ತಹಸೀಲ್ದಾರ್‌ ಕಚೇರಿಯಲ್ಲಿ ವ್ಯಸನಮುಕ್ತ ದಿನಾಚರಣೆ

KannadaprabhaNewsNetwork |  
Published : Aug 02, 2026, 02:45 AM IST
ರಬಕವಿ-ಬನಹಟ್ಟಿ : ತಹಶೀಲ್ದಾರ ಕಚೇರಿಯಲ್ಲಿ ವ್ಯಸನಮುಕ್ತ ದಿನಾಚರಣೆ. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿಯುವಜನರು ಹಾಗೂ ಸಾರ್ವಜನಿಕರು ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಮತ್ತು ಶಿಸ್ತುಬದ್ಧ ಜೀವನ ನಡೆಸಬೇಕು ಎಂದು ರಬಕವಿ ಬನಹಟ್ಟಿ ತಹಸೀಲ್ದಾರ ಗಿರೀಶ ಸ್ವಾದಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ಯುವಜನರು ಹಾಗೂ ಸಾರ್ವಜನಿಕರು ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಮತ್ತು ಶಿಸ್ತುಬದ್ಧ ಜೀವನ ನಡೆಸಬೇಕು ಎಂದು ರಬಕವಿ ಬನಹಟ್ಟಿ ತಹಸೀಲ್ದಾರ ಗಿರೀಶ ಸ್ವಾದಿ ತಿಳಿಸಿದರು.

ಇಳಕಲ್ ಮಹಾಂತ ಶ್ರೀಗಳ ಜನ್ಮದಿನದ ಅಂಗವಾಗಿ ರಬಕವಿ ಬನಹಟ್ಟಿ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ವ್ಯಸನಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಕುರಿತು ಜನಜಾಗೃತಿ ಮೂಡಿಸುವುದು ಅಗತ್ಯ. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ವ್ಯಸನಮುಕ್ತ ಜೀವನ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಸಂಕಲ್ಪಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕಚೇರಿಯ ಅಧಿಕಾರಿಗಳಾದ ರಾಜಶೇಖರ ಸಾತಿಹಾಳ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಸದಾಶಿವ ಕುಂಬಾರ, ಚೇತನ ಭಜಂತ್ರಿ, ರವಿ ಹುಲನ್ನವರ, ಶಶಿಧರ ಕಡಪಡಿ, ಅಲಿಸಾಬ ತಾಂಬೋಳಿ, ರವಿ ಗಡಿಯಪ್ಪನವರ, ಪ್ರಕಾಶ ವಂದಾಲ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನುಷ್ಯನ ಅಸ್ತಿತ್ವವೇ ಪ್ರಕೃತಿ ಮೇಲಿದೆ
ಡಾ.ಮಹಾಂತ ಶ್ರೀಗಳಿಂದ ಸಮಾಜದಲ್ಲಿ ದೊಡ್ಡ ಪರಿವರ್ತನೆ