ಕನ್ನಡಪ್ರಭ ವಾರ್ತೆ ಬೆಂಗಳೂರು
ತನಿಖೆ ನಡೆಸುತ್ತಿರುವ ಕೇಂದ್ರ ಗುಪ್ತಚರ ನಿರ್ದೇಶನಾಲಯ, ನಿಗದಿತ ಅವಧಿಯಲ್ಲಿ ತನಿಖೆಯ ಅಂತಿಮ ವರದಿ ಸಲ್ಲಿಸದೇ ಇರುವುದನ್ನು ಪರಿಗಣಿಸಿದ ನ್ಯಾಯಾಲಯ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳು ತಲಾ ಎರಡು ಲಕ್ಷ ರು. ವೈಯುಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತಾ ಖಾತರಿ ನೀಡಬೇಕು. ತನಿಖಾಧಿಕಾರಿಗಳು ಹಾಗೂ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ದೇಶ ಬಿಟ್ಟು ಹೋಗುವಂತಿಲ್ಲ. ಸಾಕ್ಷ್ಯ ನಾಶ ಮಾಡಬಾರದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಷರತ್ತು ವಿಧಿಸಲಾಗಿದೆ.ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ (ಕಾಫಿಪೋಸಾ) ಅಡಿ ಬಂಧನ ಆದೇಶ ಹೊರಡಿಸಿರುವುದರಿಂದ ರನ್ಯಾ ರಾವ್‌ಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ.
ಪ್ರಕರಣದ ಹಿನ್ನೆಲೆ:ಮಾ.3ರಂದು ದುಬೈನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರನ್ಯಾ ಬಳಿ 12.56 ಕೋಟಿ ರು. ಮೌಲ್ಯದ ಅಕ್ರಮ ಚಿನ್ನ ಪತ್ತೆಯಾಗಿದ್ದ ಕಾರಣ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಇದೇ ಪ್ರಕರಣದಲ್ಲಿ ತರುಣ್ ರಾಜು ಮತ್ತು ಸಾಹಿಲ್ ಜೈನ್‌ನನ್ನು ಬಂಧಿಸಿದ್ದರು.