ಉದ್ಯಮ ಪ್ರಾರಂಭಿಸದಿದ್ದಲ್ಲಿ ಜಾಗ ವಾಪಸಿಗೆ ಕ್ರಮ: ಡಿಸಿ ಮೀನಾ ನಾಗರಾಜ

KannadaprabhaNewsNetwork |  
Published : Jun 17, 2025, 12:51 AM ISTUpdated : Jun 17, 2025, 12:52 AM IST
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಚಿಕ್ಕಮಗಳೂರು, ಜಿಲ್ಲೆಯಲ್ಲಿ ನೋಂದಾಯಿತ ಕೈಗಾರಿಕಾ ಉದ್ಯಮಗಳಿಗೆ ಹಂಚಿಕೆಯಾಗಿರುವ ಜಾಗದಲ್ಲಿ ನಿಯಮಾನುಸಾರ ಉದ್ದಿಮೆ ಪ್ರಾರಂಭಿಸಬೇಕು. ಇಲ್ಲದಿದ್ದಲ್ಲಿ ನೀಡಿರುವ ಜಾಗ ವಾಪಸು ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯಲ್ಲಿ ನೋಂದಾಯಿತ ಕೈಗಾರಿಕಾ ಉದ್ಯಮಗಳಿಗೆ ಹಂಚಿಕೆಯಾಗಿರುವ ಜಾಗದಲ್ಲಿ ನಿಯಮಾನುಸಾರ ಉದ್ದಿಮೆ ಪ್ರಾರಂಭಿಸಬೇಕು. ಇಲ್ಲದಿದ್ದಲ್ಲಿ ನೀಡಿರುವ ಜಾಗ ವಾಪಸು ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೋಂದಾಯಿಸಿರುವ ಉದ್ದಿಮೆದಾರರು ಸರ್ಕಾರದ ನಿಯಮಾನುಸಾರ ಪಡೆದಿರುವ ಜಾಗದಲ್ಲಿ ಮುಂದಿನ 3 ತಿಂಗಳಲ್ಲಿ ಗುರುತಿಸಲಾದ ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆ ಆರಂಭಿಸಬೇಕು. ಜಾಗಕ್ಕೆ ಅರ್ಜಿ ಸಲ್ಲಿಸಿರುವವರು ಸಂಬಂಧಪಟ್ಟ ಎಲ್ಲಾ ದಾಖಲೆ ಹಾಗೂ ನಿಗದಿಪಡಿಸಿದ ಹಣ ಜಮಾ ಮಾಡಿ ಜಾಗ ಪಡೆದು ಕೈಗಾರಿಕೆ ಆರಂಭಿಸಬೇಕು ಎಂದರು.

ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ವಿದ್ಯುತ್, ಚರಂಡಿ, ನೀರು, ರಸ್ತೆ ಮತ್ತಿತರ ಎಲ್ಲಾ ಸೌಲಭ್ಯ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಕೈಗಾರಿಕೋದ್ಯಮಿಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಮುದ್ರಾ ಯೋಜನೆಯಲ್ಲಿ ಕೈಗಾರಿಕೋದ್ಯಮಿಗೆ ಅನುಕೂಲವಾಗುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕೆಗಳು ಹೆಚ್ಚು ಆರಂಭವಾಗುವುದರಿಂದ ನಿರುದ್ಯೋಗ ಸಮಸ್ಯೆ ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ಕೈಗಾರಿಕೆ ಆರಂಭಿಸುವ ಯುವ ಉದ್ದಿಮೆದಾರರು ಮುಂದೆ ಬರಬೇಕು ಎಂದರು. ಜಿಲ್ಲೆಯಲ್ಲಿ ಈಗಾಗಲೇ ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಕೈಗೊಳ್ಳಲಾಗಿದ್ದು, ವಿಸ್ತೃತ ಯೋಜನಾ ವರದಿ ಸಲ್ಲಿಸಿ ಮಂಜೂರಾತಿ ದೊರಕಿ ಹಣ ಬಿಡುಗಡೆಯಾಗಿದೆ. ಅಗತ್ಯ ಭೂಮಿ ಸ್ವಾಧೀನಪಡಿಸಿಕೊಂಡು ಅಭಿವೃದ್ಧಿಪಡಿಸಲು ಕ್ರಮ ಹಾಗೂ ಹಲಸಿನ ಕ್ಲಸ್ಟರ್ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಭೂಮಿ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಕೆಎಸ್‌ಎಫ್‌ಸಿ ಮತ್ತು ಬ್ಯಾಂಕ್‌ಗಳಿಂದ ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ ಹಣಕಾಸು ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಕಡೂರು ನಗದಿಯಾತ್ ಕಾವಲ್‌ನಲ್ಲಿ ಅಭಿವೃದ್ಧಿಯಾದ ಕೈಗಾರಿಕೆಗೆ ನಿಯಮದಂತೆ ಲಭ್ಯವಿರುವ ಭೂಮಿ ಹಂಚಿಕೆ ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಟೆಕ್ಸ್‌ಟೈಲ್ ಪಾರ್ಕ್ ಅಭಿವೃದ್ದಿಗೆ ಕಡೂರು ತಾಲೂಕು ಕಸಬಾ ಹೋಬಳಿ ಚೀಲನಹಳ್ಳಿ ಗ್ರಾಮದ ಸರ್ವೇ ನಂ. 53 ರಲ್ಲಿ 13 ಎಕರೆ ಹಾಗೂ ಸರ್ವೇ ನಂ. 54 ರಲ್ಲಿ 12 ಎಕರೆ ಸೇರಿ ಒಟ್ಟು 25 ಎಕರೆ ಜಮೀನನ್ನು ಜವಳಿ ಪಾರ್ಕ್ ಸ್ಥಾಪನೆಗೆ ಮಂಜೂರಾಗಿದೆ. ಕೈಮಗ್ಗ ಮತ್ತು ಜವಳಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿ ಹಿರೇಗೌಜ ಗ್ರಾಮದ ಸರ್ವೇ ನಂ.111 ರಲ್ಲಿ 15 ಎಕರೆ ಜಾಗವನ್ನು ಜವಳಿ ಪಾರ್ಕ್‌ಗೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಮಹೇಶ್‌ ಕುಮಾರ್, ಕೆಐಎಡಿಬಿ, ಕೆಎಸ್‌ಎಫ್‌ಸಿ ಹಾಗೂ ವಿವಿಧ ಇಲಾಖೆ ಅನುಷ್ಠಾನಾಧಿಕಾರಿಗಳು, ಕೈಗಾರಿಕೋದ್ಯಮಿಗಳು

ಉಪಸ್ಥಿತರಿದ್ದರು.15 ಕೆಸಿಕೆಎಂ 2ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಣುಕರು ಲಿಂಗಾಯತ ಸಮುದಾಯದ ಮಹಾನ್ ಆಚಾರ್ಯ
ಜಿಲ್ಲಾದ್ಯಂತ 1200 ಪ್ರೌಢಶಾಲೆಗಳಲ್ಲಿ ಕಾನೂನು ಅರಿವು