ಕೃಷಿ ಜಮೀನು ಫ್ರೂಟ್‌ ತಂತ್ರಾಂಶಕ್ಕೆ ಅಳವಡಿಸಿ

KannadaprabhaNewsNetwork |  
Published : Dec 06, 2024, 08:56 AM IST
೫ಕೆಎಲ್‌ಆರ್-೧೦ಕೋಲಾರದ ಜಿಲ್ಲಾಳಿತ ಭವನದ ಸಭಾಂಗಣದಲ್ಲಿ ಕಂದಾಯ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷ ಮಾತನಾಡಿದರು. | Kannada Prabha

ಸಾರಾಂಶ

ರೈತರೆಲ್ಲರೂ ತಮ್ಮ ಜಮೀನಿನ ನಿಖರವಾದ ಮಾಹಿತಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಫ್ರೂಟ್ ತಂತ್ರಾಂಶದಲ್ಲಿ ಈಗಾಗಲೇ ನೋಂದಣಿ ಮಾಡಲಾಗಿದ್ದು. ಬಾಕಿ ಉಳಿದ ರೈತರು ನೋಂದಣಿ ಕಾರ್ಯವನ್ನು ಈ ತಿಂಗಳ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಕೋಲಾರ ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫ್ರೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ಸೂಚಿಸಿದರು.ನಗರದ ಜಿಲ್ಲಾಳಿತ ಭವನದ ಸಭಾಂಗಣದಲ್ಲಿ ಜರುಗಿದ ಕಂದಾಯ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಪರಿಹಾರ ಮೊತ್ತಗಳನ್ನು ರೈತರಿಗೆ ನೇರವಾಗಿ ಖಾತೆ ಜಮೆ ಮಾಡಲು ಫ್ರೂಟ್ ತಂತ್ರಾಂಶ ಬಳಸಲಾಗುತ್ತಿದೆ ಎಂದರು.

ರೈತರಿಗೆ ಮಾಹಿತಿ ನೀಡಿ

ರೈತರೆಲ್ಲರೂ ತಮ್ಮ ಜಮೀನಿನ ನಿಖರವಾದ ಮಾಹಿತಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಫ್ರೂಟ್ ತಂತ್ರಾಂಶದಲ್ಲಿ ಈಗಾಗಲೇ ನೋಂದಣಿ ಮಾಡಲಾಗಿದ್ದು. ಬಾಕಿ ಉಳಿದ ರೈತರು ನೋಂದಣಿ ಕಾರ್ಯವನ್ನು ಈ ತಿಂಗಳ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದರು.ಡಿಜಿಟಲ್‌ ಸಹಿಗೆ ಅವಕಾಶ

ಬಗರಹುಕುಂ ಅಡಿ ದುರ್ಬಳಕೆ ತಡೆಗಟ್ಟಲು ಮಂಜೂರಾತಿಗೆ ಡಿಜಿಟಲ್ ಸಹಿಗೆ ಅವಕಾಶ ಮಾಡಿಕೊಟ್ಟು ಡಿಜಿಟಲ್ ಸಾಗುವಳಿ ಚೀಟಿಯನ್ನು ನೀಡಲಾಗುತ್ತದೆ, ಈ ಹಿಂದೆ ನೀಡಿದ ಸಾಗುವಳಿ ಚೀಟಿ ನೀಡಿದ ನೈಜತೆಯ ಬಗ್ಗೆ ರಾಜ್ಯದಲ್ಲಿ ಲಕ್ಷಾಂತರ ಪ್ರಕಟಣಗಳು ನ್ಯಾಯಾಲಯದಲ್ಲಿವೇ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಡಿಜಿಟಲಿಕರಣ ಮಾಡಲಾಗುತ್ತಿದೆ ಎಂದರು.ಕಂದಾಯ ಇಲಾಖೆ ಕೆಲಸ ಕಾರ್ಯಗಳೆಲ್ಲವೂ ಚುರುಕುಗೊಳಿಸುವ ನಿಟ್ಟಿನಲ್ಲಿ ನಿಧಾನಗತಿ ತಪ್ಪಿಸಲು ಇ- ಆಫೀಸ ವ್ಯವಸ್ಥೆ ಅಳವಡಿಸಲಾಗಿದೆ. ಅಲ್ಲದೆ ರೆಕಾಡ್ಸ್ ರೂಂನಲ್ಲಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಶಾಶ್ವತವಾಗಿ ದಾಖಲೆಗಳನ್ನು ಉಳಿಸಲು ಡಿಜಿಟಲಿಕರಣ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ, ಉಪವಿಭಾಗಾಧಿಕಾರಿ ಡಾ.ಮೈತ್ರಿ ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ