ಭದ್ರಾ ಮೇಲ್ದಂಡೆ ಭೂಸ್ವಾಧೀನ ಸಮಸ್ಯೆ ಪರಿಹಾರಕ್ಕೆ ಕ್ರಮ: ಡಿಕೆಶಿ

KannadaprabhaNewsNetwork |  
Published : Feb 14, 2024, 02:20 AM IST
ಡಿ.ಕೆ.ಶಿವಕುಮಾರ್‌ | Kannada Prabha

ಸಾರಾಂಶ

ಭದ್ರಾ ಮೇಲ್ದಂಡೆ ಯೋಜನೆಯಡಿ 856 ಕೋಟಿ ರು. ಮೊತ್ತದ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ. ಯೋಜನೆ ಹಾದು ಹೋಗುವ ಸಾಕಷ್ಟು ಕಡೆ ಭೂ ಸ್ವಾಧೀನದ ಸಮಸ್ಯೆಯಿದ್ದು, ಅದನ್ನು ಬಗೆಹರಿಸಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಕಾಮಗಾರಿ ಕುಂಠಿತವಾಯಿತು. ಕೇಂದ್ರ ಸರ್ಕಾರ 5,300 ಕೋಟಿ ರು. ಅನುದಾನ ನೀಡುವಲ್ಲಿ ವಿಳಂಬ ಮಾಡಿರುವ ಕಾರಣ ಹಿನ್ನಡೆಯಾಗಿದೆ.

ಕನ್ನಡಪ್ರಭ ವಾರ್ತೆ ವಿಧಾನಸಭೆ

ಭದ್ರಾ ಮೇಲ್ದಂಡೆ ಯೋಜನೆ ಹಾದು ಹೋಗುವ ಕಡೆ ಭೂಸ್ವಾಧೀನ ಸಮಸ್ಯೆ ಇದ್ದು, ಅದನ್ನು ಬಗೆಹರಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮಂಗಳವಾರ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಸಿ.ಬಿ.ಸುರೇಶ್‌ ಬಾಬು ಪ್ರಶ್ನೆಗೆ ಉತ್ತರಿಸಿದ ಅವರು, ಭದ್ರಾ ಮೇಲ್ದಂಡೆ ಯೋಜನೆಯಡಿ 856 ಕೋಟಿ ರು. ಮೊತ್ತದ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ. ಯೋಜನೆ ಹಾದು ಹೋಗುವ ಸಾಕಷ್ಟು ಕಡೆ ಭೂ ಸ್ವಾಧೀನದ ಸಮಸ್ಯೆಯಿದ್ದು, ಅದನ್ನು ಬಗೆಹರಿಸಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಕಾಮಗಾರಿ ಕುಂಠಿತವಾಯಿತು. ಕೇಂದ್ರ ಸರ್ಕಾರ 5,300 ಕೋಟಿ ರು. ಅನುದಾನ ನೀಡುವಲ್ಲಿ ವಿಳಂಬ ಮಾಡಿರುವ ಕಾರಣ ಹಿನ್ನಡೆಯಾಗಿದೆ ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಅನ್ವಯ ಚಿತ್ರದುರ್ಗ, ಚಿಕ್ಕಮಗಳೂರು, ದಾವಣರೆಗೆ ಮತ್ತು ತುಮಕೂರು ಜಿಲ್ಲೆಯಲ್ಲಿ 2.25 ಲಕ್ಷ ಹೆಕ್ಟೇರ್‌ ಭೂ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಪದ್ಧತಿ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಲಾಗಿದೆ ಎಂದರು.

ಬಿಜೆಪಿ ಸದಸ್ಯ ಸಿಮೆಂಟ್‌ ಮಂಜು, ಯಗಚಿ ನದಿ ಆಣೆಕಟ್ಟಿನ ಅಭಿವೃದ್ಧಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಯಗಚಿ ನದಿ ಅಣೆಕಟ್ಟಿನ ಕಾಲುವೆಗಳ ಅಭಿವೃದ್ದಿ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದು, ಈಗಾಗಲೇ 5.5 ಕಿ.ಮೀ.ನಷ್ಟು ಮಣ್ಣನ್ನು ತೆಗೆಯಲಾಗಿದೆ. 1.5 ಕಿ.ಮೀ.ನಷ್ಟು ಕಾಮಗಾರಿ ಭೂಸ್ವಾಧೀನದ ವಿಚಾರವಾಗಿ ಸ್ಥಗಿತಗೊಂಡಿದೆ. ಎತ್ತಿನಹೊಳೆ ಯೋಜನೆಗೆ ಮಹತ್ವ ನೀಡಿದಂತೆ ಯಗಚಿ ಯೋಜನೆಗೂ ಮೊದಲ ಆದ್ಯತೆ ನೀಡುತ್ತೇವೆ ಎಂದು ಅಶ್ವಾಸನೆ ನೀಡಿದರು.

ಎತ್ತಿನಹೊಳೆ ಯೋಜನೆಯು ಮಂದಗತಿ ಕಾಮಗಾರಿ ಹಾಗೂ ರಣಘಟ್ಟ ಯೋಜನೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ ಎಂದು ಬಿಜೆಪಿ ಸದಸ್ಯ ಎಚ್‌.ಕೆ.ಸುರೇಶ್‌ ಪ್ರಶ್ನೆಗೆ ಉತ್ತರಿಸಿ, ರಣಘಟ್ಟ ಯೋಜನೆಯ ಕಾಲುವೆಯು 5.24 ಕಿಮೀ ನಷ್ಟು ಉದ್ದ ಸುರಂಗ ಮಾರ್ಗದಲ್ಲಿ ಹೋಗಬೇಕು. ಇದರಲ್ಲಿ 2.4 ಕಿಮೀ ನಷ್ಟು ಕಾಮಗಾರಿ ಮುಗಿದಿದೆ. ಎತ್ತಿನಹೊಳೆ ಯೋಜನೆಗೆ 402 ಎಕರೆಯಷ್ಟು ಅರಣ್ಯ ಭೂಮಿಯನ್ನು ಹಾಸನ ಮತ್ತು ತುಮಕೂರು ಭಾಗದಲ್ಲಿ ಸ್ವಾಧೀನ ಪಡಿಸಿಕೊಳ್ಳಬೇಕು ಎಂದರು.

PREV

Recommended Stories

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಬ್ಯಾಲೆಟ್‌ ಬಳಕೆಗೆ ಸುಗ್ರೀವಾಜ್ಞೆ ಅಗತ್ಯವಿಲ್ಲ : ಸಂಪುಟದಲ್ಲಿ ಚರ್ಚೆ