ಜೊಂಡಲಗಟ್ಟಿ ಗ್ರಾಮದ ಸಮಸ್ಯೆ ಪರಿಹಾರಕ್ಕೆ ಕ್ರಮ: ಶಾಸಕ ಪಠಾಣ

KannadaprabhaNewsNetwork |  
Published : Feb 21, 2025, 12:49 AM IST
ಶಿಗ್ಗಾಂವಿ ತಾಲೂಕಿನ ಜೊಂಡಲಗಟ್ಟಿ ಗ್ರಾಮಕ್ಕೆ ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ ಭೇಟಿ ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ಅತಿಕ್ರಮಣ ಜಮೀನುದಾರರಿಗೆ ಪಟ್ಟಾ ನೀಡಲು ಕ್ರಮ ಕೈಗೊಳ್ಳಲಾಗುವುದು. ಕಾಡುಪ್ರಾಣಿಗಳ ಹಾವಳಿ ತಡೆಗೆ ಅರಣ್ಯ ಇಲಾಖೆಯವರಿಗೆ ಸೂಚಿಸಲಾಗುವುದು ಎಂದು ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ ತಿಳಿಸಿದರು.

ಶಿಗ್ಗಾಂವಿ: ತಾಲೂಕಿನ ಗಡಿ ಗ್ರಾಮವಾದ ಜೊಂಡಲಗಟ್ಟಿ ಮೂಲ ಸೌಲಭ್ಯದಿಂದ ವಂಚಿತವಾಗಿದ್ದು, ಗ್ರಾಮಕ್ಕೆ ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ, ಅಪರ ಜಿಲ್ಲಾಧಿಕಾರಿ ಅಪರ ಜಿಲ್ಲಾಧಿಕಾರಿ ಎಲ್. ನಾಗರಾಜ ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಗ್ರಾಮಸ್ಥರು ಮಾತನಾಡಿ, ಗ್ರಾಮದಲ್ಲಿ ಸರಿಯಾಗಿ ಶುದ್ಧ ಕುಡಿಯುವ ಕುಡಿಯುವ ನೀರಿಲ್ಲ. ಸಮರ್ಪಕವಾಗಿ ವಿದ್ಯುತ್ ಸೌಲಭ್ಯವಿಲ್ಲ. ಹಾಗೂ ಗ್ರಾಮದ ಹಲವರು ತಮ್ಮ ಆಸ್ತಿಗಳಿಗೆ ಪಟ್ಟಾ ಇಲ್ಲದೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಅಳಲು ತೋಡಿಕೊಂಡರು.

ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ ಮಾತನಾಡಿ, ಗ್ರಾಮದ ಸಮಸ್ಯೆಗಳು ಗಮನಕ್ಕೆ ಬಂದಿವೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದಿದ್ದರೆ ಸರ್ಕಾರದ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪುವುದಿಲ್ಲ ಎಂದರು.

ಅತಿಕ್ರಮಣ ಜಮೀನುದಾರರಿಗೆ ಪಟ್ಟಾ ನೀಡಲು ಕ್ರಮ ಕೈಗೊಳ್ಳಲಾಗುವುದು. ಕಾಡುಪ್ರಾಣಿಗಳ ಹಾವಳಿ ತಡೆಗೆ ಅರಣ್ಯ ಇಲಾಖೆಯವರಿಗೆ ಸೂಚಿಸಲಾಗುವುದು. ಗ್ರಾಮದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಅಗತ್ಯ ಬಸ್‌ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಲ್. ನಾಗರಾಜ, ಜಿಪಂ ಸಿಇಒ ಅಕ್ಷಯ ಶ್ರೀಧರ, ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ತಹಸೀಲ್ದಾರ್ ರವಿ ಕೊರವರ, ಗ್ರಾಪಂ ಅಧ್ಯಕ್ಷೆ ರಾಜೇಶ್ವರಿ ಲಮಾಣಿ ಇತರರು ಇದ್ದರು.ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಹಾನಗಲ್ಲ: ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಬುಧವಾರ ಮರಾಠಾ ಸಾಮ್ರಾಜ್ಯದ ಸ್ಥಾಪಕ, ಮಹಾನ್ ಪರಾಕ್ರಮಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಯೋಜಿಸಲಾಗಿತ್ತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ಉಪಾಧ್ಯಕ್ಷೆ ವೀಣಾ ಗುಡಿ, ಮಾಜಿ ಅಧ್ಯಕ್ಷ ಯಲ್ಲಪ್ಪ ಕಿತ್ತೂರ, ಮುಖಂಡರಾದ ವಿಷ್ಣುಕಾಂತ ಜಾಧವ, ಶಿವು ಭದ್ರಾವತಿ, ಮೇಕಾಜಿ ಕಲಾಲ, ರಾಜೂ ಗುಡಿ, ಗುಡ್ಡಪ್ಪ ದೊಡ್ಡಕುರುಬರ, ಸುರೇಶ ನಾಗಣ್ಣನವರ, ಬಸವಣ್ಣೆಪ್ಪ ವಾಲಿಕಾರ, ತಾನಾಜಿ ಜಾಧವ, ಪುಟ್ಟಪ್ಪ ಜ್ಯೋತಿಬಾನವರ, ಮಾರ್ಕಂಡಪ್ಪ ಪವಾರ, ಮಂಜು ಮಲಗುಂದ, ಲಿಂಗರಾಜ ಮಡಿವಾಳರ, ವಡಕಪ್ಪ ಬಾರಂಗಿ, ಪರಸಪ್ಪ ನಾಯಕ, ಹನುಮಂತಪ್ಪ ನಾಯಕ ಇದ್ದರು.

PREV

Recommended Stories

ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ