ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

KannadaprabhaNewsNetwork |  
Published : Nov 22, 2026, 02:30 AM IST
ಫೋಟೋ: 21ಪಿಟಿಆರ್-ಸವಣೂರು | Kannada Prabha

ಸಾರಾಂಶ

ಪುತ್ತೂರಿನ ಹೆಸರಾಂತ ಸಹಕಾರ ಸಂಘವಾದ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಅವಿಭಜಿತ ಜಿಲ್ಲಾ ಮಟ್ಟದ `ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷರಾದ ‘ಸಹಕಾರಿ ರತ್ನ’ ಸವಣೂರು ಸೀತಾರಾಮ ರೈ ಅವರು ಪ್ರಶಸ್ತಿ ಸ್ವೀಕಾರ ಮಾಡಿದರು.

ಪುತ್ತೂರು: ಪುತ್ತೂರಿನ ಹೆಸರಾಂತ ಸಹಕಾರ ಸಂಘವಾದ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಅವಿಭಜಿತ ಜಿಲ್ಲಾ ಮಟ್ಟದ `ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷರಾದ ‘ಸಹಕಾರಿ ರತ್ನ’ ಸವಣೂರು ಸೀತಾರಾಮ ರೈ ಅವರು ಪ್ರಶಸ್ತಿ ಸ್ವೀಕಾರ ಮಾಡಿದರು. ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73 ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಸಂಘಕ್ಕೆ ಅವಿಭಜಿತ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ ದೇವೆಗೌಡ ಅವರು ಸಂಘದ ಅಧ್ಯಕ್ಷರಾದ ಸವಣೂರು ಸೀತಾರಾಮ ರೈ ಕೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಕರ್ನಾಟಕ ಆರೋಗ್ಯ ಸಚಿವ ಯು.ಟಿ ಖಾದರ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್, ಮಂಗಳೂರು ಸಂಸದರಾದ ಬ್ರಿಜೇಶ್ ಚೌಟ, ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲೊಟ್ಟು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಬೆಳಪು ದೇವಿ ಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಪೊಟ್ಟನ್ ದೇವರ ನೂತನ ಗುಡಿಗೆ ಭೂಮಿ ಪೂಜೆ
ಸರ್ವೇ ಇಲಾಖೆಗೆ ಲೋಕಾಯುಕ್ತ ದಿಢೀರ್ ದಾಳಿ: ಪರಿಶೀಲನೆ