ಕನ್ನಡಪ್ರಭ ವಾರ್ತೆ ಬೆಟ್ಟದಪುರ
10ನೇ ತರಗತಿಯ ವಿದ್ಯಾರ್ಥಿಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿ ಸ್ವಯಂ ಪ್ರೇರಣೆಯಿಂದ ಕಲಿಯುವವರ ಒಂದು ಗುಂಪು ಶಿಕ್ಷಕರ ಪ್ರೇರಣೆಯಿಂದ ಕಲಿಯುವ ಇನ್ನೊಂದು ಗುಂಪು ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಮತ್ತೊಂದು ಗುಂಪು ಹೀಗೆ ವಿಂಗಡಿಸಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಕಲಿಕೆ ತೆಗೆದುಕೊಳ್ಳುವ ಮೂಲಕ ಇಂದಿನಿಂದಲೇ ಕಲಿಸಬೇಕು, ಪ್ರತಿ ಶಾಲೆಯು ಶೇ. 100ರಷ್ಟು ಫಲಿತಾಂಶ ಪಡೆಯುವಂತೆ ಶ್ರಮಿಸಲು ತಿಳಿಸಿದರು. ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪ್ರಶಾಂತ
ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು, ಆದ್ದರಿಂದ ಶಿಕ್ಷಕರು ವಿವಿಧ ಚಟುವಟಿಕೆಗಳನ್ನು ವಿದ್ಯಾರ್ಥಿಗಳಲ್ಲಿ ಹಮ್ಮಿಕೊಂಡು ಕಲಿಕೆಯನ್ನು ಉಂಟು ಮಾಡುವುದರಿಂದಉತ್ತಮ ಫಲಿತಾಂಶವನ್ನು ನೀಡುವಂತೆ ಕರೆ ನೀಡಿದರು.ಬಡ್ತಿ ಮುಖ್ಯ ಶಿಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷ ದೇಸಿ ಶಂಕರ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ನಾಗಶೆಟ್ಟಿ, ಸಹಶಿಕ್ಷಕರ ಸಂಘದ ಅಧ್ಯಕ್ಷ ಪಿ.ವಿ. ದೇವರಾಜ್, ತಾಲೂಕು ಘಟಕದ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಎಂ. ಮಲ್ಲೇಶ್, ಮುಖ್ಯ ಶಿಕ್ಷಕರಾದ ಸರೋಜಾ ಮತ್ತು ಬಿ.ಆರ್. ನಟರಾಜ್ ತಾಲೂಕು ನೋಡಲ್ ಅಧಿಕಾರಿಗಳಾದ ಗಣೇಶ್, ಎಸ್.ಡಿಎಂಸಿ ಅಧ್ಯಕ್ಷ ಅರುಣ್ ಕುಮಾರ್ ಇದ್ದರು.
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಾಗಶೆಟ್ಟಿ ಮತ್ತು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ವಿ. ದೇವರಾಜ್ ಅವರನ್ನು ಸನ್ಮಾನಿಸಲಾಯಿತು.