ಆಗಸ್ಟ್ ಒಂದರಂದು ಎಲ್ಲ ತಾಲೂಕುಗಳಲ್ಲಿ ವ್ಯಸನ ಮುಕ್ತ ದಿನಾಚರಣೆ

KannadaprabhaNewsNetwork |  
Published : Jul 27, 2024, 12:51 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ | Kannada Prabha

ಸಾರಾಂಶ

Addiction free day in taluks is celebrating August 1st

-ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ । ಮಾದಕ ವಸ್ತು ಸೇವನೆಯಿಂದಾಗುವ ದುಷ್ಪಾರಿಣಾಮ ಕುರಿತು ಅರಿವು

-----

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಇಳಕಲ್ಲಿನ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಗಸ್ಟ್ ಒಂದರಂದು ಜಿಲ್ಲಾಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಏಕಕಾಲಕ್ಕೆ ಜಾಗೃತಿ ಜಾಥಾ ಏರ್ಪಾಡು ಮಾಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಹಾಗೂ ವ್ಯಸನ ಮುಕ್ತ ಶಿಬಿರ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಆಗಸ್ಟ್ ಒಂದರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮದ ಅಂಗವಾಗಿ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಅಂದು ಬೆಳಿಗ್ಗೆ 9ಕ್ಕೆ ನಗರದ ಒನಕೆ ಓಬವ್ವ ವೃತ್ತದಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಏರ್ಪಡಿಸಬೇಕು. ಜಾಗೃತಿ ಜಾಥಾ ಒನಕೆ ಓಬವ್ವ ವೃತ್ತದಿಂದ ಮದಕರಿ ವೃತ್ತ, ಅಂಬೇಡ್ಕರ್ ವೃತ್ತ, ಪ್ರವಾಸಿ ಮಂದಿರ ಬಳಿಯ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಆವರಣದವರೆಗೆ ನಡೆಸಿ, ಜಾಥಾ ಕಾರ್ಯಕ್ರಮದಲ್ಲಿ ಭಿತ್ತಿಪತ್ರ, ಜಾಗೃತಿ ಘೋಷವಾಕ್ಯಗಳ ಫಲಕಗಳನ್ನು ಪ್ರದರ್ಶಿಸಿ, ಜನರಲ್ಲಿ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು. ಸಂಪನ್ಮೂಲ ವ್ಯಕ್ತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು.

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ ತಿಂಗಳಿನಲ್ಲಿ ಮದ್ಯ ವರ್ಜನ ಶಿಬಿರ ಏರ್ಪಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರಿಗೆ ಸೂಚಿಸಿದರು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮದ್ಯ ಮತ್ತು ಮಾದಕ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಆಗಸ್ಟ್ ತಿಂಗಳಿನಲ್ಲಿಯೇ ವಿಚಾರ ಸಂಕಿರಣ ಹಮ್ಮಿಕೊಳ್ಳುವಂತೆ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಿಳಿಸಿದರು.

ತಾಲೂಕು ಮಟ್ಟದಲ್ಲಿಯೂ ಆಯಾ ತಾಲೂಕಿನ ತಹಸೀಲ್ದಾರರು ಆ.1ರಂದು ವ್ಯಸನಮುಕ್ತ ದಿನಾಚರಣೆ ಹಮ್ಮಿಕೊಂಡು ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು. ಸಂಪನ್ಮೂಲ ವ್ಯಕ್ತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು. ಈಗಾಗಲೆ ತಾಲೂಕುಗಳ ತಹಸೀಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂ ರಾವ್ ಮಾತನಾಡಿ, ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಸುಮಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಗ್ರೇಡ್-2 ತಹಶೀಲ್ದಾರ್ ನಾಗರಾಜ್ ಇದ್ದರು.

-----------

ಪೋಟೋ..

ಚಿತ್ರದುರ್ಗದ ಅಪರ ಜಿಲ್ಲಾಧಿಕಾರಿ ಕಚೇರ ಸಭಾಂಗಣದಲ್ಲಿ ನಡೆದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯಲ್ಲಿ ಎಡಿಸಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

--------

ಫೋಟೋ: 26 ಸಿಟಿಡಿ 1

-------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!