ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಜಿಲ್ಲಾಧಿಕಾರಿ

KannadaprabhaNewsNetwork |  
Published : May 10, 2026, 01:30 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಕೃಷಿ ಪರಿಕರ ತಯಾರಕರು ಮತ್ತು ಮಾರಾಟಗಾರರ ಜಿಲ್ಲಾ ಮಟ್ಟದ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: 2026 ನೇ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರಗಳ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ರಸಗೊಬ್ಬರ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮಾರಾಟಗಾರರಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು

ದೊಡ್ಡಬಳ್ಳಾಪುರ: 2026 ನೇ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರಗಳ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ರಸಗೊಬ್ಬರ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮಾರಾಟಗಾರರಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ಕೃಷಿ ಪರಿಕರ ತಯಾರಕರ ಮತ್ತು ಮಾರಾಟಗಾರರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ರಸಗೊಬ್ಬರ ಲಭ್ಯತೆಯ ಬಗ್ಗೆ ಅರಿವು ಮೂಡಿಸಲು ಮತ್ತು ರಸಗೊಬ್ಬರಗಳಿಗೆ ಪರ್ಯಾವಾಗಿ ಸಾವಯವ ಗೊಬ್ಬರಗಳನ್ನು ಹೆಚ್ಚು ಬಳಕೆ ಮಾಡುವಂತೆ, ರಸಗೊಬ್ಬರ ಮಾರಾಟ ಮಳಿಗೆಯ ಮುಂದೆ ದಾಸ್ತಾನು ಮತ್ತು ಗರಿಷ್ಠ ಮಾರಾಟ ದರ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಮತ್ತು ಯೂರಿಯಾ ರಸಗೊಬ್ಬರವನ್ನು POS Machineನಲ್ಲಿ ಕಡ್ಡಾಯವಾಗಿ ಮಾರಾಟ ಮಾಡಲು ಕ್ರಮ ವಹಿಸಬೇಕು.

ಜಿಲ್ಲೆಗೆ ಸರಬರಾಜಾಗಿರುವ ರಸಗೊಬ್ಬರಗಳನ್ನು ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡದಂತೆ, ಅಧಿಕೃತ ರಸಗೊಬ್ಬರ ಮಾರಾಟ ಪರವಾನಗೆ ಇಲ್ಲದೆ ರಸಗೊಬ್ಬರ ದಾಸ್ತಾನು ಮತ್ತು ಮಾರಾಟ ಮಾಡದಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಚಿಲ್ಲರೆ ಮಾರಾಟಗಾರರಿಗೆ ತರಬೇತಿ:

ಯೂರಿಯಾವನ್ನು ಕೆ-ಕಿಸಾನ್ ತಂತ್ರಾಂಶದ ಮೂಲಕ ಮಾರಾಟ ಮಾಡಲು ಪ್ರತಿ ತಾಲೂಕಿನಲ್ಲಿ ಚಿಲ್ಲರೆ ಮಾರಾಟಗಾರರಿಗೆ ತರಬೇತಿಗಳನ್ನು ಆಯೋಜಿಸಲು ಸಹಾಯಕ ಕೃಷಿ ನಿರ್ದೇಶಕರಿಗೆ ಡಿಸಿ ಸೂಚಿಸಿದರು.

69,548 ಹೆಕ್ಟೇರ್‌ ಬಿತ್ತನೆ ಗುರಿ:

ಪ್ರಸಕ್ತ ಮುಂಗಾರು ಹಂಗಾಮಿಗೆ 69291 ಹೆಕ್ಟೇರ್ ಆಹಾರಧಾನ್ಯ ಮತ್ತು 257 ಹೆಕ್ಟೇರ್ ಎಣ್ಣೆಕಾಳು ಸೇರಿ ಒಟ್ಟು 69548 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು. ಬಿತ್ತನೆಗೆ ಅನುಗುಣವಾಗಿ ಮಾಹೆವಾರು ಈ ಮುಂಗಾರು ಹಂಗಾಮಿಗೆ ಯೂರಿಯಾ-11418 ಮೆ.ಟನ್, ಡಿಎಪಿ-7567 ಮೆ.ಟನ್, ಎಂಒಪಿ-1354 ಮೆ.ಟನ್, ಎಸ್ಎಸ್ ಪಿ -1086 ಮೆ.ಟನ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳು 14744 ಮೆ.ಟನ್ ಸೇರಿದಂತೆ ಒಟ್ಟು-36169ಮೆ.ಟನ್ ಬೇಡಿಕೆಯಿದೆ.

ಪ್ರಸ್ತುತ ಮಾಹೆಯಲ್ಲಿ 1732ಮೆ.ಟನ್‌ ಡಿಎಪಿ, 1327ಮೆ.ಟನ್ ಯೂರಿಯಾ ಮತ್ತು 2303ಮೆ.ಟನ್ ಕಾಂಪ್ಲೆಕ್ಸ್ ರಸಗೊಬ್ಬರಗಳ ಬೇಡಿಕೆಯಿದೆ. ಈ ಬೇಡಿಕೆ ಪೂರೈಸಲು ಪ್ರಸ್ತುತ 17482 ಮೆ.ಟನ್ ವಿವಿಧ ರಸಗೊಬ್ಬರಗಳ ದಾಸ್ತಾನು ಇರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು.

ಸಭೆಯಲ್ಲಿ ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಯ ವಿವಿಧ ಅಧಿಕಾರಿಗಳು, ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ರಸಗೊಬ್ಬರ ತಯಾರಿಕಾ ಕಂಪನಿಗಳ ಪ್ರತಿನಿಧಿಗಳು ಹಾಗೂ ಜಿಲ್ಲೆಯ ಚಿಲ್ಲರೆ ಮತ್ತು ಸಗಟು ರಸಗೊಬ್ಬರ ಮಾರಾಟಗಾರರು ಭಾಗವಹಿಸಿದ್ದರು.

ಫೋಟೋ-

9ಕೆಡಿಬಿಪಿ4- ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಕೃಷಿ ಪರಿಕರ ತಯಾರಕರು ಮತ್ತು ಮಾರಾಟಗಾರರ ಜಿಲ್ಲಾ ಮಟ್ಟದ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭ್ರಷ್ಟಾಚಾರದ ವಿರುದ್ಧ ವಾಟಾಳ್ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ: ವಾಟಾಳ್ ನಾಗರಾಜ್
ಮಳೆಗಾಗಿ ಪ್ರಾರ್ಥಿಸಿ ಮಳೆರಾಯನ ಹಬ್ಬ ಆಚರಿಸಿದ ಅರಕೆರೆ ಗ್ರಾಮಸ್ಥರು