- ಕೃಷಿ ಪರಿಕರ ಮಾರಾಟಗಾರರಿಗೆ ತರಬೇತಿ ಕಾರ್ಯಕ್ರಮದಲ್ಲಿ
ಕನ್ನಡಪ್ರಭ ವಾರ್ತೆ ಜಗಳೂರು
ಕೃಷಿ ಪರಿಕರಗಳನ್ನು ಸರಿಯಾದ ಕ್ರಮದಲ್ಲಿ ಅಗತ್ಯ ದಾಖಲಾತಿ ನಿರ್ವಹಣೆ ಮಾಡಿ, ಎಚ್ಚರಿಕೆಯಿಂದ ವ್ಯವಹಾರ ಮಾಡಬೇಕು. ಒಂದುವೇಳೆ ಸರಿಯಾದ ದಾಖಲೆಗಳನ್ನು ನಿರ್ವಹಿಸಿ, ಕಾನೂನು ಬಾಹಿರವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದರೆ ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೃಷಿ ಇಲಾಖೆ ಅಧಿಕಾರಿಗಳು ಹಿಂದೆ ಮುಂದೆ ನೋಡುವುದಿಲ್ಲ ಎಂದು ಜಿಲ್ಲಾ ಉಪ ಕೃಷಿ ನಿರ್ದೇಶಕ ಅಶೋಕ ಎಸ್. ಎಚ್ಚರಿಕೆ ನೀಡಿದರು.ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಮಂಗಳವಾರ ಜಗಳೂರಿನ ಕೃಷಿ ಇಲಾಖೆ ಕಚೇರಿ ವತಿಯಿಂದ ತಾಲೂಕಿನ ಎಲ್ಲ ಕೃಷಿ ಪರಿಕರ ಮಾರಾಟಗಾರರಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಹಾಯಕ ಕೃಷಿ ನಿರ್ದೇಶಕರಾದ ಎಚ್.ಶ್ವೇತಾ ಮಾತನಾಡಿ, ಉತ್ತಮ ಗುಣಮಟ್ಟದ ಬಿತ್ತನೆಬೀಜ, ಕೀಟನಾಶಕ ಮತ್ತು ರಸಗೊಬ್ಬರಗಳನ್ನು ಜಗಳೂರು ತಾಲೂಕಿನ ರೈತರಿಗೆ ಮಾತ್ರ ನಿಗದಿತ ಬೆಲೆಯಲ್ಲಿ ಸಕಾಲಕ್ಕೆ ನೀಡಬೇಕೆಂದು ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳ ಬಳಕೆ ಮಹತ್ವ ರೈತರಿಗೆ ತಿಳಿಸಲು ಎಲ್ಲ ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು.
ಕೃಷಿ ಇಲಾಖೆಯ ಜಾರಿ ದಳ ಸಹಾಯಕ ಕೃಷಿ ನಿರ್ದೇಶಕ ಬಿ.ವಿ. ಶ್ರೀನಿವಾಸುಲು, ತಾಲೂಕಿನ ಎಲ್ಲ ಕೃಷಿ ಪರಿಕರ ಮಾರಾಟಗಾರರಿಗೆ ಬಿತ್ತನೆಬೀಜ, ಕೀಟನಾಶಕ ಮತ್ತು ರಸಗೊಬ್ಬರ ಕಾಯ್ದೆಗಳ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉಪನ್ಯಾಸ ನೀಡಿದರು.
- - -
ಜಗಳೂರು ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ಕೃಷಿ ಪರಿಕರ ಮಾರಾಟಗಾರರ ತರಬೇತಿ ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಎಚ್.ಶ್ವೇತಾ ಮಾತನಾಡಿದರು.