ಕುಡಿಯುವ ನೀರಿನ ಹಾಹಾಕಾರ: ಕಚೇರಿಗೆ ಗ್ರಾಮಸ್ಥರ ಅಲೆದಾಟ

KannadaprabhaNewsNetwork |  
Published : Nov 27, 2026, 02:15 AM IST
ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು. | Kannada Prabha

ಸಾರಾಂಶ

ಕೆರವಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಈ ಕುರಿತು ಅಧಿಕಾರಿಗಳನ್ನು ವಿಚಾರಿಸಿದಾಗ ಪೈಪ್‌ಲೈನ್ ಒಡೆದಿರುವುದಾಗಿ ಉತ್ತರಿಸುತ್ತಿದ್ದಾರೆ.

ಕಾರವಾರ: ಜನಪ್ರತಿನಿಧಿಗಳಿಲ್ಲದೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಲುಕಿರುವ ಕಡವಾಡ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ನಂದವಾಳ ಭಾಗದಲ್ಲಿ ಕಳೆದ 40 ದಿನಗಳಿಂದ ನೀರು ಪೂರೈಕೆಯಾಗದೆ ಜನರು ಪರದಾಡುತ್ತಿದ್ದಾರೆ.ಕೆರವಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಈ ಕುರಿತು ಅಧಿಕಾರಿಗಳನ್ನು ವಿಚಾರಿಸಿದಾಗ ಪೈಪ್‌ಲೈನ್ ಒಡೆದಿರುವುದಾಗಿ ಉತ್ತರಿಸುತ್ತಿದ್ದಾರೆ. ಇನ್ನು ಜಲಜೀವನ ಮಿಷನ್ ಯೋಜನೆಯ ನೀರು ಮೇಲ್ಭಾಗದ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ದೂರುಗಳೂ ಕೇಳಿಬಂದಿವೆ.ಕಡವಾಡ ಹಳೇಕೋಟೆ, ಜನತಾ ಕಾಲನಿ, ನಂದವಾಳ, ಶಾಬಾವಾಡ, ಗೌಡವಾಡ ಹಾಗೂ ಅಂಗಡಿವಾಡ ಸೇರಿದಂತೆ ಹಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ತಿಂಗಳುಗಟ್ಟಲೆ ನೀರು ಪೂರೈಕೆಯಾಗದೆ ಕುಡಿಯುವ ನೀರಿಗಾಗಿ ಜನರು ಪರದಾಡುವಂತಾಗಿದೆ. ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳ ಗಮನಕ್ಕೆ ತಂದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂಬುದು ಗ್ರಾಮಸ್ಥರ ಅಳಲು.ಗ್ರಾಮ ಪಂಚಾಯಿತಿ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಜನಪ್ರತಿನಿಧಿಗಳಿಲ್ಲದಂತಾಗಿದೆ. ಹೀಗಾಗಿ ತಮ್ಮ ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂಬ ಗೊಂದಲ ಗ್ರಾಮಸ್ಥರನ್ನು ಕಾಡುತ್ತಿದೆ. ನಮ್ಮ ಅಧಿಕಾರಾವಧಿ ಮುಗಿದಿದ್ದರೂ ಜನರು ನೀರಿನ ಸಮಸ್ಯೆ ಹೊತ್ತು ನಮ್ಮ ಬಳಿಗೆ ಬರುತ್ತಿದ್ದಾರೆ ಎಂದು ಕಡವಾಡದ ಮಾಜಿ ಅಧ್ಯಕ್ಷ ಆನಂದು ನಾಯ್ಕ ಹಾಗೂ ಮಾಜಿ ಸದಸ್ಯರು ತಿಳಿಸಿದ್ದಾರೆ.ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಗ್ರಾಮಸ್ಥರ ಪರವಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಆನಂದು ನಾಯ್ಕ ಹಾಗೂ ಮಾಜಿ ಸದಸ್ಯರು ಎಚ್ಚರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಗುರಿ
ರೈತರಿಗೆ ಪ್ರತಿ ಟನ್‌ಗೆ ₹3,825 ರಂತೆ ಬಿಲ್ ಪಾವತಿ