ್ದು, ಅಲ್ಲಿನ ಸಮಸ್ಯೆಗಳ ಬಗ್ಗೆ ಸಮಿತಿಯನ್ನು ರಚಿಸಲಾಗಿದೆ ಎಂದರು.ಕೆರೆಗಳ ಒತ್ತುವರಿ ತೆರವು, ಕೆರೆಗಳ ಹೂಳೆತ್ತುವುದು, ಫಸಲ್ ಭೀಮ ಯೋಜನೆ ತೋಟಗಾರಿಕೆ ಇಲಾಖೆ ಬೆಳೆಗಳಿಗೆ ವಿಸ್ತರಣೆ, ಸಮರ್ಪಕವಾಗಿ ಮಣ್ಣಿನ ಫಲವತ್ತತೆ ಪರೀಕ್ಷೆ ಮಾಡುವಂತೆ ಹಾಗೂ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆಗಳ ಬಗ್ಗೆ ಸಮರ್ಪಕವಾಗಿ ಮಾಹಿತಿ ನೀಡುವ ಈ ಎಲ್ಲಾ ಕುರಿತು ಅಗತ್ಯ ಕ್ರಮ ವಹಿಸುವಂತೆ ರೈತ ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.ರಸ್ತೆ ಬದಿಯಲ್ಲಿ ನಡೆಯುವ ಗಿಡಗಳನ್ನು ನೆಟ್ಟು ಅದರ ನಿರ್ವಹಣೆ ಮಾಡಲಾಗುತ್ತಿದೆ. ವೈಜ್ಞಾನಿಕವಾಗಿ ಸಸಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಡಿಸಿಎಫ್ ಡಾ.ಕೆ.ಎನ್. ಬಸವರಾಜ ತಿಳಿಸಿದರು.ಎಸ್ಪಿ ಎನ್. ವಿಷ್ಣುವರ್ಧನ್, ಜಿಪಂ ಉಪ ಕಾರ್ಯದರ್ಶಿ ಕೃಷ್ಣಂರಾಜು, ಸವಿತಾ, ಜಂಟಿ ಕೃಷಿ ನಿರ್ದೇಶಕ ರವಿ, ಹೆಚ್ಚುವರಿ ಎಸ್ಪಿ ನಾಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ರೈತ ಮುಖಂಡರು ಇದ್ದರು.ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಮಾಡುವುದು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಆಗಿದೆ. ಕಳಪೆ ಬಿತ್ತನೆ ಬೀಜ ವಿತರಣೆ ಕಂಡು ಬಂದರೆ ರೈತರು ತಕ್ಷಣ ಗಮನಕ್ಕೆ ತಂದರೆ ಶೀಘ್ರವಾಗಿ ಅಧಿಕಾರಿಗಳ ಮೂಲಕ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು.- ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾಧಿಕಾರಿ

PREV

Recommended Stories

ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ