ಸೆ.೧೩: ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ

KannadaprabhaNewsNetwork |  
Published : Sep 07, 2025, 01:01 AM IST
ಫೋಟೊ: ೬ಪಿಟಿಆರ್-ಪ್ರೆಸ್ಸುದ್ಧಿಗೋಷ್ಠಿಯಲ್ಲಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿದರು.  | Kannada Prabha

ಸಾರಾಂಶ

ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಜೈರಾಜ್ ಬಿ. ರೈ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಶಿಧರ್ ಜಿ.ಎಸ್. ಸಹಾಯಧನ ವಿತರಣೆ ಮಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಕಳೆದ ೨೩ ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ, ದ.ಕ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ೧೫ ಶಾಖೆಗಳನ್ನು ಹೊಂದಿರುವ ಪುತ್ತೂರಿನ ಆದರ್ಶ ವಿವಿಧೊದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾನಿಧಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭ ಸೆ.13ರಂದು ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ನಿರ್ದೇಶಕ ಅಶ್ವಿನ್ ಎಲ್. ಶೆಟ್ಟಿ ತಿಳಿಸಿದ್ದಾರೆ.ಅವರು ಶನಿವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಜೈರಾಜ್ ಬಿ. ರೈ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಶಿಧರ್ ಜಿ.ಎಸ್. ಸಹಾಯಧನ ವಿತರಣೆ ಮಾಡಲಿದ್ದಾರೆ. ಕೈಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ರೈ ಎ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.ಸಂಸ್ಥೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾ ಸಂಸ್ಥೆಯ ನಿಧಿಯಿಂದ ಸಹಾಯಧನ ವಿತರಿಸಿಕೊಂಡು ಬರಲಾಗುತ್ತಿದ್ದು, ಈ ತನಕ ಒಟ್ಟು ೧೨೯೫ ವಿದ್ಯಾರ್ಥಿಗಳಿಗೆ ರು. ೨೬,೨೯,೦೦೦ ವಿತರಣೆ ಮಾಡಲಾಗಿದೆ. ಈ ಬಾರಿ ೭ನೇ ಮತ್ತು ೮ನೇ ತರಗತಿಯಲ್ಲಿ ಕಲಿಯುತ್ತಿರುವ ೨೫೦ ವಿದ್ಯಾರ್ಥಿಗಳಿಗೆ ತಲಾ ೨ ಸಾವಿರದಂತೆ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೊದ್ದೇಶ ಸಹಕಾರ ಸಂಘವು ೨೩ ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿ ೧೫ ಶಾಖೆಗಳ ಮೂಲಕ ನಡೆಸಿಕೊಂಡು ಬರುತ್ತಿದೆ. ೨೦೨೪-೨೫ ಸಾಲಿನ ಆರ್ಥಿಕ ವರ್ಷದಲ್ಲಿ ಸಂಘವು ೮೨೯.೮೮ ಕೋಟಿ ರು. ದಾಖಲೆಯ ವ್ಯವಹಾರವನ್ನು ನಡೆಸಿ, ೨.೦೧ ಕೋಟಿ ರು. ಲಾಭವನ್ನು ಗಳಿಸಿರುತ್ತದೆ. ಸಂಘದ ೨೦೨೪-೨೫ನೇ ಆರ್ಥಿಕ ಸಾಲಿನ ಅಂತ್ಯಕ್ಕೆ ಸಂಘದಲ್ಲಿ ೮೯೧೯ ಸದಸ್ಯರಿದ್ದು, ಒಟ್ಟು ೩.೩೯ ಕೋಟಿ ರು. ಪಾಲು ಬಂಡವಾಳವನ್ನು ಹೊಂದಿದೆ. ೧೫೦.೯೫ ಕೋಟಿ ರು. ಠೇವಣಿ ಹೊಂದಿದ್ದು, ೧೩೩,೬೪ ಕೋಟಿ ರು. ಸಾಲ ವಿತರಿಸಿದೆ. ಸಂಘವು ಸ್ಥಾಪನೆಗೊಂಡ ವರ್ಷದಿಂದ ತನ್ನ ಸದಸ್ಯರಿಗೆ ಡಿವಿಡೆಂಡ್ ನೀಡಿಕೊಂಡು ಬರುತ್ತಿದ್ದು, ಕಳೆದ ವರ್ಷ ಶೇ. ೧೬ ಡಿವಿಡೆಂಡ್ ನೀಡಲಾಗಿದೆ ಎಂದು ತಿಳಿಸಿದರು.ಸಂಘದ ಕೇಂದ್ರ ಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣವು ಪ್ರಗತಿಯಲ್ಲಿದೆ. ಸಂಘವು ೨೫ನೇ ವರ್ಷ ಪೂರೈಸುವ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು. ಪ್ರಸ್ತುತ ವರ್ಷ ಮಂಗಳೂರಿನ ಪಾಂಡೇಶ್ವರದಲ್ಲಿ ಮತ್ತು ಪುತ್ತೂರಿನ ಈಶ್ವರಮಂಗಲದಲ್ಲಿ ೧6ನೇ ಮತ್ತು ೧೭ನೇ ಶಾಖೆಗಳನ್ನು ಅತೀ ಶೀಘ್ರದಲ್ಲಿ ತೆರೆಯಲಾಗುವುದು. ಸಂಘದ ಪ್ರಗತಿ ಮತ್ತು ಸೇವೆಯನ್ನು ಪರಿಗಣಿಸಿ, ೨೦೨೪-೨೫ನೇ ಸಾಲಿನಲ್ಲಿ ಸಂಘವು ತನ್ನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ವಾರ್ಷಿಕ ಮಹಾಸಭೆಯಲ್ಲಿ ‘ಸಾಧನ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಸಂಘವು ೫ನೇ ಸಲ ಈ ಪ್ರಶಸ್ತಿಗೆ ಭಾಜನವಾಗಿದೆ. ಕರ್ನಾಟಕ ಸರ್ಕಾರವು ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಸಂಘಕ್ಕೆ ೨‘ಉತ್ತಮ ವಿವಿಧೊದ್ದೇಶ ಸಹಕಾರಿ ಸಂಘ ಪ್ರಶಸ್ತಿ’ ನೀಡಿ ಗೌರವಿಸಿದೆ. ಸಂಘದಲ್ಲಿ ಗ್ರಾಹಕರಿಗೆ ತ್ವರಿತ ಮತ್ತು ಪಾರದರ್ಶಕ ಸೇವೆಯನ್ನು ನೀಡುವ ಸಲುವಾಗಿ ನೆಫ್ಟ್, ಆರ್.ಟಿ.ಜಿ.ಎಸ್. ಸೌಲಭ್ಯ, ಎಸ್.ಎಂ.ಎಸ್. ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.ಸುದ್ಧಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ, ನಿರ್ದೇಶಕ ಜೈರಾಜ್ ಭಂಡಾರಿ ನೋಣಾಲು, ಮಹಾಪ್ರಬಂಧಕ ವಸಂತ ಜಾಲಾಡಿ ಮತ್ತು ಸಹಾಯಕ ಮಹಾಪ್ರಬಂಧಕ ಸುನಾದ್ ರಾಜ್ ಶೆಟ್ಟಿ ಉಪಸ್ಥಿತರಿದ್ದರು.

PREV

Recommended Stories

ಭಕ್ತರ ಸಹಕಾರದಿಂದ ದೇವಸ್ಥಾನದಲ್ಲಿ ಹೊಸತನ
ಪತ್ನಿ ಮೇಲೆ ಹಲ್ಲೆಗೈದು ಅರ್ಧ ತಲೆ ಬೋಳಿಸಿದ ಪತಿ