ಏ.2 ರಂದು ದೇವರ ದಾಸಿಮಯ್ಯ ಜಯಂತಿ

KannadaprabhaNewsNetwork |  
Published : Mar 19, 2025, 12:33 AM IST
40 | Kannada Prabha

ಸಾರಾಂಶ

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳನ್ನು ಆಚರಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಮಹಾನುಭವರ, ಸಾಧಕರ ಸಂದೇಶಗಳನ್ನು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಿಸಲಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿ ಹಾಗೂ ಭಗವಾನ್ ಮಹಾವೀರ ಜಯಂತಿಗಳ ಆಚರಣೆ ಸಂಬಂಧ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏ.2ರ ಬೆಳಗ್ಗೆ 9.30ಕ್ಕೆ ದೇವರ ದಾಸಿಮಯ್ಯ ಜಯಂತಿ ಅಂಗವಾಗಿ ಮೆರವಣಿಗೆಯನ್ನು ಕೋಟೆ ಆಂಜನೇಯ ದೇವಸ್ಥಾನದಿಂದ ಕಲಾಮಂದಿರವರೆಗೆ ಆಯೋಜಿಸಲಾಗಿದೆ. ಬೆಳಗ್ಗೆ 11.30ಕ್ಕೆ ದೇವರ ದಾಸಿಮಯ್ಯ ಜಯಂತಿಯನ್ನು ಕಲಾಮಂದಿರದಲ್ಲಿ ಆಚರಿಸಲಾಗುವುದು. ಹಾಗೂ ಏ.10ರ ಸಂಜೆ 4ಕ್ಕೆ ಗೀತ ಗಾಯನ, ಸಂಜೆ 6ಕ್ಕೆ ಭಗವಾನ್ ಮಹಾವೀರ ಜಯಂತಿಯನ್ನು ಕಲಾಮಂದಿರದಲ್ಲಿ ಆಚರಿಸಲಾಗುವುದು ಎಂದು ಅವರು ಹೇಳಿದರು.

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳನ್ನು ಆಚರಿಸಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ಅವರು ತಿಳಿಸಿದರು.

ಮೆರವಣಿಗೆ ಪ್ರಾರಂಭವಾಗುವ ಸ್ಥಳವಾದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಾಮಿಯಾನ ಸ್ವಚ್ಛತೆ ಹಾಗೂ ಚೇರ್ ಗಳ ವ್ಯವಸ್ಥೆ ಹಾಗೂ ಜಯಂತಿಗಳು ನಡೆಯುವ ಸ್ಥಳದ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ನಗರ ಪಾಲಿಕೆಯ ವತಿಯಿಂದ ಮಾಡಬೇಕು ಎಂದು ಅವರು ಸೂಚಿಸಿದರು.

ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ಅವರು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಮಾತನಾಡಿ, ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನ್ನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ರದ್ದು ಮಾಡಿ, ನರೇಗಾ ಮರುಸ್ಥಾಪಿಸಿ: ಸಿದ್ದು
ಸಚಿವ ತಿಮ್ಮಾಪುರ ರಾಜೀನಾಮೆಗೆ ಅಹೋರಾತ್ರಿ ಧರಣಿ