ನಟ ಶರಣ್, ನಿರ್ದೇಶಕ ತರುಣ ಸುಧೀರ್ ರೋಡ್ ಶೋ

KannadaprabhaNewsNetwork |  
Published : May 02, 2024, 12:17 AM IST
ಕೊಡೇಕಲ್ ಸಮೀಪದ ನಾರಾಯಣಪುರ ಪಟ್ಟಣದಲ್ಲಿ ಸ್ಯಾಂಡಲ್‌ವುಡ್ ನಟ ಶರಣ್ ಹಾಗೂ ನಿರ್ದೇಶಕ ತರುಣ ಸುಧೀರ್ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳಾದ ರಾಜೂಗೌಡ ಮತ್ತು ರಾಜಾ ಅಮರೇಶ್ವರನಾಯಕ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು. | Kannada Prabha

ಸಾರಾಂಶ

ಸ್ಯಾಂಡಲ್‌ವುಡ್ ನಟ ಶರಣ್ ಹಾಗೂ ನಿರ್ದೇಶಕ ತರುಣ ಸುಧೀರ್ ರೋಡ್ ಶೋ ಮೂಲಕ ಸುರಪುರ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ನರಸಿಂಹನಾಯಕ (ರಾಜೂಗೌಡ) ಮತ್ತು ರಾಯಚೂರು ಲೋಕಸಭೆಯ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು.

ಕನ್ನಡಪ್ರಭ ವಾರ್ತೆ ಕೊಡೇಕಲ್

ಸಮೀಪದ ನಾರಾಯಣಪುರ ಪಟ್ಟಣದ ಮೌನೇಶ್ವರ ಕ್ಯಾಂಪಿನಿಂದ ಮಹರ್ಷಿ ವಾಲ್ಮೀಕಿ ವೃತ್ತದವರೆಗೆ ಸ್ಯಾಂಡಲ್‌ವುಡ್ ನಟ ಶರಣ್ ಹಾಗೂ ನಿರ್ದೇಶಕ ತರುಣ ಸುಧೀರ್ ರೋಡ್ ಶೋ ಮೂಲಕ ಸುರಪುರ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ನರಸಿಂಹನಾಯಕ (ರಾಜೂಗೌಡ) ಮತ್ತು ರಾಯಚೂರು ಲೋಕಸಭೆಯ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು.

ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿ ರಾಜೂಗೌಡ ಅವರ ಪುತ್ರ ಮಣಿಕಂಠ ಸೇರಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದರು.

ಈ ವೇಳೆ ಚಿತ್ರನಟ ಶರಣ್ ಮಾತನಾಡಿ, ಸುರಪುರ ಮತಕ್ಷೇತ್ರದ ಸುರಕ್ಷತೆ ಮತ್ತು ಸಮಗ್ರ ಅಭಿವೃದ್ಧಿಗೆ ಹಾಗೂ ಜನಪರ ಕಾಳಜಿ, ರೈತರಿಗಾಗಿ ಮಿಡಿವ ಹೃದಯ ಇರುವ ರಾಜೂಗೌಡ ಅವರನ್ನು ಮೇ 7ರಂದು ನಡೆಯುವ ಸುರಪುರ ವಿಧಾನಸಭೆ ಉಪಚುನಾವಣೆಯಲ್ಲಿ ಅತೀ ಹೆಚ್ಚಿನ ಮತ ಹಾಕಿ ಗೆಲ್ಲಿಸ ತರಬೇಕು ಎಂದು ಮನವಿ ಮಾಡಿದರು.

ನಿರ್ದೇಶಕ ತರುಣ ಸುಧೀರ್ ಮಾತನಾಡಿ, ಮತಕ್ಷೇತ್ರದ ರೈತರು, ಜನತೆ ಬಗ್ಗೆ ಅಪಾರ ಕಳಕಳಿ ಹೊಂದಿರುವ ವ್ಯಕ್ತಿಯಾಗಿರುವ ರಾಜೂಗೌಡ ಅವರನ್ನು ಅತೀ ಹೆಚ್ಚಿನ ಮತಗಳಿಂದ ಗೆಲ್ಲಿಸಿ ತರಬೇಕು. ಜತೆಗೆ ದೇಶದ ಅಭಿವೃದ್ಧಿಗೆ ಹಾಗೂ ಸುಭದ್ರತೆಗಾಗಿ ನರೇಂದ್ರ ಮೋದಿಯವರನ್ನು ಮೂರನೇ ಬಾರಿ ಪ್ರಧಾನಿಯಾಗಿಸಲು ಲೋಕಸಭಾ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರನ್ನು ಕೂಡ ಹೆಚ್ಚಿನ ಮತಗಳಿಂದ ಗೆಲ್ಲಿಸಿ ಪಾರ್ಲಿಮೆಂಟ್‌ಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಟ ಶರಣ್, ನಾನು ಜನ್ಮ ಪಡೆದ ಜಿಲ್ಲೆ ಯಾದಗಿರಿ ಎಂದು ಈ ನೆಲದ ಸಂಬಂಧದ ಬಗ್ಗೆ ಸ್ಮರಿಸಿಕೊಂಡರು. ನಂತರದಲ್ಲಿ ನೆರದಿದ್ದ ಅಭಿಮಾನಿಗಳ ಕೋರಿಕೆಯಂತೆ ಸಿನಿಮಾ ಡೈಲಾಗ್ ಮತ್ತು ಹಾಡೊಂದನ್ನು ಹಾಡಿ ರಂಜಿಸಿದರು. ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.ಸುರಪುರ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ನನ್ನ ತಂದೆ ನರಸಿಂಹನಾಯಕ (ರಾಜೂಗೌಡ) ಅವರನ್ನು ಅತೀ ಹೆಚ್ಚಿನ ಮತಗಳಿಂದ ಗೆಲ್ಲಿಸಿದರೆ ಮುಂದಿನ ನಾಲ್ಕು ವರ್ಷದ 8 ಬೆಳೆಗೆ ನೀರು ಹರಿಸಲು ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ. ಅದನ್ನು ಸಾಕಾರ ಮಾಡಲು ಬಿಜೆಪಿಯನ್ನು ಬೆಂಬಲಿಸಿ.

- ಮಣಿಕಂಠ ನಾಯಕ , ಬಿಜೆಪಿ ಅಭ್ಯರ್ಥಿ ರಾಜೂಗೌಡ ಪುತ್ರ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ