ಕಾರ್ಯಕರ್ತರಿಗೆ ಯಾವುದೇ ಅಸಮಾಧಾನವಿಲ್ಲ: ನಂಜಯನಮಠ

KannadaprabhaNewsNetwork |  
Published : Jan 28, 2024, 01:19 AM IST
ನಂಜಯ್ಯನಮಠ | Kannada Prabha

ಸಾರಾಂಶ

ಬಾಗಲಕೋಟೆ: ನಿಗಮ ಮಂಡಳಿಗಳಿಗೆ ಸರ್ಕಾರ ಅಧ್ಯಕ್ಷರನ್ನು ನೇಮಿಕ ಮಾಡಿರುವುದು ಜಿಲ್ಲೆಯಲ್ಲಿ ಕಾರ್ಯಕರ್ತರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದ್ದಾರೆ.

ಬಾಗಲಕೋಟೆ: ನಿಗಮ ಮಂಡಳಿಗಳಿಗೆ ಸರ್ಕಾರ ಅಧ್ಯಕ್ಷರನ್ನು ನೇಮಿಕ ಮಾಡಿರುವುದು ಜಿಲ್ಲೆಯಲ್ಲಿ ಕಾರ್ಯಕರ್ತರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದ್ದಾರೆ.

ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ಶಾಸಕ ಮೇಟಿ ಅವರನ್ನು ನೇಮಿಸಿದ್ದಕ್ಕೆ ಅಸಮಾಧಾನ ಹೊಗೆ ಆಡುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ, ಯಾವುದೇ ಅಸಮಾಧಾನವಿಲ್ಲ. ಯಾರಿಗೂ ವಾಗ್ದಾನ ಮಾಡಿಲ್ಲ. ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದೇವೆ. ಆದರೆ ಸರ್ಕಾರ ಈಗಾಗಲೇ ನಿಗಮ ಮಂಡಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ ಎಂದರು.

ಜಿಲ್ಲೆಯಲ್ಲಿ ಬೇರೆ ಪಕ್ಷದಿಂದ ಬರುವವರೂ ಮತ್ತು ನಮ್ಮ ಪಕ್ಷದಿಂದ ಹೊರೆಗಡೆ ಹೋಗುವವರು ಇದ್ದೇ ಇರುತ್ತಾರೆ. ಆದರೆ ಸ್ಥಾನಮಾನ ಬೇಕಾದರೆ ಕಾಯ ಬೇಕಾಗುತ್ತದೆ ಪಕ್ಷ ಯಾರನ್ನೂ ಕೈ ಬಿಡುವುದಿಲ್ಲ. ಸಾಧ್ಯ ಇದ್ದ ಮಟ್ಟಿಗೆ ಅವಕಾಶ ನೀಡುತ್ತದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಸಿನಿಮಾಗಳ ನಿರ್ಮಾಣ ಅರ್ಧಕ್ಕರ್ಧ ಕುಸಿತ!
ಎಸ್ಸೆಸ್ಸೆಲ್ಸಿ: ಎಸ್‌ಬಿಆರ್‌ನ ಇಬ್ಬರು 4ನೇ ರ್‍ಯಾಂಕ್