ಕನ್ನಡಪ್ರಭ ವಾರ್ತೆ ಮಡಿಕೇರಿ
ತಿತಿಮತಿ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ತಿತಿಮತಿ, ಬಾಳೆಲೆ, ಪೊನ್ನಪ್ಪಸಂತೆ, ಮಾಯಮುಡಿ, ದೇವರಪುರ ಪಂಚಾಯಿತಿಗಳ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾವೇರಿ ತವರು ಕೊಡಗಿಗೂ ಮತ್ತು ಮೈಸೂರು ರಾಜ್ಯಕ್ಕೂ ಅವಿನಾಭಾವ ಸಂಬಂಧವಿದೆ. ಸಂಬಂಧವನ್ನು ಮುಂದುವರಿಸುವ ಉದ್ದೇಶದೊಂದಿಗೆ ಮತ್ತು ಈ ಭಾಗದ ಜನರ ಸೇವೆ ಮಾಡುವ ಆಕಾಂಕ್ಷೆಯೊಂದಿಗೆ ಚುನಾವಣೆ ಕಣಕ್ಕೆ ಇಳಿದಿದ್ದೇನೆ.ಪಕ್ಷದ ಆತ್ಮ ಬಲವಾಗಿರುವ ಕಾರ್ಯಕರ್ತರು ದೇಶ ಮುನ್ನಡೆಸುವ ಮತ್ತು ಅಭಿವೃದ್ಧಿಪಡಿಸುವ ಕರ್ತವ್ಯಕ್ಕಾಗಿ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ರಾಮ ರಾಜ್ಯದ ಕನಸು ನನಸಾಗುತ್ತಾ ಸಾಗುತ್ತಿದೆ. ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಪ್ರಪಂಚಕ್ಕೆ ತಿಳಿಸಲಾಗಿದೆ. ಈ ಕಾರಣಗಳೊಂದಿಗೆ, ಈ ಉದ್ದೇಶಗಳೊಂದಿಗೆ ಮೋದಿ ಸರ್ಕಾರ ಮತ್ತೊಮ್ಮೆ ಈ ದೇಶದಲ್ಲಿ ಮುನ್ನಡೆಯಬೇಕು. ಇದಕ್ಕಾಗಿ ಸರ್ಕಾರದ ಯೋಜನೆಗಳನ್ನ, ಸವಲತ್ತುಗಳನ್ನ ಮತ್ತು ಉದ್ದೇಶಗಳನ್ನ ಜನರಿಗೆ ತಿಳಿಸುವ ಕೆಲಸ ಕಾರ್ಯಕರ್ತರಿಂದ ನಿರಂತರ ಸಾಗಬೇಕಾಗಿದೆ ಎಂದು ಮನವಿ ಮಾಡಿದರು.
ದೇಶದಲ್ಲಿ ಜನರು ಶಾಂತಿಯುತವಾದ ಬದುಕು ನಡೆಸಬೇಕೆಂದರೆ ಮೋದಿ ಸರ್ಕಾರದ ಅಗತ್ಯವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡು ಎಂಟು ತಿಂಗಳ ಅವಧಿಯಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನಕ್ಕೆ ಜಯ ಘೋಷ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ಇಂತಹ ಬೆಳವಣಿಗೆಯನ್ನು ನಿರ್ದಾಕ್ಷಿಣ್ಯವಾಗಿ ತಡೆಯುವ ಹಕ್ಕನ್ನು ಚಲಾಯಿಸಬೇಕಾಗಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿರಾಜಪೇಟೆ ತಾಲೂಕು ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ಜಿಲ್ಲಾ ಉಪಾಧ್ಯಕ್ಷ ಕಿಲನ್ ಗಣಪತಿ, ರಾಜ್ಯ ಶಿಸ್ತು ಸಮಿತಿ ಸದಸ್ಯ ಪಟ್ಟಡ ರೀನಾ ಪ್ರಕಾಶ್, ಮಾಪಂಗಡ ಯಮುನಾ ಚಂಗಪ್ಪ, ಚುನಾವಣಾ ಉಸ್ತುವಾರಿಗಳಾದ ಡಾ. ವಿಕಾಸ್, ಡಾ. ವಸಂತ್ ಕುಮಾರ್, ಪಕ್ಷದ ಮುಖಂಡ ಅಡ್ಡಂಡ ಕಾರ್ಯಪ್ಪ, ಕುಂಞಂಗಡ ಅರುಣ್ ಭೀಮಯ್ಯ, ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಅಜಿತ್ ಕರುಂಬಯ್ಯ, ಮುದ್ದಿಯಡ ಮಂಜು ಗಣಪತಿ, ಶಕ್ತಿ ಕೇಂದ್ರ ಪ್ರಮುಖರು, ಸಹ ಪ್ರಮುಖರು, ಬೂತ್ ಅಧ್ಯಕ್ಷರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಕ್ಷದ ಕಾರ್ಯಕರ್ತರು ಇದ್ದರು.